ಮೊದಲ ಬಾರಿಗೆ 71 ಸಾವಿರದ ಮಟ್ಟ ದಾಟಿ ಇತಿಹಾಸ ಸೃಷ್ಟಿಸಿದ ಸೆನ್ಸೆಕ್ಸ್

ಮುಂಬೈ: ಅಮೆರಿಕದ ಫೆಡರಲ್ ರಿಸರ್ವ್ ತನ್ನ ಪ್ರಮುಖ ಬಡ್ಡಿದರಗಳನ್ನು ಯಥಾಸ್ಥಿತಿಯಲ್ಲಿ ಇರಿಸಿದ ನಂತರ ಜಾಗತಿಕ ಮಾರುಕಟ್ಟೆಗಳಲ್ಲಿನ ಆಶಾವಾದಿ ಪ್ರವೃತ್ತಿ, ಮುಂದಿನ ವರ್ಷ ದರ ಕಡಿತದ ಸಂಕೇತಗಳು ಮತ್ತು ನಿರಂತರ ವಿದೇಶಿ ನಿಧಿಯ ಒಳಹರಿವಿನಿಂದ ಭಾರತದ ಷೇರು ಮಾರುಕಟ್ಟೆಗಳು ಏರಿಕೆ ಕಂಡಿವೆ. 30 ಷೇರುಗಳ ಬಿಎಸ್‌ಇ ಸೆನ್ಸೆಕ್ಸ್ 569.88 ಪಾಯಿಂಟ್ಸ್ ಏರಿಕೆ ಕಂಡು ಸಾರ್ವಕಾಲಿಕ ಗರಿಷ್ಠ 71,084.08 ಕ್ಕೆ ತಲುಪಿದೆ. ಶುಕ್ರವಾರದ ಬೆಳಗಿನ ವಹಿವಾಟಿನಲ್ಲಿ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಏರಿಕೆ ಕಂಡು ಬಂದಿದ್ದು, ಬಿಎಸ್‌ಇ ಸೆನ್ಸೆಕ್ಸ್ ಶುಕ್ರವಾರ ಮೊದಲ […]

10 ವರ್ಷಗಳ ಬಳಿಕ ವಾಹನ ಚಾಲನಾ ತರಬೇತಿ ಶುಲ್ಕ ಪರಿಷ್ಕರಣೆ: ದುಬಾರಿಯಾಗಲಿದೆ ವಾಹನ ಚಾಲನಾ ತರಬೇತಿ

ಬೆಂಗಳೂರು: ರಾಜ್ಯದ ಡ್ರೈವಿಂಗ್ ಸ್ಕೂಲ್‌ಗಳಲ್ಲಿ ವಾಹನ ಚಾಲನಾ ತರಬೇತಿ ಶುಲ್ಕವನ್ನು 10 ವರ್ಷಗಳ ಬಳಿಕ ಪರಿಷ್ಕರಿಸಲಾಗಿದ್ದು, 2024ರ ಜನವರಿ 1 ರಿಂದ ಚಾಲ್ತಿಗೆ ಬರಲಿದೆ. ಈ ಪರಿಷ್ಕರಣೆಯೊಂದಿಗೆ ವಾಹನ ಚಾಲನಾ ತರಬೇತಿ ಶುಲ್ಕವು 800 ರೂಪಾಯಿಯಿಂದ 3,000 ರೂಪಾಯಿಗೆ ಏರಿಕೆಯಾಗಲಿದೆ ಎಂದು ಎಚ್.ಟಿ ವರದಿ ಮಾಡಿದೆ. ಕರ್ನಾಟಕದಲ್ಲಿ ಡೈವಿಂಗ್ ಸ್ಕೂಲ್‌ಗಳಲ್ಲಿ ತರಬೇತಿ ಶುಲ್ಕವನ್ನು ಹೆಚ್ಚಿಸುವುದಕ್ಕೆ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಈ ಆದೇಶದ ಪ್ರಕಾರ, ವಾಹನ ಚಾಲನಾ ತರಬೇತಿ 2024ರ ಜ.1ರಿಂದ ಕೊಂಚ ದುಬಾರಿಯಾಗಲಿದೆ. ಕಾರು ಚಾಲನೆ […]

ಶಬರಿಮಲೆ ಅಯ್ಯಪ್ಪ ದೇವಾಲಯದಲ್ಲಿ ಜನದಟ್ಟಣೆ: ಪೊಲೀಸರಿಂದ ಅವಕಾಶ ನಿರಾಕರಣೆ; ಭಕ್ತರಿಂದ ರಸ್ತೆ ತಡೆದು ಪ್ರತಿಭಟನೆ

ಕೊಚ್ಚಿ: ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಾಲಯದಲ್ಲಿ ಈ ವರ್ಷ ಅಯ್ಯಪ್ಪ ವೃತಧಾರಿಗಳ ಭಾರೀ ಜನಸಂದಣಿ ಕಂಡು ಬರುತ್ತಿದ್ದು, ದೇಗುಲದಲ್ಲಿ ಮೂಲಭೂತ ಸೌಕರ್ಯಗಳು ಮತ್ತು ಸುರಕ್ಷತಾ ಕ್ರಮಗಳ ಕೊರತೆಯ ಬಗ್ಗೆ ಯಾತ್ರಾರ್ಥಿಗಳು ದೂರಿದ್ದಾರೆ. ಯಾತ್ರಾರ್ಥಿಗಳ ವಿಪರೀತ ದಟ್ಟಣೆಯನ್ನು ಕಂಡು ಆಂಧ್ರಪ್ರದೇಶ, ತಮಿಳುನಾಡು, ತ್ರಿಶೂರ್, ಕೋಝಿಕ್ಕೋಡ್ ಮತ್ತು ಮಲಪ್ಪುರಂ ಮುಂತಾದ ಸ್ಥಳಗಳಿಂದ ಹಲವಾರು ಭಕ್ತರು ದೇಗುಲ ಪ್ರವಾಸವನ್ನು ನಿಲ್ಲಿಸಿ ಮನೆಗೆ ಮರಳಿದ್ದಾರೆ ಎಂದು ಸ್ಥಳೀಯ ವರದಿಗಳು ತಿಳಿಸಿವೆ. ಪೊಲೀಸರು ವಾಹನಗಳನ್ನು ತಡೆದಿದ್ದು ಪ್ರವಾಸಿಗರನ್ನು ಗಂಟೆಗಳ ಕಾಲ ಕಾಯುವಂತೆ ಮಾಡಲಾಗಿತ್ತು ಇದರಿಂದ […]

13,308 ಉದ್ಯೋಗ ಸೃಷ್ಟಿ ನಿರೀಕ್ಷೆ : ರಾಜ್ಯದಲ್ಲಿ 34,115 ಕೋಟಿ ಹೂಡಿಕೆಗೆ ಅನುಮೋದನೆ

ಬೆಳಗಾವಿ:ಸಿಎಂ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆದ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ, ಹೆಚ್ಚುವರಿ ರೂ 13,911 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್‌ಕಾನ್‌ ಕಂಪನಿ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ, ಒಟ್ಟು 34,115 ಕೋಟಿ ರೂ ಮೊತ್ತದ ಬಂಡವಾಳ ಹೂಡಿಕೆ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು.ಮುಖ್ಯಮಂತ್ರಿ […]

ಮಲಾಡ್ ಕನ್ನಡ ಸಂಘದ ವತಿಯಿಂದ ಒಳಾಂಗಣ ಕ್ರೀಡಾ ಸ್ಪರ್ಧೆ

ಮಲಾಡ್: ಯುವಕರಲ್ಲಿ ಸಂಘದ ಕಾರ್ಯ ಚಟುವಟಿಕೆಯ ಜೊತೆಗೆ ಕ್ರೀಡಾಸಕ್ತಿ ಬೆಳೆಯಬೇಕೆಂಬ ಉದ್ದೇಶದಿಂದ ಮಲಾಡ್ ಕನ್ನಡ ಸಂಘವು ಪ್ರತಿವರ್ಷ ಸಂಘದ ಸದಸ್ಯರ ಮಕ್ಕಳಿಗೆ ಮತ್ತು ಯುವಕರಿಗೆ ಒಳಾಂಗಣ ಕ್ರೀಡಾ ಸ್ಪರ್ಧೆಯನ್ನು ಆಯೋಜಿಸುತ್ತಾ ಬಂದಿದೆ. ಕ್ರೀಡೆ ಮನಸ್ಸನ್ನು ಕ್ರಿಯಾಶೀಲಗೊಳಿಸುವ ಮೂಲಕ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುತ್ತದೆ ಜೊತೆಗೆ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಕ್ರೀಡೆ ಸ್ಫೂರ್ತಿಯಾಗಿದೆ ಎಂದು ಮಲಾಡ್ ಕನ್ನಡ ಸಂಘದ ಅಧ್ಯಕ್ಷ ನ್ಯಾಯವಾದಿ ಜಗದೀಶ್ ಎಸ್ ಹೆಗ್ಡೆ ಅಭಿಪ್ರಾಯಪಟ್ಟರು. ಡಿ. 10 ರಂದು ಮಲಾಡ್ ಮಾರ್ವೆ ರೋಡ್ ನ ಯುನಿಟಿ […]