ಧರ್ಮಸ್ಥಳದ ಬುರುಡೆ ಕೇಸ್ ಗೆ ಸಿಕ್ಕಿತು ಮಹತ್ವದ ತಿರುವು: ಸ್ಥಳದಲ್ಲಿ ಸಿಕ್ತು ಕೆಂಪು ರವಿಕೆ, ಪ್ಯಾನ್ ಕಾರ್ಡ್

ಧರ್ಮಸ್ಥಳ: ಇಲ್ಲಿ ಎಸ್ ಐ ಟಿ ನಡೆಸುತ್ತಿರುವ ಉತ್ಖನನದ ವೇಳೆ ಅಗೆಯಲಾಗಿದ್ದ ಗುಂಡಿಯಲ್ಲಿ ಮಹತ್ವದ ವಸ್ತು ಸಿಕ್ಕಿದೆ. ಎಸ್ಐಟಿ ಅಧಿಕಾರಿಗಳಿಗೆ ಮಣ್ಣು ಅಗೆಯುವಾಗ ಕೆಂಪು ರವಿಕೆ, ಒಂದು ಪ್ಯಾನ್ ಕಾರ್ಡ್, ಡೆಬಿಟ್ ಕಾರ್ಡ್ ಸಿಕ್ಕಿದೆ. ಈ ವಸ್ತುಗಳು ತನಿಖೆಯ ಕುತೂಹಲಕ್ಕೆ ಕಾರಣವಾಗಿದ್ದು ಇದೀಗ ಎಸ್ ಐಟಿ ತಂಡ ಹೆಚ್ಚಿನ ತನಿಖೆಗಾಗಿ ವಶಕ್ಕೆ ಪಡೆದುಕೊಂಡಿದೆ. ಧರ್ಮಸ್ಥಳದ ನೇತ್ರಾವತಿ ತಟದಲ್ಲಿ 1, 2,3 ನೇ ಪಾಯಿಂಟ್‌ನಲ್ಲಿ ಮಣ್ಣು ಅಗೆಯಲಾಗಿತ್ತು. 1, 2,3ನೇ ಪಾಯಿಂಟ್‌ನಲ್ಲಿ ಏನೂ ಸಿಕ್ಕಿರಲಿಲ್ಲ. ಆದ್ರೆ, ಇದೀಗ ಮಣ್ಣು […]

ಧರ್ಮಸ್ಥಳ ಪ್ರಕರಣ: ಗುರುತಿಸಿದ ಸ್ಥಳ ಅಗೆಯುವ ಪ್ರಕ್ರಿಯೆ ಆರಂಭ; ಬಿಗಿ ಪೊಲೀಸ್ ಭದ್ರತೆ.

ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಮೃತದೇಹಗಳನ್ನು ಹೊರ ತೆಗೆಯವ ಕಾರ್ಯ ಮಂಗಳವಾರ ಬಿಗು ಪೊಲೀಸ್ ಭದ್ರತೆಯೊಂದಿಗೆ ಆರಂಭವಾಯಿತು. ಧರ್ಮಸ್ಥಳದ ಸ್ನಾನ ಘಟ್ಟದ ಸಮೀಪದ ನೇತ್ರಾವತಿ ನದಿ ಪಕ್ಕದ ಕಾಡಿನಲ್ಲಿ ಶವಗಳನ್ನು ಹೂತಿಡಲಾಗಿದೆ ಎನ್ನಲಾದ ಜಾಗವನ್ನು ಏಳೆಂಟು ಕಾರ್ಮಿಕರು ಜೋರು ಮಳೆಯ ನಡುವೆಯೇ ಅಗೆಯುತ್ತಿದ್ದಾರೆ. ಈ ಪ್ರಕರಣದ (ಸಂಖ್ಯೆ 39/2025) ಸಾಕ್ಷಿ ದೂರುದಾರ ವ್ಯಕ್ತಿಯೂ ಮುಸುಕು ಧರಿಸಿ ಸ್ಥಳದಲ್ಲಿ ಹಾಜರಿದ್ದರು. ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ […]

ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ.

ಉಡುಪಿ: ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ ಎಲ್ಲಾ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಹಂಚಿಕೆ ಮತ್ತು ಸರಬರಾಜು ಮಾಡಲಾಗಿರುತ್ತದೆ. ಇದರಿಂದಾಗಿ ರಾಜ್ಯದಲ್ಲಿ ಯಾವುದೇ ರೀತಿಯ ರಸಗೊಬ್ಬರದ ಕೊರತೆ ಕಂಡು ಬಂದಿರುವುದಿಲ್ಲ ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ. ರಸಗೊಬ್ಬರ ಕೊರತೆಗೆ ಮೂಲ ಕಾರಣ: ಪ್ರಸಕ್ತ ಸಾಲಿನಲ್ಲಿ ಮಾತ್ರ ಆರಂಭಿಕ ಶುಲ್ಕ ಪರಿಗಣಿಸಿ, ಕೇಂದ್ರ ಸರ್ಕಾರದಿಂದ ರಸಗೊಬ್ಬರ ಹಂಚಿಕೆ ಮತ್ತು ಸರಬರಾಜು ಪ್ರಕ್ರಿಯೆ ಜರುಗಿಸಲಾಗುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಯೂರಿಯಾ ರಸಗೊಬ್ಬರದ ಪ್ರಾರಂಬಿಕ […]

ಅಗರಬತ್ತಿ ಹೊಗೆಯಲ್ಲಿದೆ, ಸಿಗರೇಟ್ ಹೊಗೆಗಿಂತಲೂ ಮಾರಕವಾದ ಅಂಶ: ಅಗರಬತ್ತಿ ಹೊಗೆ ಭಾರೀ ಅಪಾಯಕಾರಿ! ಅಧ್ಯಯನ ಬಿಚ್ಚಿಟ್ಟ ಭಯಾನಕ ಸತ್ಯ!

ಧಾರ್ಮಿಕ ಕಾರ್ಯಕ್ರಮಗಳಿಗೆ ಅಗರಬತ್ತಿಗಳನ್ನು ಬಳಸೋದು ಎಲ್ಲೆಡೆ ಮಾಮೂಲು. ಕೆಲವರು ಮನೆ ಮನಸ್ಸು ಪರಿಮಳವಾಗಿರಲಿ ಎನ್ನುವ ಕಾರಣಕ್ಕೂ ಊದುಬತ್ತಿಗಳನ್ನು ಹಚ್ಚಿಡುತ್ತಾರೆ. ಆದರೆ ಊದುಬತ್ತಿಯ ಹೊಗೆಯ ಬಗ್ಗೆ ಆತಂಕಕಾರಿ ಮಾಹಿತಿಯೊಂದು ಹೊರಬಿದ್ದಿದ್ದು ಇದರಲ್ಲಿ ಊದುಬತ್ತಿ ಆರೋಗ್ಯದ ಮೇಲೆ ಗಂಭೀರಾದ ಪರಿಣಾಮ ಬೀರುತ್ತೆ ಎನ್ನುವ ಬಗ್ಗೆ ವೈಜ್ಞಾನಿಕ ಅಂಶ ಸಾಬೀತಾಗಿದೆ. ಹೌದು. ದಕ್ಷಿಣ ಚೀನಾದ ವಿಶ್ವವಿದ್ಯಾಲಯದ ಸಂಶೋಧಕರು ನಡೆಸಿದ ಈ ಅಧ್ಯಯನವು, ಅಗರಬತ್ತಿಯ ಹೊಗೆಯು ಸಿಗರೇಟ್ ಧೂಮಕ್ಕಿಂತಲೂ ಹೆಚ್ಚು ವಿಷಕಾರಿ ಎನ್ನುವ ಆತಂಕಕಾರಿ ಮಾಹಿತಿ ದೊರೆತಿದೆ. ಅಂತದ್ದೇನಿದೆ ಅಗರಬತ್ತಿಯಲ್ಲಿ? ಅಗರಬತ್ತಿ ಹೊಗೆಯಲ್ಲಿ […]

ಅಮೆರಿಕದ ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಶಾಸಕ ಮಂಜುನಾಥ ಭಂಡಾರಿ ಆಯ್ಕೆ.

ಮಂಗಳೂರು: ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ ಆಶ್ರಯದಲ್ಲಿ ಅಮೆರಿಕದ ಬೋಸ್ಟನ್ ನಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷ ನೇತೃತ್ವದಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ ಶಾಸಕರುಗಳ ಸಮ್ಮೇಳನದಲ್ಲಿ ಭಾಗಿಯಾಗಲು ಹಿರಿಯ ರಾಜಕಾರಣಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವಕಾಶ ಪಡೆದಿದ್ದಾರೆ. ಕರ್ನಾಟಕದ ವಿಧಾನಸಭೆಯ 224 ಸದಸ್ಯರುಗಳಲ್ಲಿ 14 ಶಾಸಕರು ಆಯ್ಕೆಯಾಗಿದ್ದು, ಅದರಲ್ಲಿ ಭಂಡಾರಿ ಓರ್ವರಾಗಿರುತ್ತಾರೆ. ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನೀತಿ ನಿರೂಪಕರು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದು, ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನ ಸಭೆಗಳ ಪಾತ್ರ ಶಾಸನ ಸಭೆಗಳಿಗೆ […]