ಸಿಎಂ ಯಡಿಯೂರಪ್ಪ ಶಿವಮೊಗ್ಗಕ್ಕೆ ಸೀಮಿತಗೊಂಡಿದ್ದಾರೆ: ಬಿಜೆಪಿ ಶಾಸಕ ಉಮೇಶ್ ಕತ್ತಿ ಕಿಡಿ

ಬೆಳಗಾವಿ: ಸಿಎಂ ಬಿ.ಎಸ್. ಯಡಿಯೂರಪ್ಪನವರು ರಾಜ್ಯದ ಸಮಗ್ರ ಅಭಿವೃದ್ಧಿ ಬಗ್ಗೆ ಚಿಂತಿಸುತ್ತಿಲ್ಲ. ಅವರು ಕೇವಲ ಶಿವಮೊಗ್ಗ ಜಿಲ್ಲೆಗಷ್ಟೇ ಸೀಮಿತವಾಗಿದ್ದಾರೆ ಎಂದು ಹುಕ್ಕೇರಿ ಬಿಜೆಪಿ ಶಾಸಕ ಉಮೇಶ ಕತ್ತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಉತ್ತರ ಕರ್ನಾಟಕದ ಅಭಿವೃದ್ಧಿ ಯೋಜನೆಗಳ ಬಗ್ಗೆ ಗಮನಕೊಡುತ್ತಿಲ್ಲ. ಇದರಿಂದ ನನಗೆ ಬಹಳ ನೋವಾಗಿದೆ ಎಂದು ಕಿಡಿಕಾರಿದರು. ಉತ್ತರ ಕರ್ನಾಟಕ ಭಾಗಕ್ಕೆ ಅನುಕೂಲ ಮಾಡಿಕೊಡಬಹುದು ಎಂದು ಇಷ್ಟು ದಿನ ಕಾದಿದ್ದೆ. ಆದರೆ ಅದು ನಡೆಯುವ ಲಕ್ಷಣ ಕಾಣುತ್ತಿಲ್ಲ. ಹಾಗಾಗಿ ಅನಿವಾರ್ಯವಾಗಿ […]

ಪ್ರಸಾದ ರೂಪದಲ್ಲಿ ಬ್ರೌನ್‌ ಶುಗರ್ ಸಾಗಾಟ: ಒಬ್ಬನ ಬಂಧನ

ಬೆಂಗಳೂರು: ದೇವರ ಪ್ರಸಾದ ರೂಪದಲ್ಲಿ ಮಾದಕ ವಸ್ತು ಬ್ರೌನ್‌ ಶುಗರ್ ಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಸಿಟಿ ಮಾರ್ಕೆಟ್ ಪೊಲೀಸರು ಇಂದು ಬಂಧಿಸಿದ್ದಾರೆ. ಗಿರಿನಗರದ ನಿವಾಸಿ ವಿಕ್ರಮ್ ಖಿಲೇರಿ (25) ಬಂಧಿತ ಆರೋಪಿ. ಈತ ಪಟ್ನೂಲ್ ಪೇಟೆಯಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ 90 ಗ್ರಾಂ ಬ್ರೌನ್ ಶುಗರ್, ಮೊಬೈಲ್, ಬೈಕ್‌ ಜಪ್ತಿ ಮಾಡಲಾಗಿದೆ ಎಂದು ತಿಳಿದುಬಂದಿದೆ. ಡ್ರಗ್ಸ್ ಪೊಟ್ಟಣದಲ್ಲಿ ತುಂಬುತ್ತಿದ್ದ ಆರೋಪಿ, ಅದರ ಮೇಲೆ […]

ಸಿಎಂ ಯಡಿಯೂರಪ್ಪನವರ ಬದಲಾವಣೆ ಖಚಿತ: ಶಹಾಪೂರ ಶಾಸಕ ಶರಣಬಸ್ಸಪ್ಪಗೌಡ

ಯಾದಗಿರಿ: ರಾಜ್ಯದಲ್ಲಿ ಸಿಎಂ ಯಡಿಯೂರಪ್ಪನವರ ಬದಲಾಗಿ ಅವರ ಪುತ್ರ ಅಧಿಕಾರ ಚಲಾಯಿಸುತ್ತಿದ್ದಾರೆ. ಯಡಿಯೂರಪ್ಪಗೆ ವಯಸ್ಸಾಗಿದೆ, ಏನೂ ಮಾಡಲು ಆಗುವುದಿಲ್ಲ ಎಂದು ಮಾಜಿ ಸಚಿವ, ಶಹಾಪೂರ ಕಾಂಗ್ರೆಸ್‌ ಶಾಸಕ ಶರಣಬಸ್ಸಪ್ಪಗೌಡ ದರ್ಶನಾಪೂರ ವ್ಯಂಗ್ಯವಾಡಿದರು. ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಇಲಾಖೆಗಳಲ್ಲಿ ಸಿಎಂ ಪುತ್ರ ವಿಜಯೇಂದ್ರ ಹಸ್ತಕ್ಷೇಪ ನಡೆಸುತ್ತಿದ್ದಾರೆ. ಸಿಎಂ ಪುತ್ರನ ಹಸ್ತಕ್ಷೇಪ ಇದೇ ರೀತಿ ಮುಂದುವರೆದರೆ ಸಿಎಂ ಸ್ಥಾನ ಬದಲಾವಣೆ ಖಚಿತ. ಎಲ್ಲ ಶಾಸಕರು ಬಿಎಸ್‌ವೈ ಕೈಬಿಡುತ್ತಾರೆ ಎಂದರು. ಬಿಜೆಪಿ ಹೈಕಮಾಂಡ್‌ ಎದುರು ಆಡಳಿತ ಪಕ್ಷದ ಕೆಲವು […]

ಬಿಜೆಪಿ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ

ಬೆಂಗಳೂರು: ಕಳೆದ ಜೂನ್ ತಿಂಗಳಲ್ಲಿ ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅಶೋಕ್​ ಗಸ್ತಿ (55) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ಸ್ಪಷ್ಟಪಡಿಸಿದೆ. ಈ ಮೊದಲು ಮಾಧ್ಯಮಗಳಲ್ಲಿ ಗಸ್ತಿ ಅವರು ಕೊರೊನಾದಿಂದ ಮೃತಪಟ್ಟಿದ್ದಾರೆ ಎಂದು ವರದಿ ಆಗಿತ್ತು. ಹಾಗಾಗಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಣಿಪಾಲ್ ಆಸ್ಪತ್ರೆ, ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಅಶೋಕ್ ಗಸ್ತಿ ಅವರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದೆ. ಸೆಪ್ಟೆಂಬರ್ 2ರಂದು […]

ರಾಜ್ಯದಲ್ಲಿ ಅತ್ಯಂತ ಪ್ರಬಲವಾದ ಗೋ ಹತ್ಯೆ ನಿಷೇಧ ಕಾಯ್ದೆ ಅನುಷ್ಠಾನಗೊಳಿಸಿ: ಪೇಜಾವರ ಶ್ರೀಗಳಿಂದ ಸರ್ಕಾರಕ್ಕೆ ಆಗ್ರಹ

ಉಡುಪಿ: ರಾಜ್ಯದಲ್ಲಿ ಅತ್ಯಂತ ಪ್ರಬಲವಾದ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸುವಂತೆ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಜಾರಿಯಲ್ಲಿರುವ ಗೋ ಹತ್ಯೆ ನಿಷೇಧ ಕಾಯಿದೆ (1964) ಅತ್ಯಂತ ದುರ್ಬಲವಾಗಿದೆ. ಆದ್ದರಿಂದ ಪ್ರತಿದಿನ ರಾಜ್ಯದಲ್ಲಿ ಅಕ್ರಮ ಗೋ ಸಾಗಾಟ, ಗೋವುಗಳ ಹತ್ಯೆ ನಡೆಯುತ್ತಿದೆ. ಗೋವುಗಳನ್ನು ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದು, ಇದರಿಂದ ಕೃಷ್ಣನ ಭಕ್ತರಿಗೆ ಅತ್ಯಂತ ದುಃಖವಾಗಿದೆ ಎಂದು ಶ್ರೀಪಾದರ ಹೇಳಿದ್ದಾರೆ. ಗೋವುಗಳ ರಕ್ಷಣೆ ಹಾಗೂ ಗೋವುಗಳ ವಧೆ […]