ಮರವಂತೆಯಲ್ಲಿ ಹಾನಿಗೊಳಗಾದ ರಸ್ತೆ ನಿರ್ಮಾಣಕ್ಕೆ 3 ಕೋಟಿ ರೂ ತಕ್ಷಣ ಬಿಡುಗಡೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಉಡುಪಿ ಜೂ.19: ಉಡುಪಿ ಜಿಲ್ಲೆಯಲ್ಲಿ ತೌಖ್ತೆ ಚಂಡಮಾರುತದಿAದ ಸಮುದ್ರ ಕೊರೆತ ಉಂಟಾಗಿ ಹಾನಿಗೊಳಗಾದ ಬೈಂದೂರು ತಾಲೂಕು ಮರವಂತೆಯ 1.5 ಕಿಮೀ ರಸ್ತೆಯ ಮರು ನಿರ್ಮಾಣಕ್ಕೆ ತಕ್ಷಣವೇ 3 ಕೋಟಿ ರೂ ಗಳನ್ನು ಬಿಡುಗಡೆಗೊಳಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು.   ಅವರು ಇಂದು ತಮ್ಮ ಗೃಹ ಕಚೇರಿ ಕೃಷ್ಣಾ ದಿಂದ , ರಾಜ್ಯದ ಉತ್ತರ ಒಳನಾಡು, ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಮುಂಗಾರು ಸಮಯದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು , ಸಂಬoದಿಸಿದ […]

ನಾಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಬೆಂಗಳೂರಿಗೆ

ಬೆಂಗಳೂರು: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಬಿಜೆಪಿ ಉಸ್ತುವಾರಿಯಾದ ಅರುಣ್ ಸಿಂಗ್ ಅವರು ಜೂ.16ರಂದು ಬುಧವಾರ ರಾಜ್ಯಕ್ಕೆ ಆಗಮಿಸಲಿದ್ದು, ಅವರ ಪ್ರವಾಸ ವಿವರ ಹೀಗಿದೆ. ಅಂದು ಮಧ್ಯಾಹ್ನ 3.30ಕ್ಕೆ ಅವರು ಬೆಂಗಳೂರು ವಿಮಾನನಿಲ್ದಾಣಕ್ಕೆ ಆಗಮಿಸುವರು. ಸಂಜೆ 4.20ಕ್ಕೆ ಕುಮಾರಕೃಪಾ ಅತಿಥಿಗೃಹಕ್ಕೆ ತೆರಳುವ ಅವರು, ಬಳಿಕ 4.45ಕ್ಕೆ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ತೆರಳುವರು. ಅಲ್ಲಿ 5 ಗಂಟೆಗೆ ರಾಜ್ಯದ ಸಚಿವರ ಜೊತೆ ಸಭೆ ನಡೆಸುವರು. ರಾತ್ರಿ ಅವರು ಕುಮಾರಕೃಪಾ ಅತಿಥಿಗೃಹದಲ್ಲಿ […]

ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಸಹಾಯಧನ ಜುಲೈ 15 ರ ವರೆಗೆ ವಿಸ್ತರಣೆ

ಉಡುಪಿ ಜೂನ್ 4:  ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ  ಮಂಡಳಿ ವತಿಯಿಂದ ನೀಡಲಾಗುವ ವಿವಿಧ ಸಹಾಯಧನ/ಪ್ರೋತ್ಸಾಹಧನ  ಪಡೆಯಲು ನಿಗದಿಗೊಳಿಸಿದ್ದ ಕೊನೆಯ ದಿನಾಂಕವನ್ನು ಜುಲೈ 15 ರ ವರೆಗೆ ವಿಸ್ತರಿಸಲಾಗಿದ್ದು, ಕಾರ್ಮಿಕರು ಇದರ ಪ್ರಯೋಜನ ಪಡೆಯುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ತಿಳಿಸಿದ್ದಾರೆ.

ರೈತರ ಮೊಗದಲ್ಲಿ ಹರ್ಷ ತರಲಿದೆ ಈ ಸಲದ ಮುಂಗಾರು:ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಒಂದೆಡೆ ಕೊರೊನಾ ಮತ್ತೊಂದೆಡೆ  ಚಂಡಮಾರುತದ ಹಾನಿಯ ನಡುವೆಯೂ ರಾಜ್ಯದ ರೈತರ ಮೊಗದಲ್ಲಿ ಹರ್ಷ ತರುವ ಸುದ್ದಿಯೊಂದು ಬಂದಿದೆ. ಮುಂಗಾರು ಮಳೆ ಬರಲು ಕೇವಲ ಎರಡು ವಾರಗಳು ಬಾಕಿ ಇರುವಾಗ, ಕರ್ನಾಟಕ ಹವಾಮಾನ ಇಲಾಖೆಯ ಪ್ರಕಾರ, ರಾಜ್ಯದ ಕೆಲ ಭಾಗಗಳಲ್ಲಿ ಸಾಮಾನ್ಯ ಮತ್ತು ಇನ್ನುಳಿದ ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದ್ದು ಈ ಸಲದ ರೈತರಿಗೆ ಮಳೆ ಮೋಸ ಮಾಡದು ಎಂದಿದೆ. ನೈರುತ್ಯ ಮಾನ್ಸೂನ್ ಜೂನ್ 1 ರೊಳಗೆ ಕೇರಳಕ್ಕೆ ಅಪ್ಪಳಿಸಲಿದೆ ಮತ್ತು […]

ಲಾಕ್ ಡೌನ್ ಮುಂದುವರಿಕೆ ಅನಿವಾರ್ಯವಾಗಲಿದೆ:ಮುರುಗೇಶ್ ನಿರಾಣಿ

ಕಲಬುರಗಿ:ಲಾಕ್ ಡೌನ್ ಮುಂದುವರಿಕೆ ಅನಿವಾರ್ಯವಾಗಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಕೊರೋನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಈಗಾಗಲೇ ಮೇ 24ರವರೆಗೆ ಲಾಕ್ ಡೌನ್ ಜಾರಿಯಲ್ಲಿದ್ದು ಈ ನಡುವೆ ಕೋವಿಡ್ ತಡೆಗಾಗಿ ಲಾಕ್ ಡೌನ್ ವಿಸ್ತರಣೆ ಮಾಡಿದರೇ ಒಳ್ಳೆಯದು ಎಂದವರು ಹೇಳಿದ್ದಾರೆ. ಕಲ್ಬುರ್ಗಿಯಲ್ಲಿ ಮಾತನಾಡಿದ ಸಚಿವ ಮುರುಗೇಶ್ ನಿರಾಣಿ, ಕೊರೋನಾ ತಡೆಗೆ 10 ದಿನಗಳ ಕಾಲ ಲಾಕ್ ಡೌನ್ ಮಾಡಿದರೇ ಉತ್ತಮ. ಈ ಬಗ್ಗೆ ಸಿಎಂಗೆ ತಿಳಿಸಿದ್ದೇವೆ. ಆದರೆ ಸರ್ಕಾರ ಕೈಗೊಳ್ಳುವ ನಿರ್ಧಾರ […]