‘ಕೆಎಸ್‌ಆರ್‌ಟಿಸಿ’ ಬಳಕೆಗೆ ಸಂಬಂಧಿಸಿದಂತೆ ಕೇರಳ ವಿರುದ್ಧದ ಕಾನೂನು ಹೋರಾಟದಲ್ಲಿ ಕರ್ನಾಟಕಕ್ಕೆ ಜಯ

ಚನ್ನೈ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ‘ಕೆಎಸ್‌ಆರ್‌ಟಿಸಿ’ ಹೆಸರು ಬಳಸಲು ಯಾವುದೇ ಕಾನೂನು ನಿಷೇಧವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. KSRTC ಯ ವಿಶೇಷ ಬಳಕೆಗಾಗಿ ಕೇರಳ RTC ಹಕ್ಕನ್ನು ನ್ಯಾಯಾಲಯ ವಜಾಗೊಳಿಸಿದೆ. ಎರಡೂ ರಾಜ್ಯ ಸಾರಿಗೆ ನಿಗಮಗಳು ದಶಕಗಳಿಂದ ಸಂಕ್ಷಿಪ್ತ ರೂಪವನ್ನು ಬಳಸುತ್ತಿವೆ. ಕರ್ನಾಟಕ SRTC ಸಂಕ್ಷಿಪ್ತ ರೂಪ ಮತ್ತು ಅದರ ಲೋಗೋವನ್ನು ಪೇಟೆಂಟ್‌ಗಳು, ವಿನ್ಯಾಸಗಳು ಮತ್ತು ಟ್ರೇಡ್‌ಮಾರ್ಕ್‌ಗಳ ನಿಯಂತ್ರಕ ಜನರಲ್‌ನಲ್ಲಿ ನೋಂದಾಯಿಸಿದೆ. ಸಂಸ್ಥೆಯು ‘KSRTC’ ಸಂಕ್ಷಿಪ್ತ ಬಳಕೆಗಾಗಿ ಟ್ರೇಡ್ ಮಾರ್ಕ್ ಪ್ರಮಾಣ ಪತ್ರವನ್ನು […]

ಡಿ. 26 ರಿಂದ ಯುವನಿಧಿ ಯೋಜನೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭ: ಜನವರಿ 1 ರಿಂದ ಹಣ ವರ್ಗಾವಣೆ ಸಾಧ್ಯತೆ

ಬೆಂಗಳೂರು: ಕರ್ನಾಟಕದಲ್ಲಿ ಚುನಾವಣೆಗೂ ಮುನ್ನ ಕಾಂಗ್ರೆಸ್‌ ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲಿ ನಿರುದ್ಯೋಗಿ ಯುವಕರಿಗೆ ಆರ್ಥಿಕ ಸಹಾಯ ನೀಡುವ ಯುವನಿಧಿ ಯೋಜನೆ ರಾಜ್ಯಾದ್ಯಂತ ಜಾರಿಯಾಗಲಿದೆ ಎಂದು ವರದಿ ಹೇಳಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಡಿಸೆಂಬರ್ 26 ರಿಂದ ಪ್ರಾರಂಭವಾಗಲಿದೆ. ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಸಮೀಪದ ಆನ್‌ಲೈನ್‌ ಸೆಂಟರ್‌ಗಳಿಗೆ ತೆರಳಿ ಸೇವಾ ಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು. ಇಲ್ಲವೇ ಖುದ್ದಾಗಿಯೂ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಪರಿಶೀಲನೆ ಬಳಿಕ ಅರ್ಹರಿಗೆ 2024 ರ […]

ಶುಕ್ರವಾರ ಭಜನ್ ಲಾಲ್​ ಶರ್ಮಾ ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

ಜೈಪುರ್​(ರಾಜಸ್ಥಾನ) : ಇತ್ತೀಚೆಗೆ ನಡೆದ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಸರ್ಕಾರ ರಚಿಸಲು ಸಜ್ಜಾಗಿದೆ.ಈಗಾಗಲೇ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಭಜನ್​ ಲಾಲ್​ ಶರ್ಮಾ ಅವರನ್ನು ಆಯ್ಕೆ ಮಾಡಿದ್ದು, ಡಿ.15ರಂದು ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಡಿಸೆಂಬರ್​ 15ರಂದು ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್​ ಲಾಲ್​ ಶರ್ಮಾ ಪ್ರಮಾಣವಚನ ಸ್ವೀಕರಿಸಲಿದ್ದಾರೆ 1 ಲಕ್ಷಕ್ಕೂ ಅಧಿಕ ಜನ ಭಾಗಿಯಾಗುವ ನಿರೀಕ್ಷೆ : ಪದಗ್ರಹಣ ಕಾರ್ಯಕ್ರಮದಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಜನ ಭಾಗಿಯಾಗುವ ನಿರೀಕ್ಷೆ ಇದೆ. […]

ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಆರು ದಿನಗಳ ಕಾಲ ನಿಷೇಧ!

ಚಿಕ್ಕಮಗಳೂರು: ಡಿ.17 ರಿಂದ 26 ರವರೆಗೆ ಚಿಕ್ಕಮಗಳೂರಿನಲ್ಲಿ ನಡೆಯುವ ದತ್ತ ಜಯಂತಿ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ದತ್ತಪೀಠ, ಮುಳ್ಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯದಾರ, ಸೀತಾಳ್ಳಯ್ಯನಗಿರಿ ಸೇರಿದಂತೆ ಹಲವು ತಾಣಗಳಿಗೆ ಜಿಲ್ಲಾಡಳಿತ ಪ್ರವಾಸಿಗರನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ. ಕಾಫಿನಾಡಿನ ಪ್ರಮುಖ ಪ್ರವಾಸಿ ತಾಣಗಳಿಗೆ 6 ದಿನಗಳ ಕಾಲ ನಿಷೇಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಹೌದು, ಡಿಸೆಂಬರ್ 22 ರಿಂದ 26ರ ವರೆಗೆ ಚಂದ್ರದ್ರೋಣ ಪರ್ವತಗಳ ಸಾಲಿನ ಪ್ರಮುಖ ತಾಣಗಳಿಗೆ ಪ್ರವಾಸಿಗರನ್ನು ನಿಷೇಧಿಸಲಾಗಿದೆ.ಈ ಬಗ್ಗೆ ಮಾತನಾಡಿರುವ ಬಜರಂಗದಳ ಪ್ರಾಂತ ಸಂಚಾಲಕ […]

ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ದರ ಏರಿಕೆ : ಮಳೆ ಕೊರತೆ

ಬೆಂಗಳೂರು: ನಗರದ ಯಶವಂತಪುರ ಈರುಳ್ಳಿ, ಆಲೂಗಡ್ಡೆ ಬೆಳ್ಳುಳ್ಳಿ ಮಾರುಕಟ್ಟೆಯಲ್ಲಿ ಮಧ್ಯಪ್ರದೇಶ ಮತ್ತು ಗುಜರಾತ್​ನಿಂದ ನಿತ್ಯ ಮೂರು ಸಾವಿರದಿಂದ ನಾಲ್ಕು ಸಾವಿರ ಚೀಲದಷ್ಟು ಬೆಳ್ಳುಳ್ಳಿ ಬರುತ್ತಿತ್ತು. ಆದರೆ, ಈ ಬಾರಿ ನಿರೀಕ್ಷಿತ ಫಸಲು ಬರದ ಕಾರಣ ಉತ್ತಮ ದರ್ಜೆಯ ಹೈಬ್ರಿಡ್ ಬೆಳ್ಳುಳ್ಳಿ ದರ 260 ರೂಪಾಯಿಗೆ ಏರಿಕೆ ಕಂಡಿರುವುದರಿಂದ ರಿಟೇಲ್ ದರ ಕೂಡ ಹೆಚ್ಚಾಗಿದ್ದು, ಇದರಿಂದ ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಚಿಲ್ಲರೆ ಮಾರುಕಟ್ಟೆಯಲ್ಲಿ ನಾಟಿ ಬೆಳ್ಳುಳ್ಳಿಯ ದರ ಒಂದು ಕೆಜಿಗೆ 400 ರೂಪಾಯಿ ತಲುಪಿದ್ದು, ಹೈಬ್ರಿಡ್ ಬೆಳ್ಳುಳ್ಳಿ ಧಾರಣೆಯು […]