ಆಧಾರ್ ಕಾರ್ಡ್ ಇಲ್ಲದ ಹಿರಿಯ ನಾಗರಿಕರಿಗೂ ಸಿಗಲಿದೆ ಕೊರೋನಾ ಲಸಿಕೆ

ಬೆಂಗಳೂರು: ಆಧಾರ್ ಕಾರ್ಡ್ ಇಲ್ಲದೆ ಇರುವ ಹಿರಿಯ ನಾಗರಿಕರಿಗೆ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆಯನ್ನು ನೀಡಲು ಆರೋಗ್ಯ  ಸಚಿವರಿಗೆ ಮನವಿ ಮಾಡಲಾಗಿದ್ದು ಶ್ರೀಘ್ರವೇ ಲಸಿಕೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ  ತಿಳಿಸಿದ್ದಾರೆ. ಅವರು ಆರೋಗ್ಯ ಸಚಿವ ಡಾ. ಸುಧಾಕರ್ ಅವರನ್ನು ಭೇಟಿ ಮಾಡಿದ ಶಶಿಕಲಾ ಜೊಲ್ಲೆ, ಸಮಗ್ರ ಮಕ್ಕಳ ರಕ್ಷಣಾ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ  ಸಿಬ್ಬಂದಿ ವರ್ಗದವರನ್ನು ಕೊರೋನಾ ಸೇನಾನಿಗಳೆಂದು ಭಾವಿಸಿ ಅವರಿಗೂ ಲಸಿಕೆ ನೀಡಬೇಕು. ಹೈಕೋರ್ಟ್ ಆದೇಶದಂತೆ ಹಿರಿಯ ನಾಗರಿಕರಿಗೆ ಹಾಗೂ  ವಿಕಲ […]

ರಾಜ್ಯ ದಲ್ಲಿಂದು ಕಡಿಮೆಯಾಯ್ತು ಕೋವಿಡ್ ಪ್ರಕರಣ: ಗುಣಮುಖರಾದವರು ಜಾಸ್ತಿ

ಬೆಂಗಳೂರು: ಇಂದು ಹೊಸ ಕೋವಿಡ್-19 ಪ್ರಕರಣಗಳಿಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದೆ. ಇಂದು 36 ಸಾವಿರದ 475 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಆಸ್ಪತ್ರೆಯಿಂದ ಬಿಡುಗಡೆಯಾದವರ ಒಟ್ಟು ಸಂಖ್ಯೆ 1581457ಕ್ಕೆ ಏರಿಕೆಯಾಗಿದೆ. 31 ಸಾವಿರದ 531 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಕೋವಿಡ್-19 ಸೋಂಕಿನ ಖಚಿತ ಪ್ರಕರಣಗಳ ಒಟ್ಟು ಸಂಖ್ಯೆ 2203462 ಆಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 600147 ಕ್ಕೆ  ಏರಿಕೆಯಾಗಿದೆ.  403 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಸೋಂಕಿನಿಂದ ಒಟ್ಟಾರೇ, ಮೃತಪಟ್ಟವರ ಸಂಖ್ಯೆ 21, 837ಕ್ಕೆ ಏರಿಕೆಯಾಗಿದೆ. […]

ಜಿಲ್ಲಾ ಕೇಂದ್ರಗಳಿಗೂ ಆಕ್ಸಿಜನ್ ಬಸ್ ಸೇವೆ ವಿಸ್ತರಣೆ

ಬೆಂಗಳೂರು: ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ. ವತಿಯಿಂದ ಪ್ರಾರಂಭಿಸಲಾದ ಆಕ್ಸಿಜನ್ ಬಸ್ ಸೇವೆಯು ಅತ್ಯಂತ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಸೇವಾ ಸೌಲಭ್ಯವನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ. ವತಿಯಿಂದ ಪ್ರಾರಂಭಿಸಲಾದ ಆಕ್ಸಿಜನ್ ಬಸ್ ಸೇವೆಯು ಅತ್ಯಂತ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಸೇವಾ ಸೌಲಭ್ಯವನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುತ್ತಿದೆ. ಇದರ ಅಂಗವಾಗಿ ಚಿಕ್ಕಮಗಳೂರಿನಲ್ಲಿಯೂ ಕೆಎಸ್ಆರ್ ಟಿಸಿಯು ಸ್ವಯಂ ಸೇವಾ ಸಂಸ್ಥೆಗಳ  ಸಹಭಾಗಿತ್ವದಲ್ಲಿ ನಾಳೆಯಿಂದ ಬಸ್ಸಿನಲ್ಲಿಯೇ ಆಕ್ಸಿಜನ್ ಘಟಕವನ್ನು ಪ್ರಾರಂಭಿಸಲು ಮುಂದಾಗಿದೆ ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. […]

ರಾಜ್ಯಕ್ಕೆ ಕೋವಿಡ್ ಎರಡನೇ ಅಲೆಯ ಭೀತಿ: ಕಠಿಣ ನಿಯಮದ ಅಸ್ತ್ರ ಪ್ರಯೋಗಿಸಲು ಸರ್ಕಾರ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ದಿನೇ ದಿನೇ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಚಿಂತನೆ ನಡೆಸಿದೆ. ಮಧ್ಯಾಹ್ನದ ವೇಳೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಹೊಸ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಆರೋಗ್ಯ ಸಚಿವ ಡಾ. ಸುಧಾಕರ್ ಈಗಾಗಲೇ ಹೊಸ ಮಾರ್ಗಸೂಚಿ ಪ್ರಕಟಿಸುವ ಬಗ್ಗೆ ಮುನ್ಸೂಚನೆ ನೀಡಿದ್ದಾರೆ. ಬೆಂಗಳೂರು ನಗರದಲ್ಲಿ ಕಳೆದ ಒಂದು ವಾರದಿಂದ 3 ಸಾವಿರ ಕೇಸ್ ಗಳು ದಾಖಲಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಕಠಿಣ ನಿಯಮ ಜಾರಿಗೊಳಿಸಲು […]

ಎಲ್ಲಿ ಜಾರಿತೋ ಮನವು ಎನ್ನುತ್ತಲೇ ಸಾವಿಗೆ ಜಾರಿದ ಕನ್ನಡದ ಖ್ಯಾತ ಸಾಹಿತಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು

ಬೆಂಗಳೂರು: ಎಲ್ಲಿ ಜಾರಿತೋ ಮನವು.. ಎಲ್ಲೆ ಮೀರಿತೋ ಎಂದು ಬರೆದ ಕನ್ನಡದ ಖ್ಯಾತ ಸಾಹಿತಿ, ಖ್ಯಾತ ಕವಿ, ಭಾವಗೀತೆ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದ ಕವಿ ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟ ಅವರು ಕನ್ನಡ ಸಾಹಿತ್ಯ ಲೋಕವನ್ನು ಅಗಲಿದ್ದಾರೆ. ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು ೧೯೩೬ ಅಕ್ಟೋಬರ ೨೯ ರಂದು ಶಿವಮೊಗ್ಗೆಯಲ್ಲಿ ಹುಟ್ಟಿದರು. ಎಂ.ಎ ಪದವಿ ಪಡೆದ ಬಳಿಕ ಭಟ್ಟರು ಭಾಷಾಶಾಸ್ತ್ರ ಸಂಶೋಧಕರಾಗಿ ಎರಡು ವರ್ಷ ಕೆಲಸ ಮಾಡಿ, ತನ್ನಂತರ ಕಾಲೇಜಿನಲ್ಲಿ ಅಧ್ಯಾಪಕರಾದರು.೧೯೯೦ ರಲ್ಲಿ ಆರ್ಟ ಫ್ಯಾಕಲ್ಟಿ ಡೀನ್ ಆದರು.ಭಾವಗೀತೆಯ ಲೋಕಕ್ಕೆ ಹೊಸ ಆಯಾಮ ನೀಡಿದ ಇವರ ಕವಿತೆಗಳು ಕನ್ನಡ […]