ಕರ್ನಾಟಕದ ಸೂಪರ್ ಮಾರ್ಕೆಟ್ಗಳಲ್ಲಿ ಲಭ್ಯ ಈ ಸೂಪರ್ ಐಟಂ, ಏನಿದು?

ಬೆಂಗಳೂರು: ಕರ್ನಾಟಕ ಸರ್ಕಾರವು ನೆರೆಯ ಮಹಾರಾಷ್ಟ್ರದಂತೆ ಅಂಗಡಿಗಳಲ್ಲಿ ಹಾಗೂ ಸೂಪರ್ ಮಾರ್ಕೆಟ್ ಗಳಲ್ಲಿ ವೈನ್ ಮಾರಾಟಕ್ಕೆ ಅವಕಾಶ ನೀಡಲು ಚಿಂತನೆ ನಡೆಸಿದೆ. ಮಹಾರಾಷ್ಟ್ರ ಕ್ಯಾಬಿನೆಟ್ 100 ಚದರ ಮೀಟರ್ ಪ್ರದೇಶಗಳಲ್ಲಿ ಹರಡಿರುವ ಅಂಗಡಿಗಳು ಹಾಗೂ ಸೂಪರ್ ಮಾರ್ಕೆಟ್ ಗಳಲ್ಲಿ ವೈನ್ ಮಾರಾಟಕ್ಕೆ ಅವಕಾಶ ನೀಡಿದೆ. ಈ ಹೊಸ ಕ್ರಮವು ದ್ರಾಕ್ಷಿ ಬೆಳೆಯುವ ರೈತರಿಗೆ ಹಾಗೂ ಕೈಗಾರಿಕೆಗೆ ಸಹಾಯಕವಾಗಿದೆ. ನಮ್ಮ ಅಧಿಕಾರಿಗಳ ತಂಡವು ಶೀಘ್ರವೇ ಮಹರಾಷ್ಟ್ರಕ್ಕೆ ಭೇಟಿ ನೀಡಿ ಇದರ ಸಾಧಕ-ಭಾದಕಗಳನ್ನು ಅಧ್ಯಯನ ಮಾಡಿ ವರದಿ ನೀಡಲಿದೆ ಎಂದು […]

ಮಂಗಳೂರಿನಲ್ಲಿಯೂ ಕುಸಿತಿದೆ ಗಾಳಿಯ ಗುಣಮಟ್ಟ: ಆತಂಕಕಾರಿ ವರದಿ

ಬೆಂಗಳೂರು: ಬೆಂಗಳೂರು, ಮಂಗಳೂರು ಮತ್ತು ಮೈಸೂರಿನಲ್ಲಿ ಗಾಳಿಯ ಗುಣಮಟ್ಟ ಕುಸಿಯುತ್ತಿರುವ ಆತಂಕಕಾರಿ ಮಾಹಿತಿ ಹೊರ ಬಿದ್ದಿದೆ. ದಕ್ಷಿಣಭಾರತದ 10 ವಾಯುಮಾಲಿನ್ಯ ಪೀಡಿತ ನಗರಗಳ ಪಟ್ಟಿಯಲ್ಲಿ ರಾಜ್ಯದ ಮೂರು ನಗರಗಳು ಸ್ಥಾನ ಪಡೆದಿವೆ. ಪರಿಸರ ಕಾಳಜಿ ಕುರಿತು ಜಾಗೃತಿ ಮೂಡಿಸುವ ಸಂಸ್ಥೆ ಗ್ರೀನ್ ಪೀಸ್ ಇಂಡಿಯಾ ಈ ಮಾಹಿತಿಯನ್ನು ಹೊರಗೆಡವಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ನಡೆಸಿದ ಅಧ್ಯಯನ ವರದಿಯನ್ನು ಗ್ರೀನ್ ಪೀಸ್ ಸಂಸ್ಥೆ ಉಲ್ಲೇಖಿಸಿದೆ.

ಬಿಎಸ್ಸಿ ಆದವರಿಗೆ ಇಲ್ಲಿದೆ ಭರ್ಜರಿ ಜಾಬ್, ರೈಲ್ವೆ ಇಲಾಖೆಯಲ್ಲಿದೆ ಒಂದೊಳ್ಳೆ ಅವಕಾಶ !

ಪೂರ್ವ ಕರಾವಳಿ ರೈಲ್ವೆ(East Coast Railway) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 8 ಫಾರ್ಮಾಸಿಸ್ಟ್, ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗಳು ಖಾಲಿ ಇದ್ದು, 12ನೇ ತರಗತಿ, ಬಿ.ಫಾರ್ಮಾ, ಡಿ.ಫಾರ್ಮಾ, ಬಿಎಸ್ಸಿ ನರ್ಸಿಂಗ್, GNM ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 20ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಆಫ್​ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಲು eastcoastrail.indianrailways.gov.in ಗೆ ಭೇಟಿ ನೀಡಿ. ಹುದ್ದೆಯ […]

ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಮೈಸೂರಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಕೋರ್ಸ್ಗಾಗಿ, ಪಿ.ಜಿ.ಸಿ.ಇ.ಟಿ ಬರೆಯದೆ ಇರುವ ಬಿ.ಇ, ಮೆಕ್ಯಾನಿಕಲ್, ಇಂಡಸ್ಟ್ರಿಯಲ್ ಪ್ರೊಡಕ್ಷನ್, ಆಟೋ ಮೊಬೈಲ್, ಆಟೋಮೇಷನ್, ಮೇರಿನ್ ಇಂಜಿನೀಯರಿಂಗ್ ಮತ್ತು ರೋಬೋಟಿಕ್ಸ್ ಇಂಜಿನೀಯರಿಂಗ್ ಮುಂತಾದವುಗಳಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಎರಡು ವರ್ಷ ಅವಧಿಯ ಎಂ.ಟೆಕ್ ಇನ್ ಟೂಲ್ ಇಂಜಿನೀಯರಿಂಗ್ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ. […]

73ನೇ ಗಣರಾಜ್ಯೋತ್ಸವ ಪರೇಡ್:ಮೈಸೂರು ವಿದ್ಯಾರ್ಥಿನಿ ಎನ್ ಸಿಸಿ ನೇತೃತ್ವ

ಮೈಸೂರು: ಬುಧವಾರದಂದು ದೆಹಲಿಯಲ್ಲಿ ನಡೆಯುವ 73ನೇ ಗಣರಾಜ್ಯೋತ್ಸವ ಆಚರಣೆಯ ಪರೇಡ್‌ನಲ್ಲಿ ಮೈಸೂರಿನ ವಿದ್ಯಾರ್ಥಿನಿಗೆ ಎನ್​ಸಿಸಿ ನೇತೃತ್ವ ವಹಿಸಲಿದ್ದಾರೆ. ಪ್ರಮೀಳಾ ಕುವರ್ ಅವರು ಮೈಸೂರಿನ ವಿವಿ ಮೊಹಲ್ಲಾದ ನಿವಾಸಿಯಾಗಿದ್ದು, ಇವರು ಎನ್​ಸಿಸಿ ಸೀನಿಯರ್ ಅಂಡರ್ ಆಫೀಸರ್ ಆಗಿದ್ದಾರೆ. ಪ್ರಮೀಳಾ ಅವರು ಪ್ರತಾಪ್ ಸಿಂಗ್ ಹಾಗೂ ಪುಷ್ಪಾ ಕುವರ್ ಅವರ ಪುತ್ರಿ. ಇವರ ತಂದೆ ಪ್ರತಾಪ್ ಸಿಂಹ ಅವರು ಮೈಸೂರಿನ ಕಾಳಿದಾಸ ರಸ್ತೆಯಲ್ಲಿ ಟೀ ಅಂಗಡಿ‌ ಇಟ್ಟುಕೊಂಡಿದ್ದಾರೆ. ಪ್ರಮೀಳಾ ಕುವರ್ ಅವರು ಮೈಸೂರಿನ ಮಹಾರಾಣಿ ಕಾಲೇಜಿನ ಬಿಎಸ್ ಸಿ ವಿದ್ಯಾರ್ಥಿನಿ. […]