ವಿಮಾನದಲ್ಲಿ ನೀರಿನ ಬದಲು ಆಸಿಡ್ ಕುಡಿದ ಕರ್ನಾಟಕ ರಣಜಿ ತಂಡದ ನಾಯಕ ಮಯಾಂಕ್ ಅಗರ್ವಾಲ್: ಆಸ್ಪತ್ರೆಗೆ ದಾಖಲು; ತನಿಖೆ ಆರಂಭ

ಅಗರ್ತಲಾ: ಕರ್ನಾಟಕ ರಣಜಿ ತಂಡದ ನಾಯಕ ಮಯಾಂಕ್ ಅಗರ್ವಾಲ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಆಸಿಡ್ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ತಂಡವು ತ್ರಿಪುರಾದ ಅಗರ್ತಲಾದಿಂದ ಗುಜರಾತ್‌ನ ಸೂರತ್‌ಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸೋಮವಾರ ನಡೆದ ರಣಜಿ ಪಂದ್ಯದಲ್ಲಿ ತ್ರಿಪುರಾ ವಿರುದ್ಧ ಕರ್ನಾಟಕ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದ ಮಯಾಂಕ್ ಅಗರ್ವಾಲ್ ವಿಮಾನದಲ್ಲಿ ನೀರು ಕುಡಿದು ತೀವ್ರ ಅಸ್ವಸ್ಥಗೊಂಡಿದ್ದರು. ತನಗೆ ಒದಗಿಸಲಾದ ನೀರನ್ನು ಸೇವಿಸಿದ ಸ್ವಲ್ಪ ಸಮಯದ ನಂತರ, ಅಗರ್ವಾಲ್ ಅವರ ನಾಲಿಗೆ, ಬಾಯಿ ಮತ್ತು ಕೆನ್ನೆಗಳಲ್ಲಿ […]

ಅಕ್ರಮ ಆಸ್ತಿ ಗಳಿಕೆ ಆರೋಪ: ರಾಜ್ಯಾದ್ಯಂತ ಅಧಿಕಾರಿಗಳ ಮೇಲೆ ‘ಲೋಕಾ’ ಪ್ರಹಾರ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆದಿದೆ. ಬುಧವಾರ ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಲೋಕಾಯುಕ್ತ ದಾಳಿ ನಡೆದಿದೆ. ಲೋಕಾಯುಕ್ತ ಇನ್‌ಸ್ಪೆಕ್ಟರ್‌ ಅನಿಲ್ ರಾಥೋಡ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಹಾಸನದಲ್ಲಿ ಆಹಾರ ನೀರಿಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ, ಇನ್‌ಸ್ಪೆಕ್ಟರ್‌ ಜಗನ್ನಾಥ್ ನಿವಾಸದ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲಿಕ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ತಿರುಮಲೇಶ್, ಇನ್‌ಸ್ಪೆಕ್ಟರ್‌ಗಳಾದ ಬಾಲು, ಶಿಲ್ಪಾ ನೇತೃತ್ವದ ತಂಡ ದಾಳಿ […]

ಏರುಗತಿಯಲ್ಲಿ ಬೆಳ್ಳುಳ್ಳಿ ದರ: ಕೆಜಿಗೆ 400 ರೂ; ಫೆಬ್ರವರಿ ಅತ್ಯಂಕ್ಕೆ ಇಳಿಕೆ ಸಾಧ್ಯತೆ

ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ಬೆಳ್ಳುಳ್ಳಿ ದರ ಏರಿಕೆ ಕಂಡಿದ್ದು ಇಳಿಕೆಯಾಗುವ ಲಕ್ಷಣ ಸದ್ಯಕ್ಕಿಲ್ಲ. ಕೆಲ ದಿನಗಳಿಂದ ಕೆಜಿಗೆ 300 ರೂ.ವರೆಗೆ ಇದ್ದ ಬೆಳ್ಳುಳ್ಳಿ ದರ ಈ ವಾರ ಮತ್ತೆ ಏರಿಕ ಕಂಡಿದೆ. ಬೆಂಗಳೂರು ಸಹಿತ ಬಹುತೇಕ ಕಡೆ ಕೆಜಿಗೆ 400 ರೂ. ಗೆ ಮಾರಾಟವಾಗಿದೆ. ಉತ್ತಮ ಗುಣಮಟ್ಟದ ನಾಟಿ ಬೆಳ್ಳುಳ್ಳಿ ದರ 450 ರೂ.ದಿಂದ 500 ರೂ.ವರೆಗೂ ಮಾರಾಟವಾಗುತ್ತಿದೆ. ಮಾರುಕಟ್ಟೆಗೆ ಬರುವ ಬೆಳ್ಳುಳ್ಳಿ ಪ್ರಮಾಣ ಕಡಿಮೆಯಾಗಿರುವುದು ದರ ಏರಿಕೆಯಾಗಲು ಕಾರಣ ಎನ್ನಲಾಗಿದೆ. ಫೆಬ್ರವರಿಯಲ್ಲಿ ಉತ್ತರ ಭಾರತದ […]

ಲೋಕಸಭಾ ಚುನಾವಣೆ ಹಿನ್ನೆಲೆ: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಮೊದಲ ಕಾರ್ಯಕಾರಿಣಿ ಸಭೆ

ಬೆಂಗಳೂರು: ಬಿ.ವೈ.ವಿಜಯೇಂದ್ರ ಭಾಜಪಾದ ರಾಜ್ಯಾಧ್ಯಕ್ಷ ಹುದ್ದೆಗೆ ನೇಮಕಗೊಂಡು ರಾಜ್ಯ ಪದಾಧಿಕಾರಿಗಳ ತಂಡ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಶನಿವಾರ ನಡೆಯಲಿದೆ. ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯುವ ಕಾರ್ಯಕಾರಿಣಿ ಸಭೆಯಲ್ಲಿ 900ಕ್ಕೂ ಹೆಚ್ಚು ಆಹ್ವಾನಿತರು ಭಾಗವಹಿಸಲಿದ್ದಾರೆಂದು ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ. ಶುಕ್ರವಾರ ಕಾರ್ಯಾಕಾರಿಣಿ ನಡೆಯುವ ಸ್ಥಳದಲ್ಲಿನ ಸಿದ್ಧತೆಗಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಚಟುವಟಿಕೆ ಜೊತೆಗೆ ಮುಂದಿನ ಕಾರ್ಯ […]

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಎನ್‌ಪಿಎಸ್‌ ನಿಂದ ಹೊರಬಂದು ಒಪಿಎಸ್‌ಗೆ ಒಳಪಡಲು ಅವಕಾಶ; ಜೂನ್ 30ರೊಳಗೆ ಅರ್ಜಿ ಸಲ್ಲಿಸಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, 2006ರ ಏಪ್ರಿಲ್ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆ ಮೂಲಕ ಆಯ್ಕೆಯಾದ ನೌಕರರು, ರಾಷ್ಟ್ರೀಯ ಪಿಂಚಣಿ ಯೋಜನೆ (NPS) ವ್ಯಾಪ್ತಿಯಿಂದ ಹೊರಬಂದು ಹಳೆಯ ಪಿಂಚಣಿ ಯೋಜನೆಗೆ (OPS) ಬದಲಾಗಲು ಅವಕಾಶ ಮಾಡಿಕೊಟ್ಟಿದೆ. ಈ ಬಗ್ಗೆ ಆಡಳಿತ ಮತ್ತು ಸಮನ್ವಯ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಹಳೆಯ ಪಿಂಚಣಿ ಯೋಜನೆಗೆ ಒಳಪಡಲು 6 ಷರತ್ತುಗಳನ್ನು ರಾಜ್ಯ ಸರ್ಕಾರ ವಿಧಿಸಿದೆ. ಹಳೆಯ ಪಿಂಚಣಿ ಸೇವೆಗೆ ಒಳಪಡಲು ಸರ್ಕಾರಿ ನೌಕರರು ತಾವೇ ಒಪ್ಪಿಗೆ ಸೂಚಿಸಬೇಕು. […]