ಜ. 22 ರಂದು ರಾಜ್ಯದಲ್ಲಿ ಶಾಲೆಗಳಿಗೆ ರಜೆ ಇಲ್ಲ: ಶಿಕ್ಷಣ ಇಲಾಖೆ ಸ್ಪಷ್ಟನೆ
ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಜನವರಿ 22 ರಂದು ಶಾಲೆಗಳಿಗೆ ರಜೆ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. “ನಾವು ಜನವರಿ 22 ರಂದು ಶಾಲೆಗಳಿಗೆ ರಜೆ ಘೋಷಿಸುತ್ತಿಲ್ಲ. ಅದು ಕೆಲಸದ ದಿನವಾಗಿರುತ್ತದೆ. (ಬೆಂಗಳೂರು) ನಗರ ಅಥವಾ ರಾಜ್ಯದಲ್ಲಿ ಯಾವುದೇ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಉಂಟಾದರೆ, ಆಯಾ ಜಿಲ್ಲಾಧಿಕಾರಿಗಳು ರಜೆ ಘೋಷಿಸಲು ಕರೆ ನೀಡುತ್ತಾರೆ” ಎಂದು ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ಗುರುವಾರ ತಿಳಿಸಿರುವುದಾಗಿ ದ ಇಂಡಿಯನ್ ಎಕ್ಸ್ಪ್ರೆಸ್ ವರದಿ ಹೇಳಿದೆ. ಅಸೋಸಿಯೇಟೆಡ್ ಮ್ಯಾನೇಜ್‌ಮೆಂಟ್ ಆಫ್ ಸ್ಕೂಲ್ಸ್ […]
ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ
ಬೆಂಗಳೂರು: SSLC ಮತ್ತು ದ್ವಿತೀಯ PUC ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮತ್ತು ಮಾರ್ಚ್ 1 ರಿಂದ ಮಾರ್ಚ್ 22 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದೆ.
ವ್ಯಕ್ತಿಗಳ ಪಾಸ್‌ಪೋರ್ಟ್ ಅಥವಾ ಓಸಿಐ ಕಾರ್ಡ್ ಗಳನ್ನು ಬ್ಯಾಂಕ್ ಗಳು ಇಟ್ಟುಕೊಳ್ಳುವುದು ಕಾನೂನುಬಾಹಿರ: ಕರ್ನಾಟಕ ಹೈಕೋರ್ಟ್
ಬೆಂಗಳೂರು: ವ್ಯಕ್ತಿಗಳ ಪಾಸ್‌ಪೋರ್ಟ್ ಅಥವಾ ಓಸಿಐ ಕಾರ್ಡ್ಗಳನ್ನು ಬ್ಯಾಂಕ್ ಗಳು ತಮ್ಮ ಬಳಿ ಇಟ್ಟುಕೊಳ್ಳುವುದು ಕಾನೂನುಬಾಹಿರ ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಹೇಳಿದೆ. ಬ್ಯಾಂಕ್‌ನಿಂದ ಯಾವುದೇ ವ್ಯಕ್ತಿಯ ಪಾಸ್‌ಪೋರ್ಟ್ ಮತ್ತು ಒಸಿಐ ಕಾರ್ಡ್ ಅನ್ನು ಉಳಿಸಿಕೊಳ್ಳುವುದು ಕಾನೂನುಬಾಹಿರ ಎಂದು ತಿಳಿಸಿದ ಕರ್ನಾಟಕ ಹೈಕೋರ್ಟ್, ವಿಡಿಬಿ ಪ್ರಾಪರ್ಟಿ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕರಲ್ಲಿ ಒಬ್ಬರಾದ ಅರ್ಜಿದಾರ ಕೋಶಿ ವರ್ಗೀಸ್ ಅವರ ಪಾಸ್‌ಪೋರ್ಟ್ ಮತ್ತು ಓವರ್‌ಸೀಸ್ ಸಿಟಿಜನ್ ಆಫ್ ಇಂಡಿಯಾ (ಓಸಿಐ) ಕಾರ್ಡ್ ಅನ್ನು ಅವರಿಗೆ ವಾಪಸ್ ಮರಳಿಸುವಂತೆ ಬ್ಯಾಂಕಿಗೆ […]
ಸಂಗೀತ ನಿರ್ದೇಶಕ ಗುರುಕಿರಣ್ ಅತ್ತೆ ಮನೆಯಲ್ಲಿ 2.50 ಲಕ್ಷ ರೂ ನಾಪತ್ತೆ
ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ಅತ್ತೆ ಮನೆಯಲ್ಲಿ ಕಳ್ಳತನವಾಗಿದೆ. ಕಳ್ಳತನವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಡಿಸೆಂಬರ್ 31ರಂದು ಮಧ್ಯಾಹ್ನ ಚಂದ್ರ ಲೇಔಟ್ನಲ್ಲಿರುವ ತಮ್ಮ ಮನೆಯ ಕೋಣೆಯ ಕಪಾಟಿನಲ್ಲಿ 2.50 ಲಕ್ಷ ರೂ.ಗಳನ್ನು ಗುರುಕಿರಣ್ ಅತ್ತೆ ಕಸ್ತೂರಿ ಶೆಟ್ಟಿ ಇಟ್ಟಿದ್ದರು. ಜ.5 ರಂದು ಹಣಕ್ಕಾಗಿ ಹುಡುಕಿದಾಗ ಹಣ ಅಲ್ಲಿರಲಿಲ್ಲ. ಎಷ್ಟು ಹುಡುಕಾಡಿದರೂ ಹಣ ಸಿಗದೇ ಇದ್ದಾಗ ಜನವರಿ 7 ರಂದು ಚಂದ್ರಲೇಔಟ್ ಪೊಲೀಸ್ ಠಾಣೆಗೆ ಗುರುಕಿರಣ್ ಅತ್ತೆ ದೂರು ನೀಡಿದ್ದಾರೆ. ಈ ಸಂಬಂಧ ಪೊಲೀಸ್ […]
ಸಿಇಟಿ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಏಪ್ರಿಲ್ 18 ಮತ್ತು 19ರಂದು ಪರೀಕ್ಷೆ
ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಎರಡು ದಿನಗಳ ಮಟ್ಟಿಗೆ ಹಿಂದೂಡಿದ್ದು, ಏಪ್ರಿಲ್ 18 ಮತ್ತು 19ರಂದು ಪರೀಕ್ಷೆಗಳು ನಡೆಯಲಿವೆ. ಈ ಮೊದಲು ಏಪ್ರಿಲ್ 20 ಮತ್ತು 21ರಂದು ಪರೀಕ್ಷೆ ನಿಗದಿಯಾಗಿತ್ತು. ‘ಏಪ್ರಿಲ್ 21ರಂದು ಎನ್‌ಡಿಎ ಪರೀಕ್ಷೆ ನಡೆಯುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕನ್ನಡ ಪರೀಕ್ಷೆ ಏಪ್ರಿಲ್ 20ರಂದು ನಡೆಯಲಿದೆ’ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ. ವೃತ್ತಿಪರ ಕೋರ್ಸುಗಳಿಗೆ ಸೇರಲು ಬಯಸುವ ಅಭ್ಯರ್ಥಿಗಳು ಸಿಇಟಿ ಪರೀಕ್ಷೆಗೆ […]