ಶಾಲಾ ಪಠ್ಯ ಪುಸ್ತಕಗಳ ಕೇಸರೀಕರಣ ವಿವಾದ: ಮಕ್ಕಳಿಗೆ ‘ನೈಜ ಇತಿಹಾಸ’ ಕಲಿಸುತ್ತೇವೆ ಎಂದ ಶಿಕ್ಷಣ ಸಚಿವ

ಬೆಂಗಳೂರು: ಶಾಲಾ ಪಠ್ಯಪುಸ್ತಕಗಳ ವಿವಾದಾತ್ಮಕ ಪರಿಷ್ಕರಣೆ ಕುರಿತು ಮೌನ ಮುರಿದಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್, ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ “ನೈಜ” ಇತಿಹಾಸವನ್ನು ಕಲಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಶಿಕ್ಷಣವನ್ನು ಕೇಸರಿಕರಣಗೊಳಿಸುವ ಆರೋಪವನ್ನು ತಳ್ಳಿಹಾಕಿದ ಅವರು, “ಕೆಲವು ಬುದ್ಧಿಜೀವಿಗಳು ಮತ್ತು ರಾಜಕಾರಣಿಗಳು ಪರಿಷ್ಕೃತ ಪಠ್ಯಪುಸ್ತಕಗಳನ್ನು ನೋಡದೆಯೆ ಜಾತಿ ರಾಜಕಾರಣ ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದಿದ್ದಾರೆ. ಬರಗೂರು ರಾಮಚಂದ್ರಪ್ಪ ನೇತೃತ್ವದ ಹಿಂದಿನ ಸಮಿತಿಯು ಪರಿಷ್ಕರಿಸಿದ ಪಠ್ಯಪುಸ್ತಕಗಳು ಸುಳ್ಳು ಮತ್ತು ತಪ್ಪು […]

ದಾವೋಸ್‌: ವಿಶ್ವ ಆರ್ಥಿಕ ವೇದಿಕೆಯಲ್ಲಿ ಕರ್ನಾಟಕ ಪೆವಿಲಿಯನ್ ಉದ್ಘಾಟಿಸಿದ ಬೊಮ್ಮಾಯಿ

ದಾವೋಸ್: ದಾವೋಸ್‌ನ ವಿಶ್ವ ಆರ್ಥಿಕ ವೇದಿಕೆಯಲ್ಲಿ ಕರ್ನಾಟಕ ಪೆವಿಲಿಯನ್ ಅನ್ನು ರಾಜ್ಯದ ಮುಖ್ಯಮಂತ್ರಿ ಬಿಎಸ್ ಬೊಮ್ಮಾಯಿ ಉದ್ಘಾಟಿಸಿದರು. ವಿಶ್ವ ಆರ್ಥಿಕ ವೇದಿಕೆ 2022ನಲ್ಲಿ ಭಾಗವಹಿಸಲು ದಾವೋಸ್ ಗೆ ತೆರಳಿರುವ ಬೊಮ್ಮಾಯಿ, ಕರ್ನಾಟಕವು ವಿವಿಧ ಕ್ಷೇತ್ರಗಳಿಗೆ ಬಲವಾದ ಪರಿಸರ ವ್ಯವಸ್ಥೆಯನ್ನು ಹೊಂದಿದೆ ಮತ್ತು ಇಲ್ಲಿನ ಭಾಗವಹಿಸುವಿಕೆಯು ರಾಜ್ಯದ ಪ್ರಮುಖ ಶಕ್ತಿಯನ್ನು ಪ್ರದರ್ಶಿಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

ಶಾಲೆಗಳಲ್ಲಿ ಹುಸಿ ಬಾಂಬ್ ಬೆದರಿಕೆ: ತಮಿಳುನಾಡು ಮೂಲದ 17 ವರ್ಷದ ಬಾಲಕ ಇ-ಮೇಲ್ ಗಳ ಮಾಸ್ಟರ್ ಮೈಂಡ್?

ಬೆಂಗಳೂರು: ಇದೇ ವರ್ಷ ಏಪ್ರಿಲ್ ನಲ್ಲಿ ಬೆಂಗಳೂರಿನ 10ಕ್ಕೂ ಹೆಚ್ಚು ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದ, ಹುಸಿ ಬಾಂಬ್ ಕರೆ‌ ಪ್ರಕರಣದಲ್ಲಿ ಹೊಸ ಮಾಹಿತಿ ಲಭ್ಯವಾಗಿದೆ. 17 ವರ್ಷದ ಬಾಲಕ ಸಿದ್ದಪಡಿಸಿದ್ದ ಸಾಫ್ಟ್ ವೇರ್ ಪ್ರೋಗ್ರಾಂ ಬಳಸಿ ಹುಸಿ ಬಾಂಬ್ ಇ-ಮೇಲ್ ಕಳುಹಿಸಿರುವುದಾಗಿ ತಿಳಿದುಬಂದಿದೆ. ತಮಿಳುನಾಡು ಮೂಲದ 17 ವರ್ಷದ ಬಾಲಕನೊಬ್ಬ ಇ-ಮೇಲ್ ಗಳ ಮಾಸ್ಟರ್ ಮೈಂಡ್ ಆಗಿದ್ದಾನೆ ಎನ್ನಲಾಗಿದೆ. ಹುಸಿ ಬಾಂಬ್ ಕರೆಯ ಕೆಲ‌ದಿನಗಳ ಹಿಂದೆ ಭೋಪಾಲ್ ನ ಕೆಲ ಶಾಲೆಗಳಿಗೂ ದುಷ್ಕರ್ಮಿಗಳು ಇಮೇಲ್ […]

ಸರ್ಕಾರಿ ಪ.ಪೂ ಕಾಲೇಜುಗಳಲ್ಲಿ ಬಂಪರ್ ದಾಖಲಾತಿ: ಪಾಳಿಯಲ್ಲಿ ತರಗತಿಗಳನ್ನು ನಡೆಸಲು ನಿರ್ಧರಿಸಿದ ಸರಕಾರ

ಬೆಂಗಳೂರು: 2022-23ನೇ ಶೈಕ್ಷಣಿಕ ವರ್ಷದಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಪಾಳಿಯ ಆಧಾರದ ಮೇಲೆ ಕಾರ್ಯನಿರ್ವಹಿಸಲಿವೆ ಎಂದು ಪ.ಪೂ ಶಿಕ್ಷಣ ಇಲಾಖೆಯು ತಿಳಿಸಿದೆ. ತನ್ನ ಪ.ಪೂ ಕಾಲೇಜುಗಳಲ್ಲಿ ಪ್ರವೇಶಾತಿಗಿರುವ ಬೇಡಿಕೆಯನ್ನು ಪರಿಗಣಿಸಿ, ಸರ್ಕಾರವು ಎರಡು ಪಾಳಿಯಲ್ಲಿ ತರಗತಿಗಳನ್ನು ನಡೆಸಲು ನಿರ್ಧರಿಸಿದೆ. ಆದಾಗ್ಯೂ, ಈ ವ್ಯವಸ್ಥೆಯು ಹೆಚ್ಚಿನ ಸಂಖ್ಯೆಯ ಪ್ರವೇಶಾತಿಗಳಿರುವ ಕಾಲೇಜುಗಳಿಗೆ ಮಾತ್ರ ಸೀಮಿತವಾಗಿರುತ್ತದೆ. ಸಂಖ್ಯೆ ಎಷ್ಟಿದ್ದರೂ ಸರ್ಕಾರಿ ಪ.ಪೂ ಕಾಲೇಜುಗಳು ಯಾವುದೇ ವಿದ್ಯಾರ್ಥಿಯ ಪ್ರವೇಶವನ್ನು ನಿರಾಕರಿಸುವಂತಿಲ್ಲ. ತರಗತಿಗಳು ಪಾಳಿಯಲ್ಲಿ ನಡೆಯುವುದನ್ನು ದೃಢಪಡಿಸಿದ ಪ್ರಾಥಮಿಕ ಮತ್ತು ಪ್ರೌಢ […]

ಮಹಿಳೆಯರಿಗೆ ಸಿಹಿ ಸುದ್ದಿ: ಹೊರಗುತ್ತಿಗೆ ಸಿಬ್ಬಂದಿಯಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ಕೊಡುವ ಮಹತ್ವದ ಕ್ರಮವಾಗಿ, ಹೊರಗುತ್ತಿಗೆ ಸಿಬ್ಬಂದಿಯಲ್ಲಿ ಮಹಿಳೆಯರಿಗೆ 33% ಮೀಸಲಾತಿಯನ್ನು ಖಚಿತಪಡಿಸಿಕೊಳ್ಳಲು ಕರ್ನಾಟಕ ಸರ್ಕಾರವು ಶುಕ್ರವಾರ ಎಲ್ಲಾ ಇಲಾಖೆಗಳಿಗೆ ನಿರ್ದೇಶನ ನೀಡಿದೆ. ಸರ್ಕಾರವು ನಿಯಮಿತವಾಗಿ ಚಾಲಕರು, ಡೇಟಾ ಎಂಟ್ರಿ ಆಪರೇಟರ್‌ಗಳು, ಹೌಸ್‌ಕೀಪಿಂಗ್ ಸಿಬ್ಬಂದಿ ಮತ್ತು ಗ್ರೂಪ್ ‘ಡಿ’ ಕಾರ್ಮಿಕರನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳುತ್ತದೆ. ಈ ಎಲ್ಲಾ ಕೆಲಸಗಳನ್ನು ನಿಭಾಯಿಸಲು ಮಹಿಳೆಯರು ಸಮಾನವಾಗಿ ಸಮರ್ಥರಾಗಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಶುಕ್ರವಾರ ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೋಲೆಯಲ್ಲಿ ಸೂಚಿಸಿದಂತೆ […]