ಭಾರತೀಯ ಅಂಚೆ ಇಲಾಖೆಯಲ್ಲಿ ಕ್ರೀಡಾ ಕೋಟಾದಡಿ ಖಾಲಿ ಇದೆ ವಿವಿಧ ಹುದ್ದೆಗಳು:ಅರ್ಜಿ ಸಲ್ಲಿಸಿ

ಭಾರತೀಯ ಅಂಚೆ ಇಲಾಖೆಯಲ್ಲಿ(Indian Postal Department) ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪೋಸ್ಟ್ ಜಾಬ್ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ದೆಹಲಿ ಅಂಚೆ ವೃತ್ತದಲ್ಲಿ(Delhi Post Circle) ಅಂಚೆ ಸಹಾಯಕ, ವಿಂಗಡಣೆ ಸಹಾಯಕ, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಪೋಸ್ಟ್‌ಮ್ಯಾನ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕ್ರೀಡಾ ಕೋಟಾದಲ್ಲಿ ಈ ಹುದ್ದೆಗಳನ್ನು ಬದಲಾಯಿಸಲಾಗುತ್ತಿದ್ದು, ಒಟ್ಟು 221 ಹುದ್ದೆಗಳಿವೆ. ಇವುಗಳು ಕ್ರೀಡಾ ಕೋಟಾದಲ್ಲಿ ಭರ್ತಿ ಮಾಡಲಾಗುತ್ತಿರುವ ಹುದ್ದೆಗಳಾಗಿರುವುದರಿಂದ ಅಧಿಸೂಚನೆಯಲ್ಲಿ ನೀಡಿರುವ ಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡಿದವರು ಮಾತ್ರ ಅರ್ಜಿ ಸಲ್ಲಿಸಬೇಕು. […]
ರಾಜ್ಯದಲ್ಲಿ ಕೊರೋನಾ ಇಳಿಕೆ: ಸಹಜ ಸ್ಥಿತಿಗೆ ಮರಳುತ್ತಿವೆ ಜಿಲ್ಲೆಗಳು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಇಳಿಕೆ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 310 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ 29,82,399ಕ್ಕೆ ಏರಿಕೆಯಾಗಿದೆ. 347 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟಾರೇ ಗುಣಮುಖರಾದವರ ಸಂಖ್ಯೆ 29,34,870ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 9,578 ಸಕ್ರಿಯ ಪ್ರಕರಣಗಳಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ
ಸಾರ್ವಜನಿಕ ಗಣೇಶೋತ್ಸವ ಓಕೆ, ಆದ್ರೆ ಈ ರೂಲ್ಸ್ ಫಾಲೋ ಮಾಡ್ಲೇಬೇಕು ಜೋಕೆ!

ಬೆಂಗಳೂರು: ಹಲವು ಷರತ್ತುಬದ್ಧ ನಿಯಮಗಳೊಂದಿಗೆ ಗರಿಷ್ಠ ಐದು ದಿನಗಳ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ಅನುಮತಿ ಕೊಟ್ಟಿದೆ. ಬೆಂಗಳೂರಿನಲ್ಲಿ ಹಬ್ಬದ ನಿಯಮ ಪಾಲನೆಯ ಉಸ್ತುವಾರಿಯನ್ನು ಬಿಬಿಎಂಪಿಗೆ ವಹಿಸಲಾಗಿದೆ. ಅನುಮತಿ ಕೊಟ್ಟ ಸ್ಥಳಗಳು, ಸರ್ಕಾರಿ, ಖಾಸಗಿ ಖಾಲಿ ಜಾಗಗಳು, ಮೈದಾನಗಳಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆ ಮಾಡಬೇಕು. ದೇವಸ್ಥಾನಗಳಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಆದ್ಯತೆ ನೀಡಲಾಗಿದೆ. ಇನ್ನು, ಬೆಂಗಳೂರು ಮಾತ್ರವಲ್ಲದೇ ಎಲ್ಲಾ ಜಿಲ್ಲೆಗಳಲ್ಲಿ ಗಣೇಶೋತ್ಸವ ವೇಳೆ ಜಿಲ್ಲಾಡಳಿತಗಳು ನಿಗಾ ವಹಿಸಬೇಕು ಎಂದು ಸರ್ಕಾರ ಸೂಚನೆ ನೀಡಿದೆ. ದೇವಸ್ಥಾನ ಮತ್ತು ಮನೆಗಳಲ್ಲಿ ಹೊರತುಪಡಿಸಿ, ಸಾರ್ವಜನಿಕವಾಗಿ […]
ಆಯಿಲ್ ಇಂಡಿಯಾದಲ್ಲಿದೆ ಉದ್ಯೋಗಾವಕಾಶಗಳು:ಈಗಲೇ ಅರ್ಜಿ ಸಲ್ಲಿಸಿ

ನವದೆಹಲಿ:ಆಯಿಲ್ ಇಂಡಿಯಾ ಸಂಸ್ಥೆ 2021ನೇ ಸಾಲಿನ ನೇಮಕಾತಿ ಆರಂಭಿಸಿದೆ. 535 ಫಿಟ್ಟರ್ ಟ್ರೇಡ್, ಬಾಯ್ಲರ್ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಹಾಕಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 23, 2021ರೊಳಗೆ ಸೂಕ್ತ ಅರ್ಜಿ ನಮೂನೆಯೊಂದಿಗೆ ಸಲ್ಲಿಸಬಹುದು. ಹುದ್ದೆ: 535 ಹುದ್ದೆ ಹೆಸರು: Fitter Trade, Boiler Attendant ಉದ್ಯೋಗ ಸ್ಥಳ: ಭಾರತದೆಲ್ಲೆಡೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 23, 2021 ಹುದ್ದೆಗಳು: ಫಿಟ್ಟರ್, ಎಲೆಕ್ಟ್ರಿಷಿಯನ್, ಮೆಕ್ಯಾನಿಕ್ ಮೋಟರ್ ವೆಹಿಕಲ್ […]
ಖಾತೆ ಹಂಚಿಕೆ ವಿಚಾರ; ಗೊಂದಲ ಬಗೆಹರಿಸಲು ಪಕ್ಷದ ಆಂತರಿಕ ವ್ಯವಸ್ಥೆ ಇದೆ: ಸುನಿಲ್ ಕುಮಾರ್

ಉಡುಪಿ: ಬಿಜೆಪಿಯಲ್ಲಿ ಖಾತೆ ಹಂಚಿಕೆಯ ವಿಚಾರಕ್ಕೆ ಸಂಬಂಧಿಸಿದಂತೆ ಬೇಸರಗೊಂಡ ಸಚಿವರನ್ನು ಮುಖ್ಯಮಂತ್ರಿ ಅವರು ಕರೆದು ಮಾತನಾಡುತ್ತಾರೆ. ಸಮಸ್ಯೆ ಬಗೆಹರಿಸಲು ಬಿಜೆಪಿಯಲ್ಲಿ ಆಂತರಿಕ ವ್ಯವಸ್ಥೆ ಇದೆ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ. ಉಡುಪಿಯಲ್ಲಿ ಸೋಮವಾರ ಮಾಧ್ಯಮದ ಜತೆ ಮಾತನಾಡಿದರು. ದೇವೇಗೌಡರು ಹಾಗೂ ಸಿಎಂ ಬೊಮ್ಮಾಯಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಯಾರ ಜೊತೆಗೂ ಕೂಡ ಫ್ರೆಂಡ್ಶಿಪ್ ಇರಬಹುದು, ಆದರೆ ಅದರಿಂದಾಗಿ ಬದ್ಧತೆ ಮತ್ತು ಕಾರ್ಯಶೈಲಿಯಲ್ಲಿ ವ್ಯತ್ಯಾಸಗಳು ಆಗಬಾರದು ಎಂದರು. ಇಲಾಖೆಯ ಹಿತಾಸಕ್ತಿ ಕಾಪಾಡುತ್ತೇವೆ… […]