ಅಂಗನವಾಡಿ ಕೇಂದ್ರಗಳ ಬಾಡಿಗೆ ಹೆಚ್ಚಳಕ್ಕೆ ಕ್ರಮ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ವಿಧಾನಸಭೆ: ಅಂಗನವಾಡಿ ಕೇಂದ್ರಗಳ ಕಟ್ಟಡಗಳ ಬಾಡಿಗೆ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಪ್ರಸಕ್ತ ಸಾಲಿನ ಬಾಡಿಗೆ ಪಾವತಿಗೆ ಅನುದಾನದ ಕೊರತೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.ಬುಧವಾರ ಪ್ರಶ್ನೋತ್ತರ ಕಲಾಪದಲ್ಲಿ ಬಸವನಗುಡಿಯ ಬಿಜೆಪಿ ಸದಸ್ಯ ಎಲ್. ಎ. ರವಿ ಸುಬ್ರಹ್ಮಣ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ 2024-25ನೇ ಸಾಲಿನ ಡಿಸೆಂಬರ್ ತಿಂಗಳವರೆಗೆ ಅಂಗನವಾಡಿ ಕೇಂದ್ರಗಳ ಬಾಡಿಗೆ ಮೊತ್ತವನ್ನು ಪಾವತಿಸಲಾಗಿದೆ ಎಂದರು. ಅಂಗನವಾಡಿ ಕೇಂದ್ರಗಳ ಮಕ್ಕಳು, ಇತರೆ ಫಲಾನುಭವಿಗಳು ಇಲಾಖೆಯ […]
ಅಂಕೋಲ ಶಿರೂರು ಗುಡ್ಡ ಕುಸಿತ: ನಾಪತ್ತೆಯಾಗಿದ್ದ ಮಹಿಳೆ ಶವ ಪತ್ತೆ, ಮೃತರ ಸಂಖ್ಯೆ 8ಕ್ಕೆ ಏರಿಕೆ.
ಅಂಕೋಲ: ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರಿನಲ್ಲಿ ಭೂಕುಸಿತ ದುರಂತ ಸಂಭವಿಸಿ ಒಂದು ವಾರ ಕಳೆದಿದ್ದು, ಕಾರ್ಯಾಚರಣೆ ವೇಳೆ ಮತ್ತೊಂದು ಮಹಿಳೆಯ ಶವ ಪತ್ತೆಯಾಗಿದೆ. ಮೃತರಾದ ಹನ್ನೊಂದು ಜನರಲ್ಲಿ ಈವರೆಗೆ ಒಟ್ಟು 8 ಮೃತದೇಹಗಳು ಪತ್ತೆಯಾಗಿವೆ. ಕಾರ್ಯಾಚರಣೆಗೆ ಆಧುನಿಕ ತಂತ್ರಜ್ಞಾನದ ಮೊರೆಹೋಗಿರುವ ಜಿಲ್ಲಾಡಳಿತ ಇಸ್ರೋ ಜೊತೆಗೆ ಯೋಧರ ನೆರವು ಪಡೆದಿದೆ. ಮೃತ ಮಹಿಳೆ ಉಳವರೆ ಗ್ರಾಮದ ಸಣ್ಣಿ ಹನುಮಂತ ಗೌಡ (67). ಘಟನೆ ನಡೆದ 8 ದಿನದ ಬಳಿಕ ಶವ ಪತ್ತೆಯಾಗಿದೆ. ಇನ್ನು ಉಳಿದ ಮೂವರಿಗೆ ಶೋಧ ಕಾರ್ಯ […]
ಭಾರೀ ಮಳೆ ಹಿನ್ನಲೆ: ಉಡುಪಿ, ದ.ಕ ಮತ್ತು ಉತ್ತರ ಕನ್ನಡದ ಕರಾವಳಿಯಲ್ಲಿ ಎತ್ತರದ ಅಲೆಗಳ ಎಚ್ಚರಿಕೆ.
ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರವು ಉಡುಪಿ, ದಕ್ಷಿಣ ಕನ್ನಡ, ಮತ್ತು ಉತ್ತರ ಕನ್ನಡದ ಕರಾವಳಿ ಪ್ರದೇಶಗಳಿಗೆ ಹೆಚ್ಚಿನ ಅಲೆಗಳ ಎಚ್ಚರಿಕೆ ಮತ್ತು ಉಬ್ಬರದ ಅಲರ್ಟ್ ನೀಡಿದೆ. ಉಡುಪಿಯಲ್ಲಿ ಎತ್ತರದ ಅಲೆಗಳು ಏಳುವ ಸಾಧ್ಯತೆ:ಈ ಅಲೆಗಳ ಎಚ್ಚರಿಕೆ, ಅಲರ್ಟ್ ಜುಲೈ 19 ರಂದು ಸಂಜೆ 05 :30ರಿಂದ ಜುಲೈ 21 ರ ರಾತ್ರಿ 11.30 ರ ವರೆಗೆ ಜಾರಿಯಲ್ಲಿರುತ್ತದೆ ಹಾಗೂ ಉಡುಪಿ ಕರಾವಳಿಯ ಬೈಂದೂರಿನಿಂದ ಕಾಪುವರೆಗಿನ ಕರಾವಳಿಯಲ್ಲಿ 3.5 ರಿಂದ 3.7 ಮೀಟರ್ ಎತ್ತರದ ಅಲೆಗಳು […]
ಕೊಡಗಿನಲ್ಲಿ ರೆಡ್ ಅಲರ್ಟ್ ಮುಂದುವರಿಕೆ: ನಾಳೆಯು (ಜುಲೈ 20) ಕೊಡಗು ಜಿಲ್ಲೆಯಾದ್ಯಂತ ಶಾಲಾ-ಕಾಲೇಜಿಗಳಿಗೆ ರಜೆ ಘೋಷಣೆ.
ಕೊಡಗು: ಕೊಡಗು ಜಿಲ್ಲಾದ್ಯಂತ ಬಾರಿ ಮಳೆ, ಗಾಳಿ ಮುಂದುವರದಿದ್ದು, ಹವಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜು.20 ರಂದು ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಉತ್ತರ ಕನ್ನಡ, ಕೊಡಗು ಜಿಲ್ಲೆಯಲ್ಲಿ ಇಂದು (ಜು.15) ಶಾಲಾ-ಕಾಲೇಜಿಗಳಿಗೆ ರಜೆ ಘೋಷಣೆ.
ಭಾರಿ ಮಳೆ ಹಿನ್ನಲೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ಧಾಪುರ, ಯಲ್ಲಾಪುರ, ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನಾದ್ಯಂತ ಎಲ್ಲ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15 ರಂದು ರಜೆ ನೀಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ, ಶಾಲೆ-ಕಾಲೇಜಿಗೆ ರಜೆ:ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಸೋಮವಾರ (ಜು.15ರಂದು) […]