ಸ್ಕೂಟಿಗೆ ಲಾರಿ ಡಿಕ್ಕಿ: ಖ್ಯಾತ ‘ರಿಯಾಲಿಟಿ ಶೋ’ನ ಸ್ಪರ್ಧಿ ಸಮನ್ವಿ ಮೃತ್ಯು, ಆಕೆಯ ತಾಯಿ ಗಂಭೀರ

ಬೆಂಗಳೂರು: ಬೆಂಗಳೂರಿನ ಕೋಣನಕುಂಟೆ ಬಳಿಯ ವಾಜರಹಳ್ಳಿ ಮುಖ್ಯರಸ್ತೆಯಲ್ಲಿ ಗುರುವಾರ ಸಂಜೆ ನಡೆದ ಅಪಘಾತದಲ್ಲಿ ಕಲರ್ಸ್ ಕನ್ನಡ ವಾಹಿನಿಯ ‘ನನ್ನಮ್ಮ ಸೂಪರ್‌ ಸ್ಟಾರ್’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದ ಬಾಲಕಿ ಸಮನ್ವಿ ಸ್ಥಳದಲ್ಲೇ ಮೃತಪಟ್ಟಿದ್ದು, ಆಕೆಯ ತಾಯಿ ಕಿರುತೆರೆ ನಟಿ ಅಮೃತಾ ನಾಯ್ಡು ಅವರು ಗಂಭೀರಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಕೆಲಸ ನಿಮಿತ್ತ ತಾಯಿ– ಮಗಳು ಸೇರಿ ಟಿವಿಎಸ್ ಸ್ಕೂಟಿಯಲ್ಲಿ ಹೊರಟಿದ್ದಾಗ ಲಾರಿ ಡಿಕ್ಕಿಯಾಗಿ ಅವಘಡ ಸಂಭವಿಸಿದೆ’ ಎಂದು ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ಪೊಲೀಸರು ತಿಳಿಸಿದರು. ಅಪಘಾತಕ್ಕೆ ಕಾರಣವಾದ ಲಾರಿ […]

ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ (ಚಂಪಾ) ನಿಧನ

ಬೆಂಗಳೂರು: ಹಿರಿಯ ಸಾಹಿತಿ, ನಾಟಕಕಾರ, ಕನ್ನಡ ಪರ ಹೋರಾಟಗಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರೂ ಆಗಿದ್ದ ಚಂಪಾ ಎಂದೇ ಪ್ರಸಿದ್ದರಾಗಿದ್ದ ಚಂದ್ರಶೇಖರ ಪಾಟೀಲ (83) ಅವರು ಇಂದು ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಚಂಪಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ 1939ರ ಜೂನ್‌ 18ರಂದು ಚಂಪಾ ಜನಿಸಿದರು. ತಂದೆ ಬಸವರಾಜ ಹಿರೇಗೌಡರು, ತಾಯಿ ಮುರಿಗೆವ್ವ. ಪಾಟೀಲರ ಪ್ರಾರಂಭಿಕ ಶಿಕ್ಷಣ ಹಾವೇರಿಯಲ್ಲಿ ಮತ್ತು ಪ್ರೌಢಶಿಕ್ಷಣ ಧಾರವಾಡದಲ್ಲಿ ನೆರವೇರಿತು. ಇಂಗ್ಲಿಷ್ […]

ವೀಕೆಂಡ್ ಕರ್ಫ್ಯೂ: ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ಬ್ರೇಕ್‌

ಬೆಂಗಳೂರು:  ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಹೇರಲಾಗಿರುವ ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್‌ ನೀಡಿದ್ದು, ವೀಕೆಂಡ್ ಕರ್ಫ್ಯೂ ದಿನಗಳಲ್ಲಿ ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ಬ್ರೇಕ್‌ ಹಾಕಿದೆ. ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಶುಕ್ರವಾರ ರಾತ್ರಿ 8ರಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಹಾಗೂ ಸೋಮವಾರದಿಂದ ಶುಕ್ರವಾರದ ರಾತ್ರಿ 10 ಗಂಟೆವರೆಗೆ ಮದ್ಯ ಮಾರಾಟಕ್ಕೆ ಅವಕಾಶ ಇದೆ. ಆದರೆ ಈ ಅವಧಿಯಲ್ಲಿ ಮದ್ಯದಂಗಡಿಗಳಲ್ಲಿ ಶೇ. 50 […]

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಗುರುವಾರ ಪ್ರಕಟಿಸಿದೆ. ಮಾರ್ಚ್ 28 ರಿಂದ ಏಪ್ರಿಲ್ 11 ರ ವರೆಗೆ ಪರೀಕ್ಷೆ ನಡೆಸಲು ನಿರ್ಧಾರಿಸಲಾಗಿದ್ದು, ಆಕ್ಷೇಪಣೆ ಸಲ್ಲಿಸಲು ಜನವರಿ 14 ರ ವರೆಗೂ ಅವಕಾಶ ನೀಡಲಾಗಿದೆ. ಈ ದಿನಾಂಕದೊಳಗೆ ಯಾವುದೇ ಆಕ್ಷೇಪಣೆ ಸಲ್ಲಿಕೆಯಾಗದಿದ್ದಲ್ಲಿ ವೇಳಾಪಟ್ಟಿಯೇ ಅಂತಿಮ ಎಂದು ತೀರ್ಮಾನಿಸಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ. ಮಾರ್ಚ್ 28- ಪ್ರಥಮ ಭಾಷೆ ಮಾರ್ಚ್ 30- ದ್ವಿತೀಯ ಭಾಷೆ […]

ಅಭಿಮಾನಿಗಳಿಗೆ ಪ್ರೀತಿಯ ಪತ್ರ: ಪತ್ರದಲ್ಲಿ ಪುನೀತ್ ರಾಜಕುಮಾರ್ ಪತ್ನಿ ಹೇಳಿದ್ದೇನು?

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾದಾಗಿನಿಂದಲೂ ಮೌನಕ್ಕೆ ಶರಣಾಗಿದ್ದ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಇದೀಗ ಪತ್ರದ ಮೂಲಕ ತಮ್ಮ ಭಾವನೆಯನ್ನು ನಾಡಿನ ಜನರೊಂದಿಗೆ ಹಂಚಿಕೊಂಡಿದ್ದಾರೆ. ರಾಘವೇಂದ್ರ ರಾಜ್ ಕುಮಾರ್  ತಮ್ಮ ಟ್ವೀಟರ್ ಖಾತೆಯಲ್ಲಿ ಈ ಪತ್ರವನ್ನು ಹಂಚಿಕೊಂಡಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಅಗಲಿಕೆ ನಮಗಷ್ಟೇ ಅಲ್ಲದೇ, ಇಡೀ ರಾಜ್ಯಕ್ಕೆ ಆಘಾತಕಾರಿ ವಿಷಯ. ನಿಷ್ಕಲ್ಮಶ ಪ್ರೀತಿಯಿಂದ, ಅಕ್ಕರೆಯ ಅಭಿಮಾನದಿಂದ ಅವರನ್ನು ಪವರ್ ಸ್ಚಾರ್ ಆಗಿ ರೂಪಿಸಿದ್ದ ನಿಮ್ಮೆಲ್ಲರಿಗೆ […]