ವರ್ಗಾವಣೆಗೊಂಡ ಚಿಕ್ಕಮಗಳೂರು ಪೊಲೀಸ್ ಅಧೀಕ್ಷಕಿ ಶೃತಿ ಬೀಳ್ಕೊಡಿಗೆ

ಚಿಕ್ಕಮಗಳೂರು: ಪೊಲೀಸ್ ಇಲಾಖೆಯಲ್ಲಿ ದಕ್ಷ ಹಾಗೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಎನ್.ಎಸ್.ಶೃತಿ ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ವಿವಿಧ ಪಕ್ಷದ ಮುಖಂಡರು ಹಾಜರಿದ್ದರು. ಗೌರವ ಸ್ವೀಕರಿಸಿ ಮಾತನಾಡಿದ ಶೃತಿ, ಜಿಲ್ಲೆಯು ಶಾಂತಿಪ್ರಿಯವಾಗಿದ್ದು ಇಲ್ಲಿ ಸುಮಾರು ಮೂರು ವರ್ಷಕ್ಕೂ ಹೆಚ್ಚಿನ ಅವಧಿಯಿಂದ ಕರ್ತವ್ಯ ನಿರ್ವಹಿಸುತ್ತಿರುವುದು ಖುಷಿ ತಂದಿದೆ. ಹಿಂದೂ-ಮುಸ್ಲಿಂ ಸಮುದಾಯದವರು ಜಿಲ್ಲೆಯಲ್ಲಿ ಉತ್ತಮ ಬಾಂಧವ್ಯ ಹೊಂದಿರುವುದು ಹೆಮ್ಮೆ ತಂದಿದೆ ಎಂದರು. ಕೆಪಿಸಿಸಿ ರಾಜ್ಯ ವಕ್ತಾರ ಹೆಚ್.ಹೆಚ್.ದೇವರಾಜ್ ಮಾತನಾಡಿ, ಪೊಲೀಸ್ ಅಧೀಕ್ಷಕಿ ಶೃತಿ […]

ಕೋವಿಡ್-19 ನಾಲ್ಕನೇ ಅಲೆ ಹಿನ್ನೆಲೆ: ಮತ್ತೆ ಮಾಸ್ಕ್ ಬಳಕೆ ಕಡ್ಡಾಯವೆಂದ ಆರೋಗ್ಯ ಸಚಿವ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ ನಿಯಂತ್ರಣದ ಕುರಿತು ಟಾಸ್ಕ್ ಫೋರ್ಸ್ ಸಭೆ ನಡೆದಿದ್ದು, ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಮಾರ್ಗಸೂಚಿ ಹೊರಡಿಸಲು ಸರ್ಕಾರ ನಿರ್ಧರಿಸಿದೆ. ಸಭೆ ನಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ. ಸುಧಾಕರ್, ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ್ದು, ಕೆಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಇದರಲ್ಲಿ ಕಡ್ಡಾಯ ಮಾಸ್ಕ್ ಧರಿಸುವುದೂ ಒಂದು ಎಂದಿರುವ ಅವರು ಈ ಬಗ್ಗೆ ಶೀಘ್ರವೆ ಮಾರ್ಗಸೂಚಿ ಹೊರಡಿಸುವುದಾಗಿ ತಿಳಿಸಿದ್ದಾರೆ. ಇದರ ಜೊತೆ ಸಭೆ […]

ಬಸ್ ನಿಲ್ದಾಣದಲ್ಲಿ ನವಜಾತ ಶಿಶು ಪತ್ತೆ: ಮಗು ಪಡೆಯಲು ದಂಬಾಲು ಬಿದ್ದ ಜನತೆ!

ಚಾಮರಾಜನಗರ: ಖಾಸಗಿ ಬಸ್ ನಿಲ್ದಾಣದಲ್ಲಿ ನವಜಾತ ಗಂಡು ಮಗುವನ್ನು ಬ್ಯಾಗ್ ನಲ್ಲಿ ಬಿಟ್ಟು ಹೋಗಿರುವ ಮನಕಲಕುವ ಘಟನೆ ಭಾನುವಾರ (ಏಪ್ರಿಲ್ 24) ರಾತ್ರಿ ನಡೆದಿದ್ದು, ಮಗುವನ್ನು ಪಡೆಯಲು ಜನತೆ ದಂಬಾಲು ಬಿದ್ದಿರುವ ಬಗ್ಗೆ ವರದಿಯಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರಿನ ಖಾಸಗಿ ಬಸ್ ನಿಲ್ದಾಣದಲ್ಲಿ ಸುಮಾರು ಏಳು ದಿನಗಳ ಹಿಂದೆ ಜನಿಸಿರುವ ಹಸುಗೂಸೊಂದನ್ನು ಬಿಟ್ಟು ಹೋಗಲಾಗಿದೆ. ಯಾರೂ ಇಲ್ಲದ ಜಾಗದಲ್ಲಿ ಮಗು ಅಳುತ್ತಿದ್ದ ಶಬ್ದ ಕೇಳಿ ಬ್ಯಾಗ್ ಬಳಿ ಬಂದು ನೋಡಿದ ಸಾರ್ವಜನಿಕರಿಗೆ ಬ್ಯಾಗ್ ನೊಳಗೆ ನವಜಾತ ಗಂಡು […]

ಕೊರೊನಾ ನಾಲ್ಕನೇ ಅಲೆ ಆತಂಕ: ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಕುರಿತು ವಿಶೇಷ ಸಭೆ

ಬೆಂಗಳೂರು: ದೇಶದಲ್ಲಿ ಕೊರೊನಾ ನಾಲ್ಕನೇ ಅಲೆಯ ಆತಂಕ ಮತ್ತೆ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಜಾಗೃತಿ ವಹಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ. ಕೇರಳ ಸೇರಿದಂತೆ ಅನೇಕ ಭಾಗಗಳಲ್ಲಿ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಈ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್‌ 27ರಂದು ವಿಡಿಯೋ ಕಾನ್ಫರೆನ್ಸ್‌ ಮೂಲಕ ಸೂಚನೆಯನ್ನು ನೀಡಲಿದ್ದಾರೆ, ಆ ಬಳಿಕ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ. ಇಂದು ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಧ್ಯಾಹ್ನ 12.30 ಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ ಕುರಿತಂತೆ […]

ಉಚಿತ ಪಡಿತರ ಚೀಟಿ ಹೊಸ ನಿಯಮ: ನಿರ್ಲಕ್ಷಿಸಿದರೆ ಗ್ರಾಹಕರಿಗೆ ಮುಂದಿನ ದಿನಗಳಲ್ಲಿ ತೊಂದರೆ

ಬೆಂಗಳೂರು: ಪಡಿತರ ಚೀಟಿ ವ್ಯವಸ್ಥೆಯಲ್ಲಿ ಕೆಲವು ಲೋಪದೋಷಗಳನ್ನು ಗಮನಿಸಿರುವ ಸರ್ಕಾರ ಕೆಲವು ಷರತ್ತುಗಳ ಅಡಿಯಲ್ಲಿ ಗ್ರಾಹಕರು ತಮ್ಮ ಪಡಿತರ ಚೀಟಿಗಳನ್ನು ಸರೆಂಡರ್ ಮಾಡಲು ಹೊಸ ನಿಯಮ ರೂಪಿಸಿದೆ. ಈ ನಿಯಮಗಳನ್ನು ನಿರ್ಲಕ್ಷಿಸಿದಲ್ಲಿ ಮುಂದಿನ ದಿನಗಳಲ್ಲಿ ತೊಂದರೆ ಕಟ್ಟಿಟ್ಟ ಬುತ್ತಿ ಎನ್ನಲಾಗಿದೆ. ದೇಶದಲ್ಲಿ ಯಾರೂ ಕೂಡ ಹಸಿವಿನಿಂದ ಬಳಲಬಾರದೆಂದು ಸರ್ಕಾರದ ವತಿಯಿಂದ ನೀಡಲಾಗುವ ಉಚಿತ ಪಡಿತರದ ಪ್ರಯೋಜನ ಅರ್ಹರಿಗೆ ಲಭ್ಯವಾಗುವುದಕ್ಕಿಂತ ಹೆಚ್ಚಾಗಿ ಅನರ್ಹರೇ ಇದರ ಲಾಭವನ್ನು ಹೆಚ್ಚಾಗಿ ಪಡೆಯುತ್ತಿದ್ದಾರೆ ಎನ್ನುವುದು ಸರಕಾರದ ಗಮನಕ್ಕೆ ಬಂದಿದೆ. ಉಚಿತ ಪಡಿತರ ಯೋಜನೆಗೆ […]