ಪಿಎಸ್ ಐ ನೇಮಕಾತಿ ಪರೀಕ್ಷೆ ಹಗರಣ: ಆಡಿಯೋ ಟೇಪ್ ತನಿಖೆ: ಬೊಮ್ಮಾಯಿ

ಬೆಂಗಳೂರು : ಪಿಎಸ್ ಐ ನೇಮಕಾತಿ ಪರೀಕ್ಷೆ ಹಗರಣ ಸಂಬಂಧ ಮಾಜಿ ಸಚಿವ ಪ್ರಿಯಾಂಕ ಖರ್ಗೆ ಬಿಡುಗಡೆ ಮಾಡಿರುವ ಹೊಸ ಆಡಿಯೋ ಟೇಪ್ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ ಖರ್ಗೆ ಬಿಡುಗಡೆ ಮಾಡಿರುವ ಹೊಸ ಆಡಿಯೋ ಟೇಪ್ ಬಗ್ಗೆಯೂ ತನಿಖೆ ನಡೆಸಲಾಗುವುದು. ನಾನು ಆ ಆಡಿಯೋ ಕೇಳಿಲ್ಲ. ಆಡಿಯೋದಲ್ಲಿ ಇಬ್ಬರ ನಡುವೆ ಮಾತುಕತೆ ನಡೆದಿದೆ. ಆ ಇಬ್ಬರು ಯಾರು? ಎಲ್ಲವೂ ತನಿಖೆ ಆಗುತ್ತದೆ. ತಪ್ಪಿತಸ್ಥರು ಯಾರಾಗಿದ್ದರೂ […]

ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಹಾಗೂ ಕರಾವಳಿ ಸೇರಿದಂತೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದ್ದು, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಇಂದು ಗಾಳಿ, ಮಿಂಚು, ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನೆರಡು ದಿನಗಳಲ್ಲಿ ಮಳೆ ಸುರಿಯುವ ನಿರೀಕ್ಷೆ:ಹವಾಮಾನ ಇಲಾಖೆ ಸೂಚನೆ

ಬೆಂಗಳೂರು:ರಾಜ್ಯದಲ್ಲಿ ಇನ್ನೆರಡು ದಿನಗಳಲ್ಲಿ ದಲ್ಲಿ ಇಷ್ಟುದಿನ ಚಳಿ ವಾತಾವರಣವಿತ್ತು. ಗುಡುಗ ಸಹಿತ ಭಾರೀ ಮಳೆಯಾಗೋ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಹೀಗಾಗಿ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನ ಮಳೆ ಸುರಿಯಲಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿಯೂ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ.ಮಾರ್ಚ್ 9ರವರೆಗೂ ಪಶ್ಚಿಮ ಘಟ್ಟ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹಮಾವಾನ ಇಲಾಖೆ […]

ಯುದ್ಧ ಪೀಡಿತ ಉಕ್ರೇನ್‌ನಿಂದ ತನ್ನ ನಿವಾಸಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ನೋಡಲ್ ಅಧಿಕಾರಿಯನ್ನು ನೇಮಿಸಿದ ರಾಜ್ಯ ಸರ್ಕಾರ

  ಬೆಂಗಳೂರು: ರಷ್ಯಾ-ಉಕ್ರೇನ್ ಯುದ್ಧದ ನಡುವೆ ಕರ್ನಾಟಕ ಸರ್ಕಾರವು ಯುದ್ಧ ಪೀಡಿತ ಪೂರ್ವ ಯುರೋಪಿಯನ್ ರಾಷ್ಟ್ರದಿಂದ ತನ್ನ ನಿವಾಸಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಅನುಕೂಲವಾಗುವಂತೆ ನೋಡಲ್ ಅಧಿಕಾರಿಯನ್ನು ನೇಮಿಸಿ ಆದೇಶ ಹೊರಡಿಸಿದೆ. ಉಕ್ರೇನ್‌ನಲ್ಲಿ ಸಿಲುಕಿರುವ ಕರ್ನಾಟಕದ ನಾಗರಿಕರನ್ನು ಆಯಾಯ ಸ್ಥಳಗಳಿಗೆ ಸುರಕ್ಷಿತವಾಗಿ ತಲುಪಿಸಲು ಅನುಕೂಲವಾಗುವಂತೆ ಕರ್ನಾಟಕ ಸರ್ಕಾರವು ನೋಡಲ್ ಅಧಿಕಾರಿಯನ್ನು ನೇಮಿಸಿದೆ. ನೋಡಲ್ ಕಚೇರಿಯು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಕೀವ್ ನಲ್ಲಿ ಭಾರತದ ರಾಯಭಾರಿ ಕಚೇರಿಯೊಂದಿಗೆ ಸಮನ್ವಯ ಸಾಧಿಸುತ್ತದೆ ಮತ್ತು ಉಕ್ರೇನ್ ನಲ್ಲಿ ಸಿಕ್ಕಿಬಿದ್ದಿರುವ ಜನರನ್ನು ಸ್ಥಳಾಂತರಿಸಲು […]

ಹಿಜಾಬ್ ಪ್ರಕರಣ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರ ವಿರುದ್ದ ಅವಹೇಳನಕಾರಿ ಟ್ವೀಟ್ ನ ರೀಟ್ವೀಟ್: ನಟ ಚೇತನ್ ಬಂಧನ

ಬೆಂಗಳೂರು: ಹಿಜಾಬ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ತ್ರಿಸದಸ್ಯ ಪೀಠದ ಭಾಗವಾಗಿರುವ ನ್ಯಾಯಾಧೀಶರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಕನ್ನಡ ನಟ ಮತ್ತು ಹೋರಾಟಗಾರ ಚೇತನ್ ಕುಮಾರ್ ಅಹಿಂಸನನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ. ನಟನನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಪೊಲೀಸರು ನಟನ ವಿರುದ್ಧ ಐಪಿಸಿ ಸೆಕ್ಷನ್ 505 (ಸಾರ್ವಜನಿಕ ಕಿಡಿಗೇಡಿತನದ ಹೇಳಿಕೆಗಳು) ಮತ್ತು 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಸ್ವಯಂಪ್ರೇರಿತ ಪ್ರಕರಣವನ್ನು ಕೈಗೆತ್ತಿಕೊಂಡಿದ್ದಾರೆ. […]