ಸುಗ್ರೀವಾಜ್ಞೆ ಮೂಲಕ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಜಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಾದ್ಯಂತ ಅಂಗಡಿ ಮುಂಗಟ್ಟು, ವಾಣಿಜ್ಯ ಮಳಿಗೆ ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳ ಮೇಲ್ಭಾಗದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ಹಾಗೂ ಜಾಹೀರಾತು, ಸೂಚನಾ ಫಲಕಗಳಲ್ಲೂ ಕನ್ನಡಕ್ಕೆ ಆದ್ಯತೆ ನೀಡುವುದನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಕಾಯಿದೆಯನ್ನು’ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ರಾಜ್ಯ ಸರ್ಕಾರ ಶುಕ್ರವಾರ ಮಹತ್ವದ ನಿರ್ಣಯ ಕೈಗೊಂಡಿದೆ. ಇತ್ತೀಚೆಗೆ ತಮ್ಮ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುಗ್ರೀವಾಜ್ಞೆ ಮೂಲಕ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಜಾರಿ ಮಾಡುವುದಾಗಿ ತಿಳಿಸಿದ್ದರು. […]

ಕರಾವಳಿ-ಮಲೆನಾಡಿನಲ್ಲಿ ಅಕಾಲಿಕ ಮಳೆ: ಕಾಫಿ, ಅಡಿಕೆ ಬೆಳೆಗಾರರಲ್ಲಿ ಆತಂಕ

ಚಿಕ್ಕಮಗಳೂರು: ಕಳೆದ ಮೂರು ದಿನಗಳಿಂದ ರಾಜ್ಯದ ಕೆಲವು ಭಾಗಗಳಲ್ಲಿ ಅಕಾಲಿಕ ಮಳೆ ಸುರಿಯುತ್ತಿದೆ. ಮಳೆ ನಿರೀಕ್ಷಿಸದ ರೈತರು ಅಕಾಲಿಕ ಮಳೆಯಿಂದ ಕಂಗಾಲಾಗಿದ್ದಾರೆ. ಅದರಲ್ಲೂ ಇದು ಕಾಫಿ ಬೆಳೆಯ ಸಮಯವಾಗಿದ್ದು, ಕಟಾವು ಮಾಡಿರುವ ಕಾಫಿ ಬೆಳೆ ಕೂಡ ಮಳೆಗೆ ಹಾನಿಯಾಗುವ ಭೀತಿ ಎದುರಾಗಿದೆ. ಕೊಡಗಿನ ನಾಪೋಕ್ಲು ಹಾಗೂ ಮಡಿಕೇರಿ ಭಾಗದಲ್ಲಿ ನಿರಂತರ ಮಳೆ ಬೀಳುತ್ತಿದ್ದು, ಕಾಫಿ ಹಣ್ಣುಗಳು ಹಾಳಾಗುವ ಸಾಧ್ಯತೆ ಇದೆ ಎಂದು ಬೆಳೆಗಾರರು ಗಾಬರಿಯಾಗಿದ್ದಾರೆ. ಚಿಕ್ಕಮಗಳೂರು,ಕೊಡಗು ಹಾಗೂ ಮಡಿಕೇರಿಯ ಕೆಲವು ಭಾಗಗಳಲ್ಲಿ ಕಾಫಿ ಕೊಯ್ಲು ಮಾಡಿ ಒಣಗಲು […]

ಮುಖ್ಯಮಂತ್ರಿ ಪುತ್ರ ಯತೀಂದ್ರ ಹೇಳಿಕೆಗೆ ಪೇಜಾವರ ಸ್ವಾಮೀಜಿ ತಿರುಗೇಟು

ವಿಜಯಪುರ: ಬಿಜೆಪಿ ಮತ್ತು ಆರ್​ಎಸ್​ಎಸ್ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುತ್ತಿವೆ ಎಂಬ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ವಿಜಯಪುರ ನಗರದ ಜ್ಞಾನ ಯೋಗಾಶ್ರಮಕ್ಕೆ ಗುರುವಾರ ಭೇಟಿ ನೀಡಿ ಲಿಂಗೈಕ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಗದ್ದುಗೆ ದರ್ಶನ ಮಾಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಯತೀಂದ್ರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಭಾರತವನ್ನು ಹಿಂದೂರಾಷ್ಟ್ರ ಮಾಡಿದರೆ ಪಾಕಿಸ್ತಾನ ಮಾಡಲು ಯಾರೋ ಸಿದ್ಧತೆ ನಡೆಸುತ್ತಿದ್ದಾರೋ ಏನೋ. […]

ಮಕ್ಕಳು ಹೂ ಕಿತ್ತದ್ದಕ್ಕೆ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿದ ಭೂಪ: ಮಹಿಳೆ ಸ್ಥಿತಿ ಚಿಂತಾಜನಕ

ಬೆಳಗಾವಿ: ಅಂಗನವಾಡಿ ಮಕ್ಕಳು ಹೂ ಕಿತ್ತುಕೊಂಡರು ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿರುವ ಅಮಾನವೀಯ ಘಟನೆಯೊಂದು ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ನಡೆದಿದೆ. ಸುಗಂಧಾ ಮೋರೆ (50) ಹಲ್ಲೆಗೊಳಗಾದ ಅಂಗನವಾಡಿ ಸಹಾಯಕಿ. ಮನೆ ಮಾಲೀಕ ಕಲ್ಯಾಣಿ ಮೋರೆ ಮೂಗು ಕತ್ತರಿಸಿರುವ ಆರೋಪಿ. ಗಂಭೀರವಾಗಿ ಗಾಯಗೊಂಡಿರುವ ಸುಗಂಧಾ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಗನವಾಡಿ ಮಕ್ಕಳು ಪಕ್ಕದ ಮನೆಯ ಮುಂದೆ ಬೆಳೆದಿದ್ದ ಹೂ ಕಿತ್ತರು ಎಂಬ ಕ್ಷುಲ್ಲಕ ಕಾರಣಕ್ಕೆ ಅಂಗನವಾಡಿ ಸಹಾಯಕಿಗೆ ಅವಾಚ್ಯವಾಗಿ ನಿಂದಿಸಿ, […]

ಯುವನಿಧಿ ಯೋಜನೆ: 7 ದಿನಗಳಲ್ಲಿ ರಾಜ್ಯಾದ್ಯಂತ 19,392 ಮಂದಿ ಯುವಕರು ನೋಂದಣಿ

ಕಲಬುರಗಿ: ಯುವನಿಧಿ ಯೋಜನೆಗೆ ಕಳೆದ 7 ದಿನಗಳಲ್ಲಿ ರಾಜ್ಯಾದ್ಯಂತ 19,392 ಮಂದಿ ಯುವಕರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವ ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಕಾಂಗ್ರೆಸ್‌ನ ಐದನೇ ಗ್ಯಾರಂಟಿ ಯುವ ನಿಧಿಯ ನೋಂದಣಿಯನ್ನು ಡಿಸೆಂಬರ್ 26 ರಂದು ಬೆಂಗಳೂರಿನಲ್ಲಿ ಪ್ರಾರಂಭಿಸಲಾಯಿತು. ಯುವ ನಿಧಿ ಅಡಿಯಲ್ಲಿ, 2023 ರಲ್ಲಿ ತಮ್ಮ ಪದವಿ ಮತ್ತು ಡಿಪ್ಲೊಮಾವನ್ನು ಪೂರ್ಣಗೊಳಿಸಿದ ನಂತರ ನಿರುದ್ಯೋಗಿಗಳಾಗಿ ಉಳಿದಿರುವ ಯುವಕರು ಎರಡು ವರ್ಷಗಳವರೆಗೆ ಅಥವಾ ಅವರು ಉದ್ಯೋಗ ಪಡೆಯುವವರೆಗೆ ಕ್ರಮವಾಗಿ […]