ಟರ್ಮಿನಲ್‌ 2ರಿಂದ ಬಸ್‌ ಸೇವೆ : ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ

ದೇವನಹಳ್ಳಿ: ‘ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಿತ್ಯ ಬಂದು ಹೋಗುವ ಪ್ರಯಾಣಿಕರ ಸಂಖ್ಯೆ ಸುಮಾರು 1 ಲಕ್ಷದಷ್ಟಿದೆ. ಆ ಹಿನ್ನೆಲೆ ಎರಡನೇ ಟರ್ಮಿನಲ್‌ನಲ್ಲಿ ಕೆಎಸ್‌ ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಿಗೆ ಶುಕ್ರವಾರ ಚಾಲನೆ ನೀಡಲಾಯಿತು. ‘ಮೈಸೂರು, ಮಡಿಕೇರಿ ಹಾಗೂ ಕುಂದಾಪುರ ಮಾರ್ಗದಲ್ಲಿ 13 ಫ್ಲೈಬಸ್‌ಗಳು 42 ಟ್ರಿಪ್‌ ಮಾಡುತ್ತಿವೆ. ಟರ್ಮಿನಲ್‌-2 ಪ್ರಯಾಣಿಕರಿಗೂ ಇನ್ನು ಮುಂದೆ ಉಪಯೋಗವಾಗ ಲಿದೆ. ದಿನದ 24 ಗಂಟೆಯೂ ಬಸ್ ಸೇವೆ ಇರಲಿದೆ’ ಎಂದು ವಿವರಿಸಿದರು. ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಮಾತನಾಡಿ, ‘ಕೆಂಪೇಗೌಡ ಅಂತರರಾಷ್ಟ್ರೀಯ […]

ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ: ʻಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಛತೆಯನ್ನು ನಿರ್ವಹಿಸಲು ವಿದ್ಯಾರ್ಥಿಗಳನ್ನು ಬಳಸುವಂತಿಲ್ಲʼ

ಬೆಂಗಳೂರು : ರಾಜ್ಯದ ಎಲ್ಲ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಇತ್ತೀಚಿಗೆ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು ಶೌಚಾಲಯಗಳನ್ನು ವಿದ್ಯಾರ್ಥಿಗಳಿಂದ ಸ್ವಚ್ಛತೆ ಮಾಡಿಸುತ್ತಿರುವ ಕುರಿತಾದ ಘಟನೆಗಳು ಸರ್ಕಾರದ ಮತ್ತು ಇಲಾಖೆಯ ಗಮನಕ್ಕೆ ಬಂದಿದೆ. ರಾಜ್ಯದ ಎಲ್ಲ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಛತೆಯನ್ನು ನಿರ್ವಹಿಸಲು ವಿದ್ಯಾರ್ಥಿಗಳನ್ನು ಬಳಸುವಂತಿಲ್ಲ ಎಂದು ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಉಲ್ಲೇಖ ಮಾಡಲಾಗಿದೆ. ಅದರ ವಿವರ ಹೀಗಿದೆ ಈ ಕಳಕಂಡತಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಇತ್ತೀಚಿಗೆ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು ಶೌಚಾಲಯಗಳನ್ನು […]

ಜನವರಿ 1 ರಿಂದ ಜಾರಿ : KSRTCʼ ಅಪಘಾತ ಪರಿಹಾರ 10 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು : ಪ್ರಸ್ತುತ ಪಾವತಿಸುತ್ತಿರುವ ಪರಿಹಾರ ಮೊತ್ತವನ್ನು ದಿನಾಂಕ:01.03.2017 ರಿಂದ ಪಾವತಿಸಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಚರ್ಚಿಸಿ, ಪರಿಹಾರ ಮೊತ್ತವನ್ನು ದಿನಾಂಕ 31.10.2023 ರಂದು ಜರುಗಿದ 29ನೇ ಅಪಘಾತ ಪರಿಹಾರ ನಿಧಿ ಸಭೆಯಲ್ಲಿ 3,00,000 ರೂ.ದಿಂದ 10 ಲಕ್ಷಕ್ಕೆ ಏರಿಕೆ ಮಾಡಿ ಆದೇಶ ಹೊರಡಿಸಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಅಪಘಾತಕ್ಕೀಡಾಗಿ ಮೃತಪಟ್ಟ ಪ್ರಯಾಣಿಕರ ಕುಟುಂಬಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದುದ್ದೇಶದಿಂದ ಪರಿಹಾರ ಮೊತ್ತವನ್ನು ₹ 3 ಲಕ್ಷದಿಂದ ₹ 10 ಲಕ್ಷಕ್ಕೆ ಹೆಚ್ಚಳ […]

ನಳಿನ್‌ಕುಮಾರ್ : ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ₹957.39 ಕೋಟಿ

ಮಂಗಳೂರು :ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಉಜಿರೆ- ಧರ್ಮಸ್ಥಳ- ಪೆರಿಯಶಾಂತಿವರೆಗಿನ 28.49 ಕಿ.ಮೀ. ದ್ವಿಪಥ ಅಭಿವೃದ್ಧಿ ಯೋಜನೆಗೆ ₹613.65 ಕೋಟಿ ಹಾಗೂ ಚಾರ್ಮಡಿ ಘಾಟಿಯಲ್ಲಿ ಮಂಗಳೂರು- ಮೂಡಿಗೆರೆ- ತುಮಕೂರು ಸೆಕ್ಷನ್‌ನಲ್ಲಿ 11.20 ಕಿ.ಮೀ. ಅಭಿವೃದ್ದಿಗೆ ₹343.73 ಕೋಟಿ ಕಾಮಗಾರಿಗಳಿಗೆ ಕೇಂದ್ರ ಭೂಸಾರಿಗೆ ಸಚಿವಾಲಯ ಅನುಮೋದನೆ ನೀಡಿದ್ದು ಟೆಂಡರ್ ಆಹ್ವಾನಿಸಿದೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಾಣಿ- ಮೈಸೂರು ರಸ್ತೆ ಚತುಷ್ಪಥ ಕಾಮಗಾರಿಯ (ಒಟ್ಟು 71.60 ಕಿ.ಮೀ) ಸಮಗ್ರ ಯೋಜನಾ ವರದಿ (ಡಿಪಿಆರ್‌) ತಯಾರಿಸಲು ಟೆಂಡರ್ ಕರೆಯಲಾಗಿದೆ. ಕಾಮಗಾರಿಗೆ ಅಂದಾಜು ₹1000 […]

ಮೂಡಿಗೆರೆಯಲ್ಲಿ ಹೆದ್ದಾರಿಯಲ್ಲಿ ಕೆಟ್ಟು ನಿಂತ ಲಾರಿ , ಸವಾರರು ಹೈರಾಣು

ಮೂಡಿಗೆರೆ: ಚಿಕ್ಕಮಗಳೂರಿನಿಂದ ಟಿಎಪಿಎಇಎಂಎಸ್‌ಗೆ ಅಕ್ಕಿ ಸಾಗಿಸುತ್ತಿದ್ದ ಲಾರಿ, ರೈತ ಭವನದ ತಿರುವಿನಲ್ಲಿ ಕೆಟ್ಟು ನಿಂತಿತ್ತು. ಪಟ್ಟಣದ ರೈತ ಭವನದ ಬಳಿ ಗುರುವಾರ ಮಧ್ಯಾಹ್ನ ಲಾರಿಯೊಂದು ರಸ್ತೆಯಲ್ಲಿ ಕೆಟ್ಟು ನಿಂತಿದ್ದರಿಂದ, ಎರಡು ಗಂಟೆಗೂ ಹೆಚ್ಚು ಕಾಲ ವಾಹನ ಸವಾರರು ಪರದಾಡಿದರು. ಸ್ಥಳಕ್ಕೆ ಬಂದ ಪೊಲೀಸರು ಸ್ಥಳೀಯರ ನೆರವಿನಲ್ಲಿ ರಸ್ತೆಯ ಒಂದು ಬದಿಯಲ್ಲಿ ವಾಹನಗಳು ಸಾಗಲು ಅವಕಾಶ ಮಾಡಿಕೊಟ್ಟರು. ಸಂಜೆಯವರೆಗೂ ವಾಹನ ದಟ್ಟಣೆ ಮುಂದುವರಿದಿತ್ತು.ಇದರಿಂದ ದ್ವಿಚಕ್ರ ವಾಹನಗಳನ್ನು ಹೊರತು ಪಡಿಸಿ ಬೇರೆ ವಾಹನಗಳು ಸಾಗಲು ದಾರಿಯಿಲ್ಲದೆ ಕಡೂರು – ಮಂಗಳೂರು […]