ಲೋಕಸಭಾ ಚುನಾವಣೆ ಹಿನ್ನೆಲೆ ತೆಲಂಗಾಣದಿಂದ ಸ್ಪರ್ಧಿಸುವಂತೆ ಸೋನಿಯಾಗೆ ಕಾಂಗ್ರೆಸ್​ ಒತ್ತಾಯ

ಹೈದರಾಬಾದ್​ (ತೆಲಂಗಾಣ): ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್​ 2024ರ ಲೋಕಸಭೆ ಚುನಾವಣೆಗೆ ರಾಜ್ಯದ 17 ಲೋಕಸಭಾ ಕ್ಷೇತ್ರಗಳ ಪೈಕಿ ಒಂದರಿಂದ ಸ್ಪರ್ಧಿಸಲು ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮನವಿ ಮಾಡಿದೆ.2024ರ ಲೋಕಸಭಾ ಚುನಾವಣೆಯ ವೇಳೆ ತೆಲಂಗಾಣದಿಂದ ಸ್ಪರ್ಧಿಸ ಬೇಕು ಎಂದು ರಾಜ್ಯ ಕಾಂಗ್ರೆಸ್‌ನ ರಾಜಕೀಯ ವ್ಯವಹಾರಗಳ ಸಮಿತಿ ನಿರ್ಣಯ ತೆಗೆದುಕೊಂಡಿದೆ. ಸೋಮವಾರ ನಡೆದ ತೆಲಂಗಾಣ ಕಾಂಗ್ರೆಸ್ ತನ್ನ ರಾಜಕೀಯ ವ್ಯವಹಾರಗಳ ಸಮಿತಿ ಸಭೆಯಲ್ಲಿ ಈ ನಿರ್ಣಯವನ್ನು ಅಂಗೀಕರಿಸಲಾಗಿದೆ. ತೆಲಂಗಾಣ […]

ಅಕ್ರಮ ಸಕ್ರಮ ಸರಾಗ ಪ್ರಕ್ರಿಯೆಗೆ ಬಗರ್ ಹುಕುಂ ಆ್ಯಪ್‌ ಬಿಡುಗಡೆ ಮಾಡಿದ ಕಂದಾಯ ಇಲಾಖೆ

ಬೆಂಗಳೂರು: ಕೃಷಿ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಬಗರ್ ಹುಕುಂ ಆ್ಯಪ್‌ ಬಿಡುಗಡೆ ಮಾಡಿದೆ. ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದಕ್ಕೆ ಸರ್ಕಾರ ಬಗರ್ ಹುಕುಂ ಆ್ಯಪ್ ರೂಪಿಸಿದೆ. ಆ್ಯಪ್ ಬಿಡುಗಡೆ ಮಾಡಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ನಮೂನೆ 50, 53, 57ರ ಅಕ್ರಮ ಸಕ್ರಮ ಯೋಜನೆಯಡಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ ಕೃಷಿಯೇತರ ಚಟುವಟಿಕೆಗಳಲ್ಲಿ […]

60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ: ಕೋವಿಡ್ ಹೆಚ್ಚಳ ಹಿನ್ನೆಲೆ ಮುಂಜಾಗರೂಕತಾ ಕ್ರಮ

ಬೆಂಗಳೂರು: ಕೇರಳದಲ್ಲಿ ಕೋವಿಡ್-19 ಉಪತಳಿ ಜೆಎನ್.1 ಪ್ರಕರಣಗಳ ಹೆಚ್ಚಳ ಭೀತಿಯ ನಡುವೆ, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ಸಹವರ್ತಿ ರೋಗಗಳನ್ನು ಹೊಂದಿರುವವರು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಕೋವಿಡ್-19 ಉಪತಳಿ ಜೆಎನ್.1 ರ ರೋಗಲಕ್ಷಣಗಳನ್ನು ವರದಿ ಮಾಡಿರುವ ಜನರಲ್ಲಿ ಪರೀಕ್ಷೆಗಳನ್ನು ಹೆಚ್ಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಕೇರಳದ ಗಡಿ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರ ಕಣ್ಗಾವಲು ಹೆಚ್ಚಿಸಿದೆ ಎಂದು ಸಚಿವರು ಮಾಹಿತಿ ನೀಡಿದರು. ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದ್ದು, ಸದ್ಯಕ್ಕೆ […]

ಬೆಳಗಾವಿ ಮಹಿಳೆ ವಿವಸ್ತ್ರ ಪ್ರಕರಣ ಕುರಿತು ಹೈಕೋರ್ಟ್ ಸಲಹೆ : ಮೌನ ವಹಿಸಿದ್ದ ಗ್ರಾಮಸ್ಥರಿಗೆ ದಂಡ ವಿಧಿಸುವ ಕಾನೂನು ರೂಪಿಸುವಂತೆ ಅಭಿಪ್ರಾಯ

ಬೆಂಗಳೂರು : ಗ್ರಾಮದಲ್ಲಿ ಅಮಾನವೀಯ ಕೃತ್ಯ ನಡೆಯುತ್ತಿದ್ದರೂ ಅದನ್ನು ತಡೆಯದೆ ಮೌನವಾಗಿದ್ದ ಇಡೀ ಗ್ರಾಮಸ್ಥರಿಗೆ ದಂಡ ವಿಧಿಸಬಹುದಾದ ಸಾಮೂಹಿಕ ಜವಾಬ್ದಾರಿ ನಿಗದಿಪಡಿಸುವ ಮಾದರಿಯಲ್ಲಿ ಯೋಜನೆ ಅಥವಾ ಕಾನೂನು ರೂಪಿಸಲು ರಾಜ್ಯ ಹೈಕೋರ್ಟ್ ಸರ್ಕಾರಕ್ಕೆ ಮೌಖಿಕ ಸಲಹೆ ನೀಡಿದೆ.ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ ಪ್ರಕರಣ ಸಂಬಂಧ ಮೌನ ವಹಿಸಿದ್ದ ಇಡೀ ಗ್ರಾಮದವರಿಗೆ ಶಿಕ್ಷೆ ಅಥವಾ ದಂಡ ವಿಧಿಸಬಹುದಾದ ಯೋಜನೆ ರೂಪಿಸುವಂತೆ ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ವಿಚಾರಣೆ ವೇಳೆ ನ್ಯಾಯಪೀಠ, ಬ್ರಿಟಿಷ್ ಆಡಳಿತದಲ್ಲಿ ವಿಲಿಯಂ ಬೆಂಟಿಂಕ್ […]

ರಘುರಾಮ್​ ರಾಜನ್ ​: ಶೇ.6ರಷ್ಟು ಜಿಡಿಪಿ ಇದ್ದರೆ 2047ರಲ್ಲೂ ಭಾರತ ಕೆಳಮಧ್ಯಮ ಆರ್ಥಿಕತೆಯ ರಾಷ್ಟ್ರ

ಹೈದರಾಬಾದ್: ಜನಸಂಖ್ಯೆ ಬೆಳವಣಿಗೆಯು ದೇಶದ ಆರ್ಥಿಕ ಪ್ರಗತಿಯ ಮೇಲೆ ಪರಿಣಾಮ ಬೀರುತ್ತದೆ. ಅಂದರೆ ವಯಸ್ಸಾದ ಜನಸಂಖ್ಯೆ ಹೊರೆಯಾಗುತ್ತದೆ. ಕಳೆದ ಎರಡು ತ್ರೈಮಾಸಿಕಗಳಲ್ಲಿ ದೇಶದ ಜಿಡಿಪಿ ಬೆಳವಣಿಗೆಯು ಶೇ 7.5ರಷ್ಟು ದಾಖಲಾಗಿದೆ. ಈಗಿನ ಕಾರ್ಮಿಕ ಬಲ ಮತ್ತು ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ತಾಳೆ ಹಾಕಿದರೆ, ಇದು ತುಂಬಾ ಕಡಿಮೆ. ಇದು ಜಿ20 ರಾಷ್ಟ್ರಗಳಲ್ಲಿಯೇ ಅತ್ಯಂತ ಕಡಿಮೆ ಎಂದು ರಾಜನ್ ವಿವರಿಸಿದರು. 2047ರ ವೇಳೆಗೆ ಭಾರತ ಅಭಿವೃದ್ಧಿಶೀಲ ಮತ್ತು ಸಿರಿವಂತ ರಾಷ್ಟ್ರವಾಗಿ ಬೆಳೆಯಬೇಕಾದರೆ, ಈಗಿನ ಆರ್ಥಿಕ ಪ್ರಗತಿ ಸಾಕಾಗದು ಎಂದು ಭಾರತೀಯ […]