ಕುತಂತ್ರ, ಬೆದರಿಕೆಗಳಿಗೆ ಹೆದರುವ ಮಗನೇ ಅಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: “ರಾಜಕೀಯ ಕುತಂತ್ರಕ್ಕೆ ಈ ಡಿ.ಕೆ. ಶಿವಕುಮಾರ್ ಹೆದರುವ ಮಗನೇ ಅಲ್ಲ. ಯಾವುದೇ ಒತ್ತಡಕ್ಕೆ ಹೆದರುವ ಮಗ ಅಲ್ಲ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗುಡುಗಿದ್ದಾರೆ. ಬೆಂಗಳೂರಿನ ಸದಾಶಿವನಗರದ ಮನೆಯಲ್ಲಿ ಇಂದು ಸಿಬಿಐ ತನಿಖೆ ಅಂತ್ಯಗೊಂಡ ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. 30 ವರ್ಷದ ರಾಜಕಾರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. 2017ರಲ್ಲಿ ಗುಜರಾತ್ ಚುನಾವಣೆ ವೇಳೆ ಐಟಿ ಪ್ರಕರಣ ದಾಖಲಿಸಿತು. 2019ರಲ್ಲಿ ಇಡಿ ಕೇಸ್ ಹಾಕಿ ಜೈಲಿಗೆ ಕಳುಹಿಸಿದರು. ಇದೀಗ 2020ರಲ್ಲಿ ಮತ್ತೆ ಸಿಬಿಐ […]

ಡಿಕೆ ಬ್ರದರ್ಸ್ ಮನೆ ಮೇಲೆ ಸಿಬಿಐ ದಾಳಿ: ಮನೆ, ಕಚೇರಿಗಳಲ್ಲಿ ಶೋಧಕಾರ್ಯ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಇಂದು ಬೆಳಿಗ್ಗೆ 6ಗಂಟೆಗೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿ ಇರುವ ಮನೆಗೆ ಸಿಬಿಐ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಐವರು ಸಿಬಿಐ ಅಧಿಕಾರಗಳ ತಂಡ ದಾಳಿ ಮಾಡಿದ್ದು, ಶೋಧ ಕಾರ್ಯ ಮುಂದುವರಿಸಿದ್ದಾರೆ. ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಕಳೆದ ವರ್ಷದ ಸೆಪ್ಟೆಂಬರ್ ನಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆಗ ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಅವರು ಅರೆಸ್ಟ್ ಆಗಿದ್ದರು. ಬಳಿಕ ಕೋರ್ಟ್ ನಿಂದ ಜಾಮೀನಿನ […]

ಯಡಿಯೂರಪ್ಪನವರನ್ನು ಕೆಳಗಿಳಿಸಿ, ದಿ. ಸುರೇಶ್ ಅಂಗಡಿಯವರಿಗೆ ಸಿಎಂ ಪಟ್ಟಕಟ್ಟಲು ಎಲ್ಲ ಸಿದ್ಧತೆ ನಡೆದಿತ್ತು: ಲಿಂಗರಾಜ್ ಪಾಟೀಲ್

ಬೆಂಗಳೂರು: ಇತ್ತೀಚೆಗೆ ನಿಧನರಾದ ಕೇಂದ್ರ ಸಚಿವ ಸುರೇಶ್ ಅಂಗಡಿಯವರಿಗೆ ಸಿಎಂ ಪಟ್ಟ ಕಟ್ಟಲು ಎಲ್ಲ ಸಿದ್ಧತೆ ನಡೆದಿತ್ತು ಎಂದು ಅಂಗಡಿಯವರ ಸೋದರ ಮಾವ ಲಿಂಗರಾಜ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಾಲ್ಕು ತಿಂಗಳ ಹಿಂದೆ ದೆಹಲಿಯಲ್ಲಿ ಕರ್ನಾಟಕದ ಉಸ್ತುವಾರಿಯಾಗಿದ್ದ ಮುರಳೀಧರ್ ರಾವ್ ಅವರ ನೇತೃತ್ವದಲ್ಲಿ ರಹಸ್ಯ ಸಭೆ ನಡೆದಿತ್ತು. ಅದರಲ್ಲಿ ನಾನು ಕೂಡ ಭಾಗಿಯಾಗಿದ್ದೆ ಎಂದು ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದಾರೆ. ಯಡಿಯೂರಪ್ಪನವರಿಗೆ ಪರ್ಯಾಯವಾಗಿ ಅದೇ ಸಮುದಾಯದ ಬೆಳಗಾವಿ ಸಹಿತ ಉತ್ತರ […]

ನಮ್ಮಿಂದ ತಪ್ಪುಗಳಾಗಿದ್ದರೆ ಸಾಬೀತುಪಡಿಸಿ, ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ; ವಿಪಕ್ಷ ನಾಯಕರಿಗೆ ಸವಾಲೆಸೆದ ಸಿಎಂ

ಬೆಂಗಳೂರು: ನಮ್ಮಿಂದ ತಪ್ಪುಗಳಾಗಿದ್ದರೆ ಸಾಬೀತುಪಡಿಸಿ. ನಮ್ಮ ತಪ್ಪು ಸಾಬೀತಾದ್ರೆ ನಾನು ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಪಕ್ಷ ಕಾಂಗ್ರೆಸ್ ನಾಯಕರಿಗೆ ಸಾವಲೆಸೆದರು. ವಿಜಯೇಂದ್ರ (ಯಡಿಯೂರಪ್ಪ ಪುತ್ರ) ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂಬ ಕಾಂಗ್ರೆಸ್ ಆರೋಪಕ್ಕೆ ಇಂದು ವಿಧಾನಸಭೆಯಲ್ಲಿ ಅವಿಶ್ವಾಸ ಗೊತ್ತುವಳಿಯ ಮೇಲಿನ ಚರ್ಚೆ ಸಂದರ್ಭದಲ್ಲಿ ಅವರು ಖಡಕ್ ಆಗಿ ಉತ್ತರಿಸಿದರು. ವಿಪಕ್ಷ ನಾಯಕರ ಟೀಕೆಗಳಿಗೆ ಸ್ವಲ್ಪ ಖಾರವಾಗಿಯೇ ಉತ್ತರಿಸಿದ ಸಿಎಂ, ಮುಂದಿನ ಚುನಾವಣೆಯಲ್ಲಿ ನಾವು 135 ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತೇವೆ. ಮುಂದಿನ 10 ವರ್ಷಗಳ ಕಾಲ […]

ಎಸ್ಪಿ ಕಚೇರಿಯಲ್ಲೇ ಹೆಣ್ಣು ಮಗುವಿಗೆ ಜನ್ಮ ಕೊಟ್ಟ ಅಪ್ರಾಪ್ತ ಬಾಲಕಿ

ಪಾಟ್ನಾ: ಅಪ್ರಾಪ್ತ ಬಾಲಕಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಬಿಹಾರ ಪಾಟ್ನಾದ ಕಿಶಾನ್ ಗಂಜ್ ಎಸ್ ಪಿ ಕಚೇರಿಯಲ್ಲಿ ಗುರುವಾರ ಸಂಜೆ ನಡೆದಿದೆ. ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ ಈಕೆಗೆ ನಿರಂತರ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ. ಬಾಲಕಿ ನ್ಯಾಯ ಕೇಳಲು ಎಸ್ಪಿ ಕಚೇರಿಗೆ ಹೋದದಂತಹ ಸಂದರ್ಭದಲ್ಲಿ ಅಲ್ಲಿಯೇ ಆಕೆಗೆ ಹೆರಿಗೆ ಆಗಿದೆ ಎಂದು ತಿಳಿದುಬಂದಿದೆ. ಪಹಾದಕಟ್ಟಾ ಪೊಲೀಸ್ ಠಾಣೆ ವ್ಯಾಪ್ತಿಯ ನೆರೆಯ ಹಳ್ಳಿಯ ಮುನ್ನಾ ಕುಮಾರ್ ಎಂಬ ಯುವಕ, ಪ್ರೀತಿಯ ನೆಪದಲ್ಲಿ ಈಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದು, ಆಕೆ […]