ಸಹಕಾರಿ ಬ್ಯಾಂಕ್ ಗಳನ್ನು ಆರ್ ಬಿಐ ಸುಪರ್ದಿಗೆ ತರುವ ಬ್ಯಾಂಕಿಂಗ್ ನಿಯಂತ್ರಣ (ತಿದ್ದುಪಡಿ) ಮಸೂದೆ ಅಂಗೀಕಾರ

ನವದೆಹಲಿ: ಸಹಕಾರಿ ಬ್ಯಾಂಕ್ ಗಳನ್ನು ಆರ್ ಬಿಐ ಸುಪರ್ದಿಗೆ ತಂದು ಬಲಪಡಿಸಲು ಉದ್ದೇಶಿಸಿರುವ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ತರುವ ಕರಡು ಮಸೂದೆಗೆ ಸಂಸತ್ತು ಮಂಗಳವಾರ ಅನುಮೋದನೆ ನೀಡಿದೆ. ಬ್ಯಾಂಕಿಂಗ್ ನಿಯಂತ್ರಣ (ತಿದ್ದುಪಡಿ) ಮಸೂದೆ 2020 ಅನ್ನು ಸುಗ್ರೀವಾಜ್ಞೆಯ ಬದಲಿಗೆ ರಾಜ್ಯಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಯಿತು. ಬಂಡವಾಳಕ್ಕೆ ಅವಕಾಶ, ಆಡಳಿತ ಸುಧಾರಣೆ ಮತ್ತು ಆರ್ ಬಿಐ ಮೂಲಕ ಸದೃಢ ಬ್ಯಾಂಕಿಂಗ್ ವ್ಯವಸ್ಥೆಯನ್ನು ಖಾತ್ರಿಪಡಿಸುವ ಮೂಲಕ ಸಹಕಾರಿ ಬ್ಯಾಂಕ್ ಗಳನ್ನು ಬಲಪಡಿಸಲು ಈ ಮಸೂದೆ ಸಹಕಾರಿಯಾಗಲಿದೆ. ತಿದ್ದುಪಡಿಗೆ ಸೆಪ್ಟೆಂಬರ್ […]
ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿ: ಬಾಕಿ ವೇತನ ಪಾವತಿಸಲು ಸಿಎಂ ಅಸ್ತು

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 14,447 ಅತಿಥಿ ಉಪನ್ಯಾಸಕರಿಗೆ ಶೀಘ್ರದಲ್ಲಿ ಬಾಕಿ ವೇತನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದರು. ಅವರು ಮಂಗಳವಾರ ವಿಧಾನ ಪರಿಷತ್‌ನಲ್ಲಿ ಅತಿಥಿ ಉಪನ್ಯಾಸಕರ ಬಾಕಿ ವೇತನ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದರು. ಕೊರೊನಾ ಲಾಕ್‌ಡೌನ್ ಕಾರಣದಿಂದ ಕಾಲೇಜುಗಳು ಮುಚ್ಚಿವೆ. ಮಾರ್ಚ್ ತಿಂಗಳವರೆಗೆ ಎಲ್ಲ ಅತಿಥಿ ಉಪನ್ಯಾಸಕರಿಗೆ ವೇತನ ಪಾವತಿಸಲಾಗಿದೆ. ಏಪ್ರಿಲ್‌ನಿಂದ ಆಗಸ್ಟ್ ವರೆಗಿನ ವೇತನವನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ […]
ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ವಿರೋಧ: ರಾಜ್ಯ ಸರ್ಕಾರದ ವಿರುದ್ಧ ಭುಗಿಲೆದ್ದ ರೈತರು

ಬೆಂಗಳೂರು: ರಾಜ್ಯ ಸರ್ಕಾರವು ಸುಗ್ರೀವಾಜ್ಞೆ ಮೂಲಕ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ವಿದ್ಯುತ್ ಕಾಯ್ದೆಗೆ ತಂದಿರುವ ತಿದ್ದುಪಡಿಯನ್ನು ವಿರೋಧಿಸಿ ರಾಜ್ಯದ ಸಾವಿರಾರು ರೈತರು ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ನಗರದ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ರೈತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರದ ಸ್ವಾತಂತ್ರ್ಯ ಉದ್ಯಾನ ಎದುರಿನ ರಸ್ತೆಯಲ್ಲಿ ಜಮಾಯಿಸಿದ್ದ ಸಾವಿರಾರು ರೈತರು ರಾಜ್ಯ ಸರ್ಕಾರದ ದಿಕ್ಕಾರ ಕೂಗಿದರು. ವಿಧಾನಸೌಧದತ್ತ ಹೋಗಿ ಮುತ್ತಿಗೆ ಹಾಕಲು ಮುಂದಾದರು. ಆದರೆ ಮಾರ್ಗಮಧ್ಯೆಯೇ ಪೊಲೀಸರು ಅವರನ್ನು […]
ವರ್ಗಾವಣೆ ವಿಚಾರ: ಸಚಿವ ನಾರಾಯಣ ಗೌಡ, ಶಾಸಕ ಬೆಳ್ಳಿಪ್ರಕಾಶ್ ಮಧ್ಯೆ ಮಾತಿನ ಫೈಟಿಂಗ್

ಬೆಂಗಳೂರು: ತೋಟಗಾರಿಕೆ ಸಚಿವ ಕೆ.ಸಿ. ನಾರಾಯಣ ಗೌಡ ಮತ್ತು ಕಡೂರು ಶಾಸಕ ಬೆಳ್ಳಿಪ್ರಕಾಶ್ ನಡುವೆ ಇಂದು ವಿಧಾನಸಭೆಯ ಕ್ಯಾಂಟೀನ್ ನಲ್ಲಿ ಘರ್ಷಣೆ ಉಂಟಾಗಿದ್ದು, ಇಬ್ಬರು ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದರು ಎನ್ನಲಾಗಿದೆ. ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿ ಇಬ್ಬರ ನಡುವೆ ಮಾತಿನ ಚಕಮಕಿ ಉಂಟಾಗಿದ್ದು, ಅದು ಹೊಡೆದಾಡಿಕೊಳ್ಳುವ ಹಂತಕ್ಕೆ ತಲುಪಿತ್ತು ಎಂದು ತಿಳಿದುಬಂದಿದೆ. ಕ್ಯಾಂಟೀನ್ ಇಬ್ಬರು ಮುಖಾಮುಖಿಯಾಗಿದ್ದು, ಈ ವೇಳೆ ಶಾಸಕ ಬೆಳ್ಳಿ ಪ್ರಕಾಶ್ ವರ್ಗಾವಣೆ ವಿಚಾರಣೆ ಪ್ರಶ್ನಿಸಿದರು. ಆಗ ಸಚಿವ ನಾರಾಯಣ ಗೌಡ ಆಯ್ತು ಮುಂದಿನ ವಾರ […]
ಕೃಷಿ ವಿರೋಧಿ ಮಸೂದೆಗಳನ್ನು ಅಂಗೀಕರಿಸಿ, ರೈತರಿಗೆ ಮರಣ ಶಾಸನ ಬರೆಯಲು ಸರ್ಕಾರ ಹೊರಟಿದೆ: ಸಿದ್ದರಾಮಯ್ಯ ಆರೋಪ

ಬೆಂಗಳೂರು: ರೈತರಿಗೆ ಮರಣ ಶಾಸನವಾಗಿರುವ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ ( ಉತ್ತೇಜನ ಮತ್ತು ಸೌಲಭ್ಯ) ಮಸೂದೆಗೆ ಬಲವಂತದಿಂದ ಅಂಗೀಕಾರ ಪಡೆಯುವ ಮೂಲಕ ಬಿಜೆಪಿ ಸರ್ಕಾರವು ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೊರೊನಾವನ್ನು ನಿಯಂತ್ರಿಸಲಾಗದೆ ದೇಶದ ಜನರನ್ನು ಸಾವು-ನೋವಿನ ದವಡೆಗೆ ನೂಕುತ್ತಿರುವ ಅಸಮರ್ಥ ಸರ್ಕಾರವು, ಇದೇ ಅವಕಾಶವನ್ನು ದುರ್ಬಳಕೆ ಮಾಡಿಕೊಂಡು ಕೊರೊನೋತ್ತರ ಭಾರತದ ಏಕೈಕ ಆಶಾಕಿರಣವಾದ ಕೃಷಿ […]