ಆನೆಯಿಂದ ಕೊಲ್ಲಲ್ಪಟ್ಟ ಕೇರಳದ ವ್ಯಕ್ತಿಗೆ ರಾಜ್ಯದಿಂದ 15 ಲಕ್ಷ ರೂ ಪರಿಹಾರ: ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಸೆರೆಹಿಡಿಯಲಾದ ಆನೆಯಿಂದ ಕೊಲ್ಲಲ್ಪಟ್ಟ ಕೇರಳದ ವ್ಯಕ್ತಿಯ ಕುಟುಂಬಕ್ಕೆ ಕರ್ನಾಟಕ ಸರ್ಕಾರವು ಪರಿಹಾರ ಹಣದ ರೂಪವಾಗಿ 15 ಲಕ್ಷ ರೂಗಳನ್ನು ಕಾನೂನುಬಾಹಿರವಾಗಿ ಮಂಜೂರು ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡು ಸಂಸದರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ತೆರಿಗೆದಾರರ ಹಣವನ್ನು ಕಾಂಗ್ರೆಸ್‌ ದುರುಪಯೋಗಪಡಿಸಿಕೊಳ್ಳುತ್ತಿದೆ. ಅಲ್ಲದೇ ಕರ್ನಾಟಕದಲ್ಲಿ ಸೆರೆಹಿಡಿಯಲಾದ ಆನೆಯ ತುಳಿತಕ್ಕೊಳಗಾಗಿ ಕೇರಳದ ಅಜೀಶ್‌ ಮೃತಪಟ್ಟಿದ್ದಾರೆ ಎಂದು ಸುಳ್ಳು ಹಬ್ಬಿಸಲಾಗಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಎಕ್ಸ್‌ನಲ್ಲಿ ಕಿಡಿಕಾರಿದ್ದಾರೆ. ‘ಬರಗಾಲದಿಂದ ರಾಜ್ಯದಾದ್ಯಂತ […]

ಬೆಂಗಳೂರು: ಫೆ.26-27 ಯುವ ಸಮೃದ್ದಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ

ಬೆಂಗಳೂರು: ಫೆ. ಫೆ.26-27 ರಂದು ಇಲ್ಲಿನ ಅರಮನೆ ಮೈದಾನದಲ್ಲಿ ಯುವ ಸಮೃದ್ದಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಉದ್ಯೋಗದಾತರು ಮತ್ತು ಉದ್ಯೋಗಾಕಾಂಕ್ಷಿಗಳು https://skillconnect.kaushalkar.com ನಲ್ಲಿ ನೋಂದಾಯಿಸಿಕೊಂಡು ಅರ್ಜಿ ಭರ್ತಿ ಮಾಡಿ ನೋಂದಾಯಿಸಿಕೊಳ್ಳಬಹುದು. ಸಹಾಯವಾಣಿ ಸಂಖ್ಯೆ: 18005999918

ರಾಜ್ಯದ 10 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್, ರೋಪ್ ವೇ ಸೌಲಭ್ಯ.

ಬೆಂಗಳೂರು: ರಾಜ್ಯದ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಪ್ರವಾಸೋಧ್ಯಮ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಿದೆ. 10 ಪ್ರವಾಸಿತಾಣಗಳಲ್ಲಿ ಕೇಬಲ್ ಕಾರ್, ರೋಪ್ ವೇ ಸೌಲಭ್ಯ ನಿರ್ಮಿಸಲಾಗುವುದು ಎಂದು ಹೇಳಿದರು. ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕರ್ನಾಟಕ ಪ್ರವಾಸೋದ್ಯಮ ನೀತಿಯನ್ನು ಮತ್ತಷ್ಟು ಹೂಡಿಕೆದಾರರ ಹಾಗೂ ಪ್ರವಾಸಿಗರ ಸ್ನೇಹಿಯಾಗಿ ಮಾಡಲು, ಪರಿಷ್ಕೃತ ಪ್ರವಾಸೋದ್ಯಮ ನೀತಿ 2024-29 ಅನ್ನು ಜಾರಿಗೆ ತರಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿಗೆ 100 ಕೋಟಿ ರೂ.:ಕೊಪ್ಪಳ ಜಿಲ್ಲೆಯ […]

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಪತ್ರಕರ್ತರ ಸಂಘದಿಂದ ಅಭಿನಂದನೆ

ಬೆಂಗಳೂರು: ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ವ್ಯವಸ್ಥೆಯನ್ನು ಸರಕಾರ ತಿಳಿಸಿದೆ. ಸಿಎಂ ಸಿದ್ದರಾಮಯ್ಯ ಅವರು ಈ ಹಿಂದೆ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ಈ ಬಗ್ಗೆ ಭರವಸೆ ನೀಡಿದ್ದರು. ಈಗ ಇದನ್ನು ಕಾರ್ಯ ರೂಪಕ್ಕೆ ತಂದಿದ್ದಾರೆ. ಹೀಗಾಗಿ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಿಎಂ ಬಜೆಟ್ ಗೆ ವಿಶೇಷ ಅಭಿನಂದನೆ ವ್ಯಕ್ತಪಡಿಸಿದ್ದಾರೆ. ಈ ಮೂಲಕ ರಾಜ್ಯ ಪತ್ರಕರ್ತರ ಸಂಘದ ಮನವಿಗೆ ಸ್ಪಂದಿಸಿ , ನುಡಿದಂತೆ ನಡೆದಿದ್ದೀರಿ, ಹಾಗಾಗಿ ದಶಕಗಳ ಕನಸ್ಸು […]

15ನೇ ಬಾರಿಗೆ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿದ ಸಿಎಂ ಸಿದ್ದರಾಮಯ್ಯ: ಪ್ರವಾಸೋದ್ಯಮ, ಕೃಷಿ ಮಹಿಳೆಯರ ಸಬಲೀಕರಣ, ಶಿಕ್ಷಣ, ಆರೋಗ್ಯ; ಯಾವ ಇಲಾಖೆಗೆ ಎಷ್ಟು ಅನುದಾನ?

ಬೆಂಗಳೂರು: 2024-25ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 3.8 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. 15ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಿ ಈ ಮೂಲಕ ದಾಖಲೆ ಸೃಷ್ಟಿಸಿದ್ದಾರೆ. ಸತತ 3 ಗಂಟೆ 15 ನಿಮಿಷ ಬಜೆಟ್ ಪ್ರತಿಯನ್ನು ಓದಿ ಮುಕ್ತಾಯಗೊಳಿಸಿದ್ದಾರೆ. ಮದ್ಯದ ಘೋಷಿತ ಸ್ಲಾಬ್‌ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬಿಯರ್‌ […]