SM Krishna: ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ ಎಸ್ ಎಂ ಕೃಷ್ಣ ನಿಧನ

ಬೆಂಗಳೂರು: ಮಾಜಿ ಸಿಎಂ ಎಸ್. ಎಂ ಕೃಷ್ಣ (92) ಮಂಗಳವಾರ (ಡಿ.10 ರಂದು) ನಸುಕಿನ ಜಾವ 2:30ರ ವೇಳೆಗೆ ವಿಧಿವಶರಾಗಿದ್ದಾರೆ. ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ ಎಂದು ತಿಳಿದು ಬಂದಿದೆ. ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು.
ಉಳ್ಳಾಲ: ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ಯುವತಿಯರು ಮೃತ್ಯು..!

ಉಳ್ಳಾಲ: ಖಾಸಗಿ ರೆಸಾರ್ಟ್ ವೊಂದರ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರದಲ್ಲಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಮೃತರನ್ನು ಕೀರ್ತನಾ ಎನ್ (21), ನಿಶಿತಾ ಎಂ.ಡಿ. (21) ಹಾಗೂ ಪಾರ್ವತಿ ಎಸ್. (20) ಎಂದು ಗುರುತಿಸಲಾಗಿದೆ. ಈ ಮೂವರು ಮೈಸೂರು ನಿವಾಸಿಗಳೆಂದು ಪೊಲೀಸರು ತಿಳಿಸಿದ್ದಾರೆ. ಸೋಮೇಶ್ವರ ಗ್ರಾಮದ ಬಟ್ಟಪ್ಪಾಡಿ ಅಡ್ಡರಸ್ತೆ ಪೆರಿಬೈಲ್ ಎಂಬಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ಈ ದುರಂತ ಸಂಭವಿಸಿದೆ. ಮೈಸೂರಿನ ಈ ಮೂವರು […]
ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ವಿಧಿವಶ.

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ತಾಯಿ ಸರೋಜಾ ಭಾನುವಾರ ನಿಧನರಾಗಿದ್ದಾರೆ. ಅನಾರೋಗದ್ಯದ ಹಿನ್ನೆಲೆ ಸುದೀಪ್ ತಾಯಿ ಸರೋಜಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಯ ವೇಳೆಗೆ ಕುಟುಂಬಸ್ಥರು ಪಾರ್ಥಿವ ಶರೀರವನ್ನು ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ. ಸುದೀಪ್ ಅವರ ತಾಯಿಯವರು ಕಳೆದ ಕೆಲ ದಿನಗಳಿಂದಲೂ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯ ಸಂಬಂಧ […]
ತಮಿಳುನಾಡು: ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ: ಹಲವರಿಗೆ ಗಾಯ

ತಿರುವಲ್ಲೂರು(ತಮಿಳುನಾಡು): ಇಲ್ಲಿ ಎಕ್ಸ್‌ಪ್ರೆಸ್ ರೈಲೊಂದು ಗೂಡ್ಸ್ ರೇಕ್‌ಗೆ ಢಿಕ್ಕಿ ಹೊಡೆದಿದ್ದು, ಪ್ಯಾಸೆಂಜರ್ ರೈಲಿನ ಎರಡು ಬೋಗಿಗಳು ಬೆಂಕಿಗೆ ಆಹುತಿಯಾಗಿವೆ. ಎಕ್ಸ್‌ಪ್ರೆಸ್ ರೈಲಿನ ಕನಿಷ್ಠ 6 ಬೋಗಿಗಳು ಹಳಿತಪ್ಪಿದ್ದು, ಕೆಲವು ಪ್ರಯಾಣಿಕರು ಗಾಯಗೊಂಡ ಬಗ್ಗೆ ವರದಿಯಾಗಿದೆ. 12578 ಮೈಸೂರು-ದರ್ಬಂಗಾ ಎಕ್ಸ್‌ಪ್ರೆಸ್ ಚೆನ್ನೈ ಹೊರವಲಯದ ಕವರೈಪೆಟ್ಟೈನಲ್ಲಿ ರಾತ್ರಿ 8:50 ಕ್ಕೆ ನಿಂತಿದ್ದ ಗೂಡ್ಸ್ ರೈಲಿಗೆ ಢಿಕ್ಕಿ ಹೊಡೆದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳು ಮತ್ತು ಆಂಬ್ಯುಲೆನ್ಸ್‌ಗಳನ್ನು ಸ್ಥಳಕ್ಕೆ ರವಾನಿಸಲಾಗಿದ್ದು ರಕ್ಷಣ ಕಾರ್ಯ ಭರದಿಂದ ನಡೆಸಲಾಗುತ್ತಿದೆ ಎಂದು ರೈಲ್ವೆ […]
ತಿರುಪತಿ ಲಡ್ಡು ವಿವಾದ: ದೇವಸ್ಥಾನಗಳಲ್ಲಿ ನಂದಿನಿ ತುಪ್ಪವನ್ನು ಬಳಸುವಂತೆ ರಾಜ್ಯ ಸರ್ಕಾರ ಸೂಚನೆ.

ಬೆಂಗಳೂರು: ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಶುಕ್ರವಾರ ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಾಲಯಗಳಲ್ಲಿ ತಯಾರಿಸುವ ಪ್ರಸಾದದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದೆ. ದೇವಸ್ಥಾನಗಳಲ್ಲಿ ಕರ್ನಾಟಕ ಹಾಲು ಒಕ್ಕೂಟದ(ಕೆಎಂಎಫ್) ನಂದಿನಿ ಬ್ರಾಂಡ್ ತುಪ್ಪವನ್ನು ಮಾತ್ರ ಬಳಸುವಂತೆ ದೇವಸ್ಥಾನಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ. ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಬರುವ […]