ಹೈಕೋರ್ಟ್ : ಅರಣ್ಯಭೂಮಿಯಲ್ಲಿ ಸಾಗುವಳಿ ಸಕ್ರಮ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಅಜ್ಜಂಪುರ ತಾಲೂಕಿನ ಬುಕ್ಕಂಬುದಿ ಗ್ರಾಮದ ನಿವಾಸಿಗಳಾದ ಎಸ್‌. ಶಿವಕುಮಾರ್‌ ಮತ್ತು ಡಿ. ಮಂಜುನಾಥ್‌ ಎಂಬುವರು ಸಲ್ಲಿಸಿದ್ದ ತಕರಾರು ಮೇಲ್ಮನವಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದ ಜಮೀನನ್ನು ಸಕ್ರಮಗೊಳಿಸಲು ಕೋರಿ ಚಿಕ್ಕಮಗಳೂರಿನ ಇಬ್ಬರು ಖಾಸಗಿ ವ್ಯಕ್ತಿಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್‌ ವಜಾಗೊಳಿಸಿ ಆದೇಶಿಸಿದೆ. ಒಮ್ಮೆ ಯಾವುದೇ ಜಾಗ ಅರಣ್ಯ ಇಲಾಖೆಗೆ ವರ್ಗಾವಣೆಯಾದ ನಂತರ, […]

ಕಾರಣ ಅರಿಯಲು ಇಮೇಲ್ ಸಾರಾಂಶದ ವಿಶ್ಲೇಷಣೆ : ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ

ಬೆಂಗಳೂರು: ಡಿಸೆಂಬರ್​ 1 ರಂದು ಬಂದಿರುವ ಬೆದರಿಕೆ ಇಮೇಲ್​ಗಳಿಗೆ ಸಂಬಂಧಿಸಿದಂತೆ ಒಟ್ಟು 27 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಕಳೆದ ವರ್ಷ ಏಪ್ರಿಲ್‌ನಲ್ಲಿ ಇದೇ ರೀತಿ 6 ಪ್ರಕರಣಗಳು ದಾಖಲಾಗಿದ್ದವು. ಈ ಬಗ್ಗೆ ತನಿಖಾಧಿಕಾರಿಗಳ ಸಭೆ ನಡೆಸಿ ಪ್ರಕರಣಗಳ ನಡುವಿನ ಸಾಮ್ಯತೆ, ತನಿಖೆಯ ಪ್ರಗತಿಯ ಕುರಿತು ಚರ್ಚಿಸಿದ್ದೇವೆ ಎಂದರು.ಶಾಲೆಗಳಿಗೆ ಬಾಂಬ್ ಬೆದರಿಕೆಯ ಇಮೇಲ್ ರವಾನೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಆಯಾ ಸರ್ವಿಸ್​​ ಪ್ರೊವೈಡರ್ ಕಂಪನಿಗಳಿಂದ ಮಾಹಿತಿ ಕೇಳಲಿದ್ದೇವೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ. ಡಿಸೆಂಬರ್​ 1ರಂದು […]

ಕ್ರಮ ಸ್ವಾಗತಿಸಿದ ಬಿಜೆಪಿ ರಾಜ್ಯಾಧ್ಯಕ್ಷ : ಬಿ ವೈ ವಿಜಯೇಂದ್ರ ಪತ್ನಿ ಸಹೋದರನ ಮೇಲೆ ಲೋಕಾ ದಾಳಿ

ಕಲಬುರಗಿ‌: ಯಾದಗಿರಿ ಜಿಲ್ಲಾ ಆರೋಗ್ಯ ಅಧಿಕಾರಿಯಾಗಿರುವ ಡಾ. ಪ್ರಭುಲಿಂಗ ಮಾನಕರ್ ಅವರ ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯ ಮಹಾಲಕ್ಷ್ಮಿ ಗ್ರೀನ್ಸ್ ಅಪಾರ್ಟ್ಮೆಂಟ್​ನಲ್ಲಿರುವ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪತ್ನಿ ಸಹೋದರ ಡಾ. ಪ್ರ ಭುಲಿಂಗ್ ಮಾನಕರ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.ಬಿ.ವೈ ವಿಜೇಯೇಂದ್ರ ಅವರು ತಮ್ಮ ಪತ್ನಿ ಸಹೋದರನ ಮೇಲಿನ ಲೋಕಾಯುಕ್ತ ದಾಳಿಯನ್ನು ಸ್ವಾಗತಿಸಿದ್ದಾರೆ. ರೈತರ ಬಗ್ಗೆ ಕಾಳಜಿ ಇದ್ರೆ ಪರಿಹಾರ […]

ಮೈಚಾಂಗ್ ಚಂಡಮಾರುತದ ಅಬ್ಬರ: ಚೆನ್ನೈನಲ್ಲಿ ಕನಿಷ್ಠ 5 ಸಾವು; ಇಂದು ಆಂಧ್ರದತ್ತ ಪಯಣ

ಚೆನ್ನೈ: ಮೈಚಾಂಗ್ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಿಂದಾಗಿ ಹೆಚ್ಚಿನ ಭಾಗವು ಮುಳುಗಿದ್ದು ಜನಜೀವನ ಅಸ್ತವ್ಯಸ್ಥವಾಗಿದೆ. ಪ್ರಸ್ತುತ ಬಂಗಾಳ ಕೊಲ್ಲಿಯಲ್ಲಿರುವ ಚಂಡಮಾರುತವು ಆಂಧ್ರಪ್ರದೇಶ ಕರಾವಳಿಯತ್ತ ಸಾಗುವ ಸಾಧ್ಯತೆಯಿದೆ. ಚೆನ್ನೈನಲ್ಲಿ ತಗ್ಗು ಪ್ರದೇಶಗಳಲ್ಲಿ ಭಾರೀ ಪ್ರವಾಹದ ವರದಿಯಾಗಿದ್ದು, ಕನಿಷ್ಠ ಐವರು ಸಾವನ್ನಪ್ಪಿದ್ದಾರೆ. ಮಂಗಳವಾರ ಬೆಳಿಗ್ಗೆವರೆಗೆ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ. ಇಂದು ನೆಲ್ಲೂರು ಮತ್ತು ಮಚಲಿಪಟ್ಟಣಂ ನಡುವೆ ಬೀಸುವ ಸಾಧ್ಯತೆ ಇದೆ. ಚಂಡಮಾರುತದ ಪ್ರಭಾವದಿಂದಾಗಿ ತಗ್ಗು ಪ್ರದೇಶಗಳೆಲ್ಲಾ ನೀರಿನಲ್ಲಿ ಮುಳುಗಡೆಯಾಗಿದ್ದು, ನಿಲುಗಡೆ ಮಾಡಿದ್ದ ವಾಹನಗಳು ಪ್ರವಾಹದಲ್ಲಿ ಕೊಚ್ಚಿ […]

ರಾಜ್ಯದಲ್ಲಿ ಮುಂದಿನ 24 ಗಂಟೆ ಮಳೆ : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಕಡಿಮೆ ಒತ್ತಡದ ಪ್ರದೇಶ ಕ್ರಮೇಣ ವಾಯುವ್ಯ ಕಡೆಗೆ ಚಲಿಸಲಿದೆ. ಇದು ಸೈಕ್ಲೋನಿಕ್ ಚಂಡಮಾರುತದ ರೂಪವನ್ನು ತೆಗೆದುಕೊಳ್ಳುತ್ತದೆ. ತಮಿಳುನಾಡು, ಕೇರಳ ಮತ್ತು ಕರಾವಳಿ ಭಾಗದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಳೆದ ವಾರ ಮೋಡ ಕವಿದ ವಾತಾವರಣವಿತ್ತು. ಈ ವಾರ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಹೆಚ್ಚಾಗಿದೆ ಎಂದಿದ್ದಾರೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ ಚಂಡಮಾರುತ ಉಂಟಾಗಿರುವ ಹಿನ್ನೆಲೆ ರಾಜ್ಯದಲ್ಲಿಯೂ ಭೀತಿ ಎದುರಾಗಿದೆ.ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ […]