ಉಡುಪಿ: ಪ್ರವಾಹದಲ್ಲಿ ಸಿಲುಕಿರುವ ಜನರ ರಕ್ಷಣೆಗೆ ಹೆಲಿಕಾಪ್ಟರ್ ಕಾರ್ಯಾಚರಣೆ: ಸಚಿವ ಬೊಮ್ಮಾಯಿ

ಉಡುಪಿ: ಜಿಲ್ಲೆಯಲ್ಲಿ ಭಾರೀ ಮಳೆಯಾಗಿತ್ತಿದ್ದು, ಇದರಿಂದ ಜಿಲ್ಲೆಯ ಹಲವು ಕಡೆ ರಸ್ತೆ ಸಂಪರ್ಕ ಕಡಿತವಾಗಿದೆ. ಪ್ರವಾಹದಿಂದ ಕೆಲವು ಗ್ರಾಮಗಳು ಜಲಾವೃತಗೊಂಡಿವೆ. ಹಾಗಾಗಿ ಪ್ರವಾಹದಲ್ಲಿ ಸಿಲುಕಿರುವ ಜನರ ರಕ್ಷಣೆ ಮಾಡಲು ರಕ್ಷಣಾ ಇಲಾಖೆಯ ಒಂದು ಹೆಲಿಕಾಪ್ಟರ್ ನಿಯೋಜಿಸಲು ಮನವಿ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ ಅವರು, ಈ ಬಗ್ಗೆ ಕಂದಾಯ ಸಚಿವ ಜತೆಗೆ ಚರ್ಚಿಸಿ ಹೆಲಿಕಾಪ್ಟರ್ ನಿಯೋಜನೆ ಮಾಡಲಾಗುವುದು […]

ಉಡುಪಿಗೆ ವರುಣಾಘಾತ: ನದಿಪಾತ್ರದ ಪ್ರದೇಶಗಳು ಮುಳುಗಡೆ

ಉಡುಪಿ: ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಹಾಮಳೆ ಉಡುಪಿ ಜಿಲ್ಲೆಯ ನದಿಪಾತ್ರದ ಪ್ರದೇಶಗಳು, ತಗ್ಗುಪ್ರದೇಶಗಳು ಸಂಪೂರ್ಣ ಮುಳುಗಡೆಯಾಗಿದೆ. ಸ್ವರ್ಣೆಯ ಆರ್ಭಟ: ಹಿರಿಯಡಕ, ಪುತ್ತಿಗೆ, ಪೆರಂಪಳ್ಳಿ ಭಾಗದಲ್ಲಿ ಹಾದುಹೋಗುವ ಸ್ವರ್ಣ ನದಿ ಉಕ್ಕಿ ಹರಿಯುತ್ತಿದ್ದು, ಇದರಿಂದ ನದಿಗೆ ತಾಗಿಕೊಂಡಿರುವ ಪ್ರದೇಶಗಳು ಸಂಪೂರ್ಣ ಮುಳುಗಡೆಯಾಗಿದೆ. ಕೊಳಲಗಿರಿ, ಹಿರಿಯಡಕ, ಬೆಳ್ಳಂಪಳ್ಳಿ, ಹೆರ್ಗ, ಪರೀಕ ಭಾಗದಲ್ಲಿ ಕೃತಕ ನೆರೆ ಉಂಟಾಗಿದೆ. ಪುತ್ತಿಗೆ ಮಠಕ್ಕೆ ನುಗ್ಗಿದ ನೀರು: ಹಿರಿಯಡಕ ಸಮೀಪದ ಪುತ್ತಿಗೆ ಮೂಲ ಮಳೆ ನೀರು ನುಗ್ಗಿದೆ. ಮಠದ ಗೋಶಾಲೆಯಲ್ಲಿ ನೀರು ತುಂಬಿದ್ದು, […]

ಸೆ. 30ರ ವರೆಗೂ ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭವಿಲ್ಲ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಬೆಂಗಳೂರು: ಕೊರೊನಾ ಕಡಿಮೆಯಾಗದ ಕಾರಣ ಸೆಪ್ಟೆಂಬರ್ 30 ರ ವರೆಗೂ ರಾಜ್ಯದಲ್ಲಿ ಶಾಲಾ ಕಾಲೇಜುಗಳನ್ನು ಆರಂಭಿಸುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯ ಅನ್ವಯ ಸೆ. 21ರಿಂದ ಕೆಲ ನಿಬಂಧನೆಗಳೊಂದಿಗೆ ಶಾಲಾ ಕಾಲೇಜುಗಳನ್ನು ಆರಂಭಿಸಲು ಅನುಮತಿ ನೀಡಲಾಗಿದೆ. ಆದರೆ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿದ್ದು, ನಿಯಂತ್ರಣಕ್ಕೆ ಬರುವವರೆಗೆ ಶಾಲಾ ಕಾಲೇಜುಗಳನ್ನು ತೆರೆಯುವುದಿಲ್ಲ ಎಂದು ಮಾಧ್ಯಮ ಪ್ರಕಟಣೆ ಬಿಡುಗಡೆಗೊಳಿಸಿ ಮಾಹಿತಿ ನೀಡಿದ್ದಾರೆ. ಸೆ. 30ರ ಬಳಿಕ ಪರಿಸ್ಥಿತಿ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು […]

ಮಂಗಳೂರು ಮೂಲದ ಕನ್ನಡದ ಪ್ರಸಿದ್ಧ ನಿರೂಪಕಿ ಕಂ ನಟಿಗೆ ಡ್ರಗ್ಸ್ ನಂಟು: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡ್ರಗ್ಸ್ ಪೆಡ್ಲರ್ ಕಿಶೋರ್ ಶೆಟ್ಟಿ

ಮಂಗಳೂರು: ಮಂಗಳೂರು ಮೂಲದ ಕನ್ನಡದ ಪ್ರಸಿದ್ಧ ನಿರೂಪಕಿ ಕಂ ನಟಿ ಮಂಗಳೂರಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿಗಳಲ್ಲಿ ಭಾಗವಹಿಸುತ್ತಿದ್ದಳು ಎಂಬ ಸ್ಫೋಟಕ ಮಾಹಿತಿಯನ್ನು ಡ್ರಗ್ಸ್ ಪೆಡ್ಲರ್, ಡ್ರಾನ್ಸರ್ ಕಿಶೋರ್ ಶೆಟ್ಟಿ ಸಿಸಿಬಿ ವಿಚಾರಣೆಯಲ್ಲಿ ಬಹಿರಂಗಗೊಳಿಸಿದ್ದಾನೆ. ಪ್ರಕರಣ ವಿಚಾರಣೆ ಹಂತದಲ್ಲಿ ಇರುವುದರಿಂದ ಪೊಲೀಸರು ಆ ನಿರೂಪಕಿಯ ಹೆಸರನ್ನು ಬಹಿರಂಗಪಡಿಸಿಲ್ಲ. ಆದರೆ ಆಕೆಗೂ ಸದ್ಯದಲ್ಲೇ ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ನಟಿ ಹಾಗೂ ತನಗೆ ಇರುವ ನಂಟಿನ ಬಗ್ಗೆ ಪೊಲೀಸರ ಬಳಿ ಕಿಶೋರ್ ತಿಳಿಸಿದ್ದು, ಆಕೆ ಮಂಗಳೂರು ಮೂಲದ […]

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್: ಕಾರ್ಕಳ ಶಾಸಕ ಸುನೀಲ್ ಕುಮಾರ್ ಸಹಿತ ಐವರಿಗೆ ಸಚಿವ ಸ್ಥಾನ ?.

ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಸುನೀಲ್ ಕುಮಾರ್ ಸಹಿತ ಐವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಕ್ಟೋಬರ್ 3 ಅಥವಾ 5 ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ಕಾರ್ಕಳ ಶಾಸಕ ಸುನಿಲ್ ಕುಮಾರ್, ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದಿರುವ ಎಂ.ಟಿ. ನಾಗರಾಜ್, ಆರ್. ಶಂಕರ್, ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಹಾಗೂ ಅರವಿಂದ ಲಿಂಬಾವಳಿ […]