ಶುಕ್ರವಾರ ಭಜನ್ ಲಾಲ್​ ಶರ್ಮಾ ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

ಜೈಪುರ್​(ರಾಜಸ್ಥಾನ) : ಇತ್ತೀಚೆಗೆ ನಡೆದ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಸರ್ಕಾರ ರಚಿಸಲು ಸಜ್ಜಾಗಿದೆ.ಈಗಾಗಲೇ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಭಜನ್​ ಲಾಲ್​ ಶರ್ಮಾ ಅವರನ್ನು ಆಯ್ಕೆ ಮಾಡಿದ್ದು, ಡಿ.15ರಂದು ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಡಿಸೆಂಬರ್​ 15ರಂದು ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್​ ಲಾಲ್​ ಶರ್ಮಾ ಪ್ರಮಾಣವಚನ ಸ್ವೀಕರಿಸಲಿದ್ದಾರೆ 1 ಲಕ್ಷಕ್ಕೂ ಅಧಿಕ ಜನ ಭಾಗಿಯಾಗುವ ನಿರೀಕ್ಷೆ : ಪದಗ್ರಹಣ ಕಾರ್ಯಕ್ರಮದಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಜನ ಭಾಗಿಯಾಗುವ ನಿರೀಕ್ಷೆ ಇದೆ. […]

ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಆರು ದಿನಗಳ ಕಾಲ ನಿಷೇಧ!

ಚಿಕ್ಕಮಗಳೂರು: ಡಿ.17 ರಿಂದ 26 ರವರೆಗೆ ಚಿಕ್ಕಮಗಳೂರಿನಲ್ಲಿ ನಡೆಯುವ ದತ್ತ ಜಯಂತಿ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ದತ್ತಪೀಠ, ಮುಳ್ಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯದಾರ, ಸೀತಾಳ್ಳಯ್ಯನಗಿರಿ ಸೇರಿದಂತೆ ಹಲವು ತಾಣಗಳಿಗೆ ಜಿಲ್ಲಾಡಳಿತ ಪ್ರವಾಸಿಗರನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ. ಕಾಫಿನಾಡಿನ ಪ್ರಮುಖ ಪ್ರವಾಸಿ ತಾಣಗಳಿಗೆ 6 ದಿನಗಳ ಕಾಲ ನಿಷೇಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಹೌದು, ಡಿಸೆಂಬರ್ 22 ರಿಂದ 26ರ ವರೆಗೆ ಚಂದ್ರದ್ರೋಣ ಪರ್ವತಗಳ ಸಾಲಿನ ಪ್ರಮುಖ ತಾಣಗಳಿಗೆ ಪ್ರವಾಸಿಗರನ್ನು ನಿಷೇಧಿಸಲಾಗಿದೆ.ಈ ಬಗ್ಗೆ ಮಾತನಾಡಿರುವ ಬಜರಂಗದಳ ಪ್ರಾಂತ ಸಂಚಾಲಕ […]

ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ದರ ಏರಿಕೆ : ಮಳೆ ಕೊರತೆ

ಬೆಂಗಳೂರು: ನಗರದ ಯಶವಂತಪುರ ಈರುಳ್ಳಿ, ಆಲೂಗಡ್ಡೆ ಬೆಳ್ಳುಳ್ಳಿ ಮಾರುಕಟ್ಟೆಯಲ್ಲಿ ಮಧ್ಯಪ್ರದೇಶ ಮತ್ತು ಗುಜರಾತ್​ನಿಂದ ನಿತ್ಯ ಮೂರು ಸಾವಿರದಿಂದ ನಾಲ್ಕು ಸಾವಿರ ಚೀಲದಷ್ಟು ಬೆಳ್ಳುಳ್ಳಿ ಬರುತ್ತಿತ್ತು. ಆದರೆ, ಈ ಬಾರಿ ನಿರೀಕ್ಷಿತ ಫಸಲು ಬರದ ಕಾರಣ ಉತ್ತಮ ದರ್ಜೆಯ ಹೈಬ್ರಿಡ್ ಬೆಳ್ಳುಳ್ಳಿ ದರ 260 ರೂಪಾಯಿಗೆ ಏರಿಕೆ ಕಂಡಿರುವುದರಿಂದ ರಿಟೇಲ್ ದರ ಕೂಡ ಹೆಚ್ಚಾಗಿದ್ದು, ಇದರಿಂದ ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಚಿಲ್ಲರೆ ಮಾರುಕಟ್ಟೆಯಲ್ಲಿ ನಾಟಿ ಬೆಳ್ಳುಳ್ಳಿಯ ದರ ಒಂದು ಕೆಜಿಗೆ 400 ರೂಪಾಯಿ ತಲುಪಿದ್ದು, ಹೈಬ್ರಿಡ್ ಬೆಳ್ಳುಳ್ಳಿ ಧಾರಣೆಯು […]

704 ಪ್ರವಾಸಿಗರ ಆಗಮನ : ನವ ಮಂಗಳೂರು ಬಂದರಿಗೆ ಎರಡನೇ ವಿದೇಶಿ ಪ್ರವಾಸಿ ಹಡಗು

ಮಂಗಳೂರು: ಈ ಋತುವಿನ ಎರಡನೇ ಪ್ರವಾಸಿ ಹಡಗು ಗುರುವಾರ ನವ ಮಂಗಳೂರು ಬಂದರಿಗೆ ಆಗಮಿಸಿ ತೆರಳಿದೆ. ಫ್ರೆಡ್ ಓಲ್ಸೆನ್ ಕ್ರೂಸ್ ಲೈನ್ಸ್ ಹಡಗು “MS BOLETTE” ನಿನ್ನೆ ಬೆಳಗ್ಗೆ 8 ಗಂಟೆಗೆ ನವ ಮಂಗಳೂರು ಬಂದರಿಗೆ ಆಗಮಿಸಿತ್ತು. ಇದು ನವ ಮಂಗಳೂರು ಬಂದರಿನಲ್ಲಿರುವ ಬರ್ತ್ ನಂ.04 ರಲ್ಲಿ ಲಂಗರು ಹಾಕಿತ್ತು. ಹಡಗಿನ ಒಟ್ಟಾರೆ ಉದ್ದವು 238 ಮೀಟರ್ ಮತ್ತು 62,735 ಒಟ್ಟು ಟನ್ನೇಜ್ ಮತ್ತು 8.1 ಮೀಟರ್ ಕರಡು ಸಾಗಿಸುವ ಸಾಮರ್ಥ್ಯ ಹೊಂದಿದೆ. ಹಡಗಿನಿಂದ ಇಳಿಯುವಾಗ ಪ್ರಯಾಣಿಕರಿಗೆ […]

ಮೊದಲ ಬಾರಿಗೆ 71 ಸಾವಿರದ ಮಟ್ಟ ದಾಟಿ ಇತಿಹಾಸ ಸೃಷ್ಟಿಸಿದ ಸೆನ್ಸೆಕ್ಸ್

ಮುಂಬೈ: ಅಮೆರಿಕದ ಫೆಡರಲ್ ರಿಸರ್ವ್ ತನ್ನ ಪ್ರಮುಖ ಬಡ್ಡಿದರಗಳನ್ನು ಯಥಾಸ್ಥಿತಿಯಲ್ಲಿ ಇರಿಸಿದ ನಂತರ ಜಾಗತಿಕ ಮಾರುಕಟ್ಟೆಗಳಲ್ಲಿನ ಆಶಾವಾದಿ ಪ್ರವೃತ್ತಿ, ಮುಂದಿನ ವರ್ಷ ದರ ಕಡಿತದ ಸಂಕೇತಗಳು ಮತ್ತು ನಿರಂತರ ವಿದೇಶಿ ನಿಧಿಯ ಒಳಹರಿವಿನಿಂದ ಭಾರತದ ಷೇರು ಮಾರುಕಟ್ಟೆಗಳು ಏರಿಕೆ ಕಂಡಿವೆ. 30 ಷೇರುಗಳ ಬಿಎಸ್‌ಇ ಸೆನ್ಸೆಕ್ಸ್ 569.88 ಪಾಯಿಂಟ್ಸ್ ಏರಿಕೆ ಕಂಡು ಸಾರ್ವಕಾಲಿಕ ಗರಿಷ್ಠ 71,084.08 ಕ್ಕೆ ತಲುಪಿದೆ. ಶುಕ್ರವಾರದ ಬೆಳಗಿನ ವಹಿವಾಟಿನಲ್ಲಿ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಏರಿಕೆ ಕಂಡು ಬಂದಿದ್ದು, ಬಿಎಸ್‌ಇ ಸೆನ್ಸೆಕ್ಸ್ ಶುಕ್ರವಾರ ಮೊದಲ […]