ಶಿವಮೊಗ್ಗ ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ: ಇಬ್ಬರ ಬಂಧನ

  ಶಿವಮೊಗ್ಗ: ಫೆ. 20 ರಂದು ಶಿವಮೊಗ್ಗ ಜಿಲ್ಲೆಯ ಸೀಗೆ ಹಟ್ಟಿಯಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ(24) ನನ್ನು ಬರ್ಬರವಾಗಿ ಕೊಲೆಗೈಯಲಾಗಿದ್ದು, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಶಿವಮೊಗ್ಗ ಎಡಿಜಿಪಿಎಸ್ ಮುರುಗನ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮುರುಗನ್, ನಗರದಲ್ಲಿ ಕಾನೂನು ಸುವ್ಯವಸ್ಥೆಹದಗೆಡಲು ಬಿಡುವುದಿಲ್ಲ, ಶಾಂತಿ ಕಾಪಾಡಲು ಕ್ರಮ ಕೈಗೊಳ್ಳುತ್ತಿದ್ದೇವೆ ಮತ್ತು ಪರಿಸ್ಥಿತಿಯ ಅವಲೋಕನ ನಡೆಸುತ್ತಿದ್ದೇವೆ. ಜನರು ಶಾಂತಿ ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡಿದರು. ಭಜರಂಗದಳ ಕಾರ್ಯಕರ್ತನ ಹತ್ಯೆಯಿಂದ ಜಿಲ್ಲೆಯಾದ್ಯಂತ ಉದ್ವಿಗ್ನ ಪರಿಸ್ಥಿತಿ […]

ಇಂದಿನಿಂದ ಪ್ರಾಯೋಗಿಕ ಪರೀಕ್ಷೆಗಳು ಶುರು; ಹಾಜರಾಗದವರಿಗೆ ಮರುಪರೀಕ್ಷೆಯೂ ಇಲ್ಲ, ಅಂಕವೂ ಇಲ್ಲ

ಬೆಂಗಳೂರು: ಹಿಜಬ್ ಧರಿಸುವ ಕುರಿತು ಗೊಂದಲಗಳಿಗೆ ತೆರೆ ಎಳೆಯುವ ನಿಟ್ಟಿನಲ್ಲಿ ಹೈಕೋರ್ಟ್ ಮಧ್ಯಂತರ ಆದೇಶವನ್ನು ನೀಡಿದ್ದರೂ ಅದಕ್ಕೆ ಸೊಪ್ಪು ಹಾಕದೆ ಹಿಜಬ್ ಗಾಗಿ ಪಟ್ಟು ಹಿಡಿದು ಕುಳಿತುಬಿಟ್ಟರೆ ಅಂತಹ ವಿದ್ಯಾರ್ಥಿಗಳು ಪ್ರಾಯೋಗಿಕ ಪರೀಕ್ಷೆಗಳಿಗೆ ಹಾಜರಾಗುವ ಅವಕಾಶವನ್ನು ಕಳೆದುಕೊಳ್ಳಲಿರುವುದು ನಿಶ್ಚಿತ. ಫೆ. 21, ಸೋಮವಾರದಿಂದಲೇ ಪ್ರಾಯೋಗಿಕ ಪರೀಕ್ಷೆಗಳು ಶುರುವಾಗಲಿದ್ದು, ಹಿಜಬ್ ಗಾಗಿ ಪಟ್ಟು ಹಿಡಿದಿರುವ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಒಂದು ವೇಳೆ ಪ್ರಾಯೋಗಿಕ ಪರೀಕ್ಷೆಗಳಿಗೆ ಹಾಜರಾಗದಿದ್ದಲ್ಲಿ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. […]

ರಾಜ್ಯದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಂತೆ ಸರ್ವ ಧರ್ಮ ಮುಖಂಡರಿಂದ ಮನವಿ

  ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಗದ್ದಲದ ಮಧ್ಯೆ, ಶನಿವಾರ ವಿವಿಧ ಧರ್ಮಗಳ ಪ್ರಮುಖ ಧಾರ್ಮಿಕ ಮುಖಂಡರು ಸಾಮರಸ್ಯ ಮತ್ತು ಶಾಂತಿಯಿಂದ ಬದುಕುವಂತೆ ಜನರಲ್ಲಿ ಮನವಿ ಮಾಡಿದರು. ಬೆಂಗಳೂರಿನಲ್ಲಿ ಅನೌಪಚಾರಿಕ ಸಭೆ ನಡೆಸಿದ ಸರ್ವ ಧರ್ಮಗಳ ಧಾರ್ಮಿಕ ಮುಖಂಡರು, ಹಿಂದೆಂದಿಗಿಂತಲೂ ಸಮಾಜಕ್ಕೆ ಈಗ ಶಾಂತಿಯ ಅಗತ್ಯ ಹೆಚ್ಚಿದೆ ಎಂದರು. ಚಿತ್ರದುರ್ಗ ಮಠದ ಶಿವಮೂರ್ತಿ ಮುರುಘಾ ಶರಣರು ಮಾತನಾಡಿ, “ಈ ಹಿಜಾಬ್ ವಿವಾದವು ರಾಜ್ಯದ ಜಾತ್ಯತೀತ ರಚನೆಗೆ ಅಡ್ಡಿಪಡಿಸುವ ಮಾನವ ನಿರ್ಮಿತ ಸಂಘರ್ಷವಾಗಿದೆ. ಡ್ರೆಸ್ ಕೋಡ್ ವಿವಾದವು ರಾಜ್ಯಾದ್ಯಂತ […]

ಹೊರರಾಜ್ಯದ ವಾಹನಗಳು ರಾಜ್ಯದ ತೆರಿಗೆ ಪಾವತಿಸದಿದ್ದರೆ ವಾಹನ ಮುಟ್ಟುಗೋಲು

ಉಡುಪಿ: ರಾಜ್ಯದಲ್ಲಿ ಒಂದು ವರ್ಷಕ್ಕಿಂತ ಅಧಿಕ ದಿನಗಳಿಂದ ತೆರಿಗೆ ಪಾವತಿಸದೇ ಹೊರರಾಜ್ಯದ ವಾಹನಗಳು ಓಡಾಡುತ್ತಿರುವುದು ಕಂಡುಬಂದಿದ್ದು, ಹೊರರಾಜ್ಯದ ಮೋಟಾರು ವಾಹನ ಮಾಲೀಕರು ಈ ಪ್ರಕಟಣೆಯ ಒಂದು ವಾರದ ಒಳಗೆ ತಮ್ಮ ವಾಹನಗಳಿಗೆ ರಾಜ್ಯದ ತೆರಿಗೆ ಪಾವತಿಸಲು ಕ್ರಮ ಕೈಗೊಳ್ಳುವಂತೆ ಪಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ.ಗಂಗಾಧರ ಸೂಚನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಹೊರರಾಜ್ಯದ ವಾಹನಗಳು ತೆರಿಗೆ ಪಾವತಿಸದೇ ಜಿಲ್ಲೆಯಲ್ಲಿ ಸಂಚರಿಸುತ್ತಿರುವುದು ಕಂಡುಬಂದಲ್ಲಿ ತಪಾಸಣೆ ವೇಳೆ ವಾಹನವನ್ನು ಮುಟ್ಟುಗೋಲು ಹಾಕಲಾಗುವುದು. ಹೊರರಾಜ್ಯದ ವಾಹನಗಳಿಗೆ ಬಿ.ಹೆಚ್ ಸೀರಿಸ್ ಸಂಖ್ಯೆಯನ್ನು ಪಡೆಯಲು ಇಚ್ಛಿಸುವ […]

ಫೆ.16ರ ವರೆಗೂ ಪಿಯುಸಿ, ಪದವಿ ಕಾಲೇಜುಗಳಿಗೆ ರಜೆ: ಸಚಿವ ಅಶ್ವಥ್ ನಾರಾಯಣ

ಬೆಂಗಳೂರು: ರಾಜ್ಯಾದ್ಯಂತ ನಡೆದಿರುವ ಹಿಜಾಬ್ ಪ್ರಕರಣದ  ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಶಿಕ್ಷಣ ಸಂಸ್ಥೆಗಳಿಗೆ ನೀಡಿದ್ದ ರಜೆಯನ್ನು ಫೆ.16ರವರೆಗೂ ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಬಗ್ಗೆ ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲಾ ವಿಶ್ವವಿದ್ಯಾಲಯಗಳು,  ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಥಮ ದರ್ಜೆ ಕಾಲೇಜುಗಳು, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ಇದು […]