ಡ್ರಗ್ಸ್ ದಂಧೆ: ಪರೀಕ್ಷೆಗೆ ಮೂತ್ರದ ಬದಲು ನೀರು ತಂದುಕೊಟ್ಟ ರಾಗಿಣಿ

ಬೆಂಗಳೂರು: ಡ್ರಗ್ಸ್ ನಂಟಿನ ಆರೋಪದಡಿ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ರಾಗಿಣಿ ದ್ವಿವೇದಿ ವೈದ್ಯಕೀಯ ಪರೀಕ್ಷೆ ವೇಳೆ ರಂಪಾಟ ಮಾಡಿದ ವಿಡಿಯೋ ಇದೀಗ ವೈರಲ್ ಆಗಿದೆ. ರಕ್ತ, ಮೂತ್ರ ಹಾಗೂ ತಲೆಕೂದಲು ಪರೀಕ್ಷೆ ನಡೆಸಲು ನ್ಯಾಯಾಲಯದ ಅನುಮತಿ ಪಡೆದಿದ್ದ ಸಿಸಿಬಿ ಪೊಲೀಸರು, ರಾಗಿಣಿ ಹಾಗೂ ಸಂಜನಾ ಗಲ್ರಾನಿ ಅವರನ್ನು ಕೆ.ಸಿ.ಜನರಲ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಪರೀಕ್ಷೆಗೆ ಸಂಜನಾ ಆಕ್ಷೇಪ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ರಾಗಿಣಿ ಸಹ ಪರೀಕ್ಷೆಗೆ ತಗಾದೆ ತೆಗೆದಿದ್ದರು. ಆಸ್ಪತ್ರೆ ಬೆಡ್ ಮೇಲೆಯೇ ಕುಳಿತು ತಮ್ಮ ಪರ ವಕೀಲರನ್ನು […]
ಮಂಡ್ಯ ದೇವಳದಲ್ಲಿ ಅರ್ಚಕರ ಹತ್ಯೆ: ಪೇಜಾವರ ಶ್ರೀ ಖಂಡನೆ

ಉಡುಪಿ: ಮಂಡ್ಯದ ಪ್ರಾಚೀನ ಅರ್ಕೇಶ್ವರ ಸ್ವಾಮೀ ದೇವಸ್ಥಾನದಲ್ಲಿ ಮೂವರು ಅರ್ಚಕರನ್ನು ಬರ್ಬರವಾಗಿ ಹತ್ಯೆಗೈದು, ಬೆಲೆಬಾಳುವ ಸೊತ್ತುಗಳನ್ನು ದೋಚಿರುವ ಪೈಶಾಚಿಕ ಕೃತ್ಯವನ್ನು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತೀವ್ರವಾಗಿ ಖಂಡಿಸಿದ್ದಾರೆ. ಪವಿತ್ರ ಸ್ಥಳದಲ್ಲಿ ನಡೆದಿರುವ ಈ ದುಷ್ಕೃತ್ಯದಿಂದ ಅತ್ಯಂತ ವಿಷಾದವಾಗಿದೆ. ಈ ಕೃತ್ಯವನ್ನು ನಡೆಸಿದ ದುರುಳರನ್ನು ಸರಕಾರ ಶೀಘ್ರ ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಮೃತ ಅರ್ಚಕರ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ನೀಡಬೇಕು ಎಂದು ಒತ್ತಾಯಿಸಿದರು. ನಾಡಿನಲ್ಲಿ ಇಂತಹ ಅಮಾನವೀಯ ಘಟನೆಗಳು ಮುಂದೆಂದೂ ನಡೆಯದಂತೆ ಸಮಾಜ ಮತ್ತು […]
ಉಡುಪಿ ಕೃಷ್ಣಮಠ: ಮಳೆಯ ನಡುವೆಯೇ ವಿಟ್ಲಪಿಂಡಿ ಉತ್ಸವ ಸಂಪನ್ನ

ಉಡುಪಿ: ಕೊರೊನಾ ಕಾರಣದಿಂದ ಇದೇ ಮೊದಲ ಬಾರಿಗೆ ಭಕ್ತ ಸಮೂಹದ ಅನುಪಸ್ಥಿತಿಯಲ್ಲಿ ಶ್ರೀಕೃಷ್ಣನ ಜನ್ಮವನ್ನು ಸ್ಮರಿಸುವ, ಸಂಭ್ರಮಿಸುವ ವಿಟ್ಲಪಿಂಡಿ ಉತ್ಸವ ಉಡುಪಿ ಕೃಷ್ಣಮಠದಲ್ಲಿ ಇಂದು ಮಳೆಯ ಜೊತೆಯಲ್ಲಿ ಸರಳ ರೀತಿಯಲ್ಲಿ ಸಂಪ್ರದಾಯದಂತೆ ನೆರವೇರಿತು. ಶ್ರೀಕೃಷ್ಣ ಮುಖ್ಯಪ್ರಾಣರಿಗೆ ಪರ್ಯಾಯ ಈಶಪ್ರಿಯತೀರ್ಥ ಶ್ರೀಪಾದರು ಪೂಜೆ ಸಲ್ಲಿಸಿದರು. ಬಳಿಕ ರಥಬೀದಿಯಲ್ಲಿ ವೈಭವದ ವಿಟ್ಲಪಿಂಡಿ ಮೆರವಣಿಗೆ ನಡೆಯಿತು. ಕೊರೊನಾ ಬಿಕ್ಕಟ್ಟಿನ ನಡುವೆ ಉತ್ಸವಕ್ಕೆ ಸುಮಾರು ನೂರರ ಆಸುಪಾಸಿನ ಸಂಖ್ಯೆಯಲ್ಲಿ ಭಕ್ತರು ಸಾಕ್ಷಿಯಾದರು. ವಿಟ್ಲಪಿಂಡಿ ಉತ್ಸವದ ಅಂಗವಾಗಿ ಮಣ್ಣಿನಿಂದ ತಯಾರಿಸಿದ ಶ್ರೀಕೃಷ್ಣನ ಮೂರ್ತಿಯನ್ನು […]
ಅಕ್ರಮವಾಗಿ ಮರ ಕಡಿದು ಸಾಗಾಟ: ಅರಣ್ಯಾಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳರು

ಕಾರ್ಕಳ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಭಾರೀ ಗಾತ್ರದ ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸುತ್ತಿದ್ದ ಜಾಲವೊಂದನ್ನು ಕಾರ್ಕಳ ವನ್ಯಜೀವಿ ವಿಭಾಗದ ಅಧಿಕಾರಿಗಳು ಕಾರ್ಕಳ ತಾಲೂಕಿನ ಅಂಡಾರು ಗ್ರಾಮ ವ್ಯಾಪ್ತಿಯ ಕೊಂಡಾಡಿ ಎಂಬಲ್ಲಿ ಬಂಧಿಸಿದ್ದಾರೆ. ಎರಡು ಲಕ್ಷಕ್ಕೂ ಮಿಕ್ಕಿದ ಮೌಲ್ಯದ ಸುಮಾರು ಐವತ್ತು ಹೆಬ್ಬಲಸು ದಿಮ್ಮಿಗಳು, ಸಾಗಾಟಕ್ಕೆ ಬಳಸುವ ಪಿಕಪ್ ವಾಹನ, ಮರಕಟ್ಟಿಂಗ್ ಮಾಡುವ ಯಂತ್ರಗಳನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ರಮೇಶ್ ಗೌಡ ಅಂಡಾರು, ಸತೀಶ್ ಹೆಗ್ಡೆ ಕಡ್ತಲ, ಸತೀಶ್ ಗೌಡ ಅಂಡಾರು, ಪ್ರಶಾಂತ ಎಂ.ಕೆ, ಹರೀಶ್ ನಾಯ್ಕ್, ಭಾಸ್ಕರ್ […]
ಗೋಡೆ ಕುಸಿದು ಆರು ವರ್ಷದ ಬಾಲಕಿ ಸಾವು

ಚಿತ್ರದುರ್ಗ: ಧಾರಾಕಾರವಾಗಿ ಸುರಿದ ಮಳೆಯಿಂದ ಗೋಡೆ ಕುಸಿದು ಆರು ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಚಳ್ಳೆಕೆರೆ ತಾಲ್ಲೂಕಿನ ಜಾಜೂರು ಗ್ರಾಮದಲ್ಲಿ ಸಂಭವಿಸಿದೆ. ಮೃತ ಬಾಲಕಿಯನ್ನು ಚಲ್ಮೇಶ ಮತ್ತು ಲಕ್ಷ್ಮೀದೇವಿ ದಂಪತಿಯ ಪುತ್ರಿ ಸೃಜನಾ (6) ಎಂದು ಗುರುತಿಸಲಾಗಿದೆ. ರಾತ್ರಿ ಮಲಗಿದ್ದಾಗ ಗೋಡೆ ಕುಸಿದು ಈ ದುರ್ಘಟನೆ ಸಂಭವಿಸಿದೆ ಎಂದು ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ ತಿಳಿಸಿದ್ದಾರೆ.