ಬೆಳಗಾವಿ ಮಹಿಳೆ ವಿವಸ್ತ್ರ ಪ್ರಕರಣ ಕುರಿತು ಹೈಕೋರ್ಟ್ ಸಲಹೆ : ಮೌನ ವಹಿಸಿದ್ದ ಗ್ರಾಮಸ್ಥರಿಗೆ ದಂಡ ವಿಧಿಸುವ ಕಾನೂನು ರೂಪಿಸುವಂತೆ ಅಭಿಪ್ರಾಯ
ಬೆಂಗಳೂರು : ಗ್ರಾಮದಲ್ಲಿ ಅಮಾನವೀಯ ಕೃತ್ಯ ನಡೆಯುತ್ತಿದ್ದರೂ ಅದನ್ನು ತಡೆಯದೆ ಮೌನವಾಗಿದ್ದ ಇಡೀ ಗ್ರಾಮಸ್ಥರಿಗೆ ದಂಡ ವಿಧಿಸಬಹುದಾದ ಸಾಮೂಹಿಕ ಜವಾಬ್ದಾರಿ ನಿಗದಿಪಡಿಸುವ ಮಾದರಿಯಲ್ಲಿ ಯೋಜನೆ ಅಥವಾ ಕಾನೂನು ರೂಪಿಸಲು ರಾಜ್ಯ ಹೈಕೋರ್ಟ್ ಸರ್ಕಾರಕ್ಕೆ ಮೌಖಿಕ ಸಲಹೆ ನೀಡಿದೆ.ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ ಪ್ರಕರಣ ಸಂಬಂಧ ಮೌನ ವಹಿಸಿದ್ದ ಇಡೀ ಗ್ರಾಮದವರಿಗೆ ಶಿಕ್ಷೆ ಅಥವಾ ದಂಡ ವಿಧಿಸಬಹುದಾದ ಯೋಜನೆ ರೂಪಿಸುವಂತೆ ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ವಿಚಾರಣೆ ವೇಳೆ ನ್ಯಾಯಪೀಠ, ಬ್ರಿಟಿಷ್ ಆಡಳಿತದಲ್ಲಿ ವಿಲಿಯಂ ಬೆಂಟಿಂಕ್ […]
ರಘುರಾಮ್ ರಾಜನ್ : ಶೇ.6ರಷ್ಟು ಜಿಡಿಪಿ ಇದ್ದರೆ 2047ರಲ್ಲೂ ಭಾರತ ಕೆಳಮಧ್ಯಮ ಆರ್ಥಿಕತೆಯ ರಾಷ್ಟ್ರ
ಹೈದರಾಬಾದ್: ಜನಸಂಖ್ಯೆ ಬೆಳವಣಿಗೆಯು ದೇಶದ ಆರ್ಥಿಕ ಪ್ರಗತಿಯ ಮೇಲೆ ಪರಿಣಾಮ ಬೀರುತ್ತದೆ. ಅಂದರೆ ವಯಸ್ಸಾದ ಜನಸಂಖ್ಯೆ ಹೊರೆಯಾಗುತ್ತದೆ. ಕಳೆದ ಎರಡು ತ್ರೈಮಾಸಿಕಗಳಲ್ಲಿ ದೇಶದ ಜಿಡಿಪಿ ಬೆಳವಣಿಗೆಯು ಶೇ 7.5ರಷ್ಟು ದಾಖಲಾಗಿದೆ. ಈಗಿನ ಕಾರ್ಮಿಕ ಬಲ ಮತ್ತು ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ತಾಳೆ ಹಾಕಿದರೆ, ಇದು ತುಂಬಾ ಕಡಿಮೆ. ಇದು ಜಿ20 ರಾಷ್ಟ್ರಗಳಲ್ಲಿಯೇ ಅತ್ಯಂತ ಕಡಿಮೆ ಎಂದು ರಾಜನ್ ವಿವರಿಸಿದರು. 2047ರ ವೇಳೆಗೆ ಭಾರತ ಅಭಿವೃದ್ಧಿಶೀಲ ಮತ್ತು ಸಿರಿವಂತ ರಾಷ್ಟ್ರವಾಗಿ ಬೆಳೆಯಬೇಕಾದರೆ, ಈಗಿನ ಆರ್ಥಿಕ ಪ್ರಗತಿ ಸಾಕಾಗದು ಎಂದು ಭಾರತೀಯ […]
ಕೋವಿಡ್-19 ಹೊಸ ತಳಿ JN.1 ಹಾವಳಿ: ಹೊಸವರ್ಷ ಸಂಭ್ರಮಾಚರಣೆಗಳಿಗೆ ನಿಬಂಧನೆಗಳ ಸಾಧ್ಯತೆ; ತಾಂತ್ರಿಕ ಸಲಹಾ ಸಮಿತಿ ಸಭೆ ಬಳಿಕ ನಿರ್ಧಾರ
ಬೆಂಗಳೂರು: ನೆರೆಯ ಕೇರಳ ರಾಜ್ಯದಲ್ಲಿ ಕೊರೋನಾದ ಹೊಸ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರದಂದು ತಾಂತ್ರಿಕ ಸಲಹಾ ಸಮಿತಿ ಸಭೆ ಕರೆಯಲಾಗಿದೆ. ಸಭೆ ಬಳಿಕ ರಾಜ್ಯ ಸರ್ಕಾರ ಕ್ರಿಸ್ಮಸ್ ಮತ್ತು ಹೊಸ ವರ್ಷದ ಸಂಭ್ರಮಾಚರಣೆಗಳಿಗೆ ಕಟ್ಟುನಿಟ್ಟಿನ ಕ್ರಮ ಶಿಫಾರಸು ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಕೇರಳದಲ್ಲಿ ಒಮಿಕ್ರಾನ್ ಹೊಸ ಉಪತಳಿ JN.1 ಪತ್ತೆಯಾದ ಬೆನ್ನಲ್ಲೇ ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ತುರ್ತು ಸಭೆ ನಡೆಸಿ, ಪ್ರಾಥಮಿಕ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದರ […]
‘ಕೆಎಸ್‌ಆರ್‌ಟಿಸಿ’ ಬಳಕೆಗೆ ಸಂಬಂಧಿಸಿದಂತೆ ಕೇರಳ ವಿರುದ್ಧದ ಕಾನೂನು ಹೋರಾಟದಲ್ಲಿ ಕರ್ನಾಟಕಕ್ಕೆ ಜಯ
ಚನ್ನೈ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ‘ಕೆಎಸ್‌ಆರ್‌ಟಿಸಿ’ ಹೆಸರು ಬಳಸಲು ಯಾವುದೇ ಕಾನೂನು ನಿಷೇಧವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. KSRTC ಯ ವಿಶೇಷ ಬಳಕೆಗಾಗಿ ಕೇರಳ RTC ಹಕ್ಕನ್ನು ನ್ಯಾಯಾಲಯ ವಜಾಗೊಳಿಸಿದೆ. ಎರಡೂ ರಾಜ್ಯ ಸಾರಿಗೆ ನಿಗಮಗಳು ದಶಕಗಳಿಂದ ಸಂಕ್ಷಿಪ್ತ ರೂಪವನ್ನು ಬಳಸುತ್ತಿವೆ. ಕರ್ನಾಟಕ SRTC ಸಂಕ್ಷಿಪ್ತ ರೂಪ ಮತ್ತು ಅದರ ಲೋಗೋವನ್ನು ಪೇಟೆಂಟ್‌ಗಳು, ವಿನ್ಯಾಸಗಳು ಮತ್ತು ಟ್ರೇಡ್‌ಮಾರ್ಕ್‌ಗಳ ನಿಯಂತ್ರಕ ಜನರಲ್‌ನಲ್ಲಿ ನೋಂದಾಯಿಸಿದೆ. ಸಂಸ್ಥೆಯು ‘KSRTC’ ಸಂಕ್ಷಿಪ್ತ ಬಳಕೆಗಾಗಿ ಟ್ರೇಡ್ ಮಾರ್ಕ್ ಪ್ರಮಾಣ ಪತ್ರವನ್ನು […]
ಡಿ. 26 ರಿಂದ ಯುವನಿಧಿ ಯೋಜನೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭ: ಜನವರಿ 1 ರಿಂದ ಹಣ ವರ್ಗಾವಣೆ ಸಾಧ್ಯತೆ
ಬೆಂಗಳೂರು: ಕರ್ನಾಟಕದಲ್ಲಿ ಚುನಾವಣೆಗೂ ಮುನ್ನ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲಿ ನಿರುದ್ಯೋಗಿ ಯುವಕರಿಗೆ ಆರ್ಥಿಕ ಸಹಾಯ ನೀಡುವ ಯುವನಿಧಿ ಯೋಜನೆ ರಾಜ್ಯಾದ್ಯಂತ ಜಾರಿಯಾಗಲಿದೆ ಎಂದು ವರದಿ ಹೇಳಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಡಿಸೆಂಬರ್ 26 ರಿಂದ ಪ್ರಾರಂಭವಾಗಲಿದೆ. ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಸಮೀಪದ ಆನ್‌ಲೈನ್ ಸೆಂಟರ್‌ಗಳಿಗೆ ತೆರಳಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಇಲ್ಲವೇ ಖುದ್ದಾಗಿಯೂ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಪರಿಶೀಲನೆ ಬಳಿಕ ಅರ್ಹರಿಗೆ 2024 ರ […]