2024-25ನೇ ಸಾಲಿನ 1 ರಿಂದ10ನೇ ತರಗತಿಯವರೆಗಿನ ಪರಿಷ್ಕೃತ ಪಠ್ಯಪುಸ್ತಕ ಬಿಡುಗಡೆ

ಬೆಂಗಳೂರು: ಕರ್ನಾಟಕ ಪಠ್ಯಪುಸ್ತಕ ಸಮಿತಿಯು 2024-25ನೇ ಸಾಲಿನ 1 ರಿಂದ10ನೇ ತರಗತಿಯವರೆಗೆ ಪಠ್ಯಪುಸ್ತಕಗಳಲ್ಲಿ ಮಾಡಿರುವ ಬದಲಾವಣೆಗಳ ವರದಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಈ ಬಗ್ಗೆ ಅಧಿಕಾರಿಗಳು ದೊಡ್ಡ ಘೋಷಣೆ ಮಾಡದೆ ಸದ್ದಿಲ್ಲದೆ ಸಂಜೆ ತಡವಾಗಿ ಅಧಿಸೂಚನೆ ಹೊರಡಿಸಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯು ನಿವೃತ್ತ ಇತಿಹಾಸ ಪ್ರಾಧ್ಯಾಪಕ ಮಂಜುನಾಥ ಹೆಗಡೆ ನೇತೃತ್ವದಲ್ಲಿ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು-2005 ಕ್ಕೆ ಪೂರಕವಾಗಿ ಪಠ್ಯಕ್ರಮದಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಪಠ್ಯ ಪುಸ್ತಕದಲ್ಲಿ ರಾಜ್ಯದ ಸಾಂಸ್ಕೃತಿಕ ನಾಯಕರನ್ನು ಕೇಂದ್ರೀಕರಿಸಿ ಕನ್ನಡ ಸಾಹಿತ್ಯಕ್ಕೆ ಹೆಚ್ಚಿನ ಒತ್ತು […]
ಆರ್‌ಸಿಬಿ ಆಟಗಾರ್ತಿ ಎಲ್ಲಿಸ್ ಪೆರ್ರಿ ಭರ್ಜರಿ ಸಿಕ್ಸರ್ಗೆ ‘ಪಂಚ್’ ಕಾರಿನ ಗಾಜು ಪುಡಿಪುಡಿ!!

ಬೆಂಗಳೂರು: ಸೋಮವಾರದಂದು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಆಟಗಾರ್ತಿ ಎಲ್ಲಿಸ್ ಪೆರ್ರಿ ಬಾರಿಸಿದ ಆಕರ್ಷಕ ಸಿಕ್ಸರ್ ಗೆ ಮೈದಾನದಲ್ಲಿ ನಿಲ್ಲಿಸಲಾಗಿದ್ದ ಪಂಚ್ ಇವಿ ಕಾರಿನ ಗ್ಲಾಸ್ ಗೆ ಚೆಂಡು ಹೊಡೆದು ಗ್ಲಾಸ್ ಪುಡಿಪುಡಿಯಾಗಿದೆ! 18.5 ಓವರ್ ನಲ್ಲಿ ಬ್ಯಾಟಿಂಗ್ ಮಾಡಿದ ಎಲ್ಲಿಸ್ ಪೆರ್ರಿ ಭರ್ಜರಿ ಸಿಕ್ಸ್ ಬಾರಿಸುವ ಮೂಲಕ ಚೆಂಡು ನೇರವಾಗಿ ಮೈದಾನದಲ್ಲಿ ನಿಲ್ಲಿಸಿದ್ದ ಕಾರಿನ ಕಿಟಕಿಗೆ ಬಡಿದು ಇದರಿಂದ ಕಾರಿನ ಗಾಜು ಒಡೆದಿದೆ. ಕೇವಲ 37 ಎಸೆತಗಳನ್ನು ಎದುರಿಸಿದ […]
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ: ಬಿಜೆಪಿ ಶಾಸಕರ ನಿಯೋಗದಿಂದ ಡಿಜಿ&ಐಜಿಪಿ ಕಚೇರಿಗೆ ಭೇಟಿ; ಮೂವರ ಬಂಧನ

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪದ ಎಫ್ಎಸ್ಎಲ್(FSL) ವರದಿ ಬಹಿರಂಗಪಡಿಸಲು ಬಿಜೆಪಿ ಒತ್ತಾಯಿಸಿದ್ದು,, ಈ ವಿಚಾರವಾಗಿ ಬಿಜೆಪಿ ಶಾಸಕರ ನಿಯೋಗ ಡಿಜಿ&ಐಜಿಪಿ ಕಚೇರಿಗೆ ಭೇಟಿ ನೀಡಿದೆ. ಮೊದಲು FSL ಕಚೇರಿಗೆ ತೆರಳಲು ನಿರ್ಧರಿಸಿದ್ದ ಬಿಜೆಪಿ ನಿಯೋಗ ನಂತರ ಡಿಜಿ&ಐಜಿಪಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದೆ. ಬಿಜೆಪಿ ಶಾಸಕರಾದ ರವಿಸುಬ್ರಹ್ಮಣ್ಯ, ಉದಯ್ ಗರುಡಾಚಾರ್, ಸಿ.ಕೆ.ರಾಮಮೂರ್ತಿ, ಧೀರಜ್ ಮುನಿರಾಜುರಿಂದ ಬೆಂಗಳೂರಿನ ನೃಪತುಂಗರಸ್ತೆಯಲ್ಲಿರುವ ಡಿಜಿ&ಐಜಿಪಿ ಕಚೇರಿ ಭೇಟಿ ನೀಡಿ ಶೀಘ್ರದಲ್ಲೇ FSL ವರದಿ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಬೆಂಗಳೂರಲ್ಲಿ […]
ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ ಎನ್‌ಐಎ ಗೆ ಹಸ್ತಾಂತರ

ಬೆಂಗಳೂರು: ರಾಮೇಶ್ವರಂ ಕೆಫೆ (Rameshwaram Cafe) ಬಾಂಬ್ ಬ್ಲಾಸ್ಟ್ ಪ್ರಕರಣ (Bomb Blast Case) ತನಿಖೆ ರಾಷ್ಟ್ರೀಯ ತನಿಖಾ ದಳಕ್ಕೆ (NIA) ವರ್ಗಾವಣೆಯಾಗಿದೆ. ಸೋಮವಾರ ಮಧ್ಯಾಹ್ನ ಎನ್‌ಐಎ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದಾರೆ. ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಿ ಎಫ್ಐಆರ್ ದಾಖಲಿಸಿದ ಎನ್‌ಐಎ ಇಂದಿನಿಂದ ಸ್ಫೋಟದ ಸಂಪೂರ್ಣ ತನಿಖೆ ಆರಂಭಿಸಲಿದೆ ಎಂದು ವರದಿಯಾಗಿದೆ. ರಾಮೇಶ್ವರಂ ಕೆಫೆಯ ಬ್ರೂಕ್‌ಫೀಲ್ಡ್ ಔಟ್‌ಲೆಟ್‌ನಲ್ಲಿ ಶುಕ್ರವಾರ (ಮಾರ್ಚ್ 1) ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 10 ಜನರು ಗಾಯಗೊಂಡಿದ್ದಾರೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು […]
ಬಾಂಬ್ ಸ್ಪೋಟ ವಿಚಾರದಲ್ಲಿ ರಾಜಕೀಯವಿಲ್ಲ; ಸರ್ಕಾರ ತನಿಖೆಯಲ್ಲಿ ವಿಳಂಬ ತೋರುವುದು ತರವಲ್ಲ: ಬಿ.ವೈ ವಿಜಯೇಂದ್ರ

ಬೆಂಗಳೂರು: ಬಾಂಬ್ ಸ್ಫೋಟ ವಿಷಯದಲ್ಲಿ ಬಿಜೆಪಿ ರಾಜಕಾರಣ ಮಾಡುವುದಿಲ್ಲ. ಒಂದು ಜವಾಬ್ದಾರಿಯುತ ವಿಪಕ್ಷವಾಗಿ ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಸಹಕಾರ ಕೊಡುತ್ತೇವೆ ಎಂದು ಈಗಾಗಲೇ ಹೇಳಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಫ್ಎಸ್ಎಲ್ ವರದಿ ಬಂದಿದೆ. ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು, ದೃಢಪಟ್ಟ ಮಾಹಿತಿ ನಮಗಿದೆ. ಎಲ್ಲೋ ಒಂದು ಕಡೆ ಈ ರಾಜ್ಯ ಸರ್ಕಾರದ ವಿಳಂಬ ನೀತಿ, ನಡವಳಿಕೆ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂಬಂತಿದೆ. ದೇಶದ್ರೋಹಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ […]