ಬಜೆಟ್ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ: ಸಭಾತ್ಯಾಗ ನಡೆಸಿದ ಬಿಜೆಪಿ; ಪಾಕ್ ಪರ ಘೋಷಣೆ ವಿರುದ್ದ ಪ್ರತಿಭಟನೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವ ಸಂದರ್ಭದಲ್ಲಿ ಧರಣಿ ನಡೆಸಿದ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಸದನ ಆರಂಭ ಆಗುತ್ತಿದ್ದಂತೆಯೆ ಬಾವಿಗೆ ಇಳಿದು ಧರಣಿ ನಡೆಸಿದ ಬಿಜೆಪಿ ಸದಸ್ಯರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಲ್ಲದೆ ಜೈಶ್ರೀರಾಂ, ಮೋದಿ ಮೋದಿ ಎಂದು ಘೋಷಣೆ ಕೂಗಿದರು. ಸಿಎಂ ಉತ್ತರಕ್ಕೆ ವಿರೋಧ ವ್ಯಕ್ತಪಡಿಸಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಿಎಂ ರಾಜೀನಾಮೆ ಕೊಡಬೇಕು. ಇದು ಹಿಂದೂ ವಿರೋಧಿ […]
ಎರಡನೇ ರಾಜ್ಯ ಭಾಷೆಯಾಗಿ ತುಳು; ಮಾಹಿತಿ ಸಂಗ್ರಹಕ್ಕಾಗಿ ಅಧಿಕಾರಿಗಳ ತಂಡ ರಚನೆ: ಶಿವರಾಜ ತಂಗಡಗಿ

ಬೆಂಗಳೂರು: ಕರ್ನಾಟಕದ ಎರಡನೇ ರಾಜ್ಯ ಭಾಷೆಯಾಗಿ ತುಳುವನ್ನು ಪರಿಗಣಿಸಲು ಅಗತ್ಯ ಮಾಹಿತಿ ಸಂಗ್ರಹಕ್ಕಾಗಿ ಅಧಿಕಾರಿಗಳ ತಂಡ ರಚಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದರು. ಪರಿಷತ್ತಿನಲ್ಲಿ ಜೆಡಿಎಸ್‌ನ ಬಿ.ಎಂ.ಫಾರೂಕ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಣೆ ಮಾಡುವ ಕುರಿತು ಅಧ್ಯಯನ ನಡೆಸಿ, ವರದಿ ನೀಡಲು ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ಹಿಂದೆ ಸಮಿತಿ ರಚಿಸಲಾಗಿತ್ತು. ತುಳು ಭಾಷೆಯ ಸ್ವರೂಪ, ಇತಿಹಾಸ, ಸಾಹಿತ್ಯ, ಪರಂಪರೆ, ಲಿಪಿ, ಶಾಸನಗಳ […]
ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮತದಾನ ಪ್ರಾರಂಭ

ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ಮತದಾನ ಆರಂಭವಾಗಿದೆ. ಅರ್ಧ ಗಂಟೆಯ ಅವಧಿಯೊಳಗೆ 30ಕ್ಕೂ ಹೆಚ್ಚು ಶಾಸಕರು ಮತ ಚಲಾಯಿಸಿದ್ದಾರೆ. ವಿಧಾನಸೌಧದ ಮೊದಲ ಮಹಡಿಯಲ್ಲಿ ಮತಗಟ್ಟೆ ತೆರೆಯಲಾಗಿದೆ. ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಎಲ್ಲರಿಗಿಂತ ಮೊದಲು ಮತಚಲಾಯಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾಗಿ ಅಜಯ್ ಮಾಕನ್, ಸೈಯದ್ ನಾಸಿರ್ ಹುಸೇನ್ ಮತ್ತು ಜಿ.ಸಿ. ಚಂದ್ರಶೇಖರ್ ಕಣದಲ್ಲಿದ್ದಾರೆ. ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳಾಗಿ ಬಿಜೆಪಿಯ ನಾರಾಯಣ ಸಾ ಭಾಂಡಗೆ ಮತ್ತು ಜೆಡಿಎಸ್ ನ ಡಿ. ಕುಪೇಂದ್ರ ರೆಡ್ಡಿ […]
ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹತ್ತನೇ ತರಗತಿ, ಪಿಯುಸಿ, ಪದವಿ, ಎಂಜಿನಿಯರಿಂಗ್, ಐಟಿಐ ಸೇರಿದಂತೆ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ ಉದ್ಯೋಗಾಕಾಂಕ್ಷಿಗಳಿಗಾಗಿ ಏರ್ಪಡಿಸಲಾಗಿರುವ ಉದ್ಯೋಗ ಮೇಳದಲ್ಲಿ ಒಂದು ಲಕ್ಷ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ ಎಂದು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದರು. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಸೋಮವಾರದಿಂದ ಆರಂಭವಾಗಿರುವ ಯುವ ಸಮೃದ್ಧಿ ಬೃಹತ್ ಉದ್ಯೋಗ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ಯುವಕರಿಗೆ ಸ್ಥಳದಲ್ಲೇ ಉದ್ಯೋಗ ಕೊಡಬೇಕೆಂಬುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಲ್ಲೊಂದಾಗಿತ್ತು. ಉದ್ಯೋಗದ […]
ರಾಜ್ಯರಾಜಧಾನಿಯಲ್ಲಿ ಕರಾವಳಿಯ ಕಲರವ: ‘ನಮ್ಮ ಕರಾವಳಿ ಉತ್ಸವ’ಕ್ಕೆ ಅಭೂತಪೂರ್ವ ಜನ ಬೆಂಬಲ

ಬೆಂಗಳೂರು: ಜೆ.ಪಿ.ನಗರದ ಬಿಬಿಎಂಪಿ ಗ್ರೌಂಡ್‌ನಲ್ಲಿ ಅದ್ಧೂರಿಯಾಗಿ ‘ನಮ್ಮ ಕರಾವಳಿ ಉತ್ಸವ’ವನ್ನು ಕರಾವಳಿ ಒಕ್ಕೂಟದವರೆಲ್ಲಾ ಸೇರಿ ಅದ್ಧೂರಿಯಾಗಿ ಆಯೋಜಿಸಿದರು. ಕರಾವಳಿಗರ ಒಕ್ಕೂಟ ವತಿಯಿಂದ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಿಬಿಎಂಪಿ ವಿಶೇಷ ಆಯುಕ್ತ ಡಾ.ಹರೀಶ್ ಕುಮಾರ್ ಅವರು, ಆರೋಗ್ಯ, ಶಿಕ್ಷಣ ಹಾಗೂ ಮಹಿಳಾ ಸಬಲೀಕರಣದಲ್ಲಿ ಕರಾವಳಿ ಭಾಗದವರು ಮುಂದೆ, ಇದರ ಹಿಂದೆ ಹಿರಿಯರ ಮಾರ್ಗದರ್ಶನ, ಪರಂಪರೆ, ಸಂಸತಿ ಪ್ರಮುಖ ಕಾರಣ ಎಂದು ಹೇಳಿದರು. ಕರಾವಳಿ ಭಾಗದಲ್ಲಿ ಮಹಿಳೆಯರು ತಮ್ಮ ದಿನನಿತ್ಯದ ಕೆಲಸದೊಂದಿಗೆ ಸಾರ್ವಜನಿಕ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ. ಇದರಿಂದ […]