ಕನ್ನಡದಿಂದಲೇ ಚಿತ್ರರಂಗದಲ್ಲಿದ್ದೇನೆ ಎಂದ ಪೂಜಾ ಗಾಂಧಿ : ನಮ್ಮ ಜಾತ್ರೆ ಜಾನಪದ ಸಂಭ್ರಮಕ್ಕೆ ಅದ್ಧೂರಿ ಚಾಲನೆ

ಬೆಂಗಳೂರು: ನಗರದ ರವೀಂದ್ರ ಕಲಾಕ್ಷೇತ್ರದ ಮೆಟ್ಟಿಲುಗಳ ಮೇಲೆ ಆಯೋಜನೆ ಮಾಡಲಾಗಿದ್ದ ‘ನಮ್ಮ ಜಾತ್ರೆ ಜಾನಪದ ಸಂಭ್ರಮ’ ಕಾರ್ಯಕ್ರಮವನ್ನು ದೇಸಿದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ನಾಡಿನ ಭಾಷೆ ಮತ್ತು ಸಂಸ್ಕೃತಿ ಎಲ್ಲರನ್ನೂ ಆಕರ್ಷಿಸುವಂತಹದ್ದು. ಆದರೆ ನಾವು ಬೆಂಗಳೂರಿನಲ್ಲಿ ಕನ್ನಡ ಭಾಷಾ ಬಳಕೆಯನ್ನು ಕಡಿಮೆ ಮಾಡಿದ್ದೇವೆ ನಗರ ಜೀವನದ ಒತ್ತಡದಲ್ಲಿ ಜೀವಿಸುತ್ತಿರುವ ಬೆಂಗಳೂರಿಗರಿಗೆ ಕರ್ನಾಟಕದ ವೈವಿಧ್ಯಮಯ ಜಾನಪದ ಕಲೆಗಳನ್ನು ತಲುಪಿಸುವ ಪರಿಚಯಿಸುವ ನಿಟ್ಟಿನಲ್ಲಿ ದೊಡ್ಡ ಮಟ್ಟದಲ್ಲಿ ಪ್ರಯತ್ನಗಳು ಆಗಬೇಕಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ […]

ಅರಣ್ಯ ಸಚಿವ ಖಂಡ್ರೆ : ಕಾಡಾನೆ ದಾಳಿಯಿಂದಾಗಿರುವ ಬೆಳೆ ನಾಶ ಪ್ರಕರಣಗಳಿಗೆ ಪರಿಹಾರ ವಿತರಣೆ

ಸುಳ್ಯ:”ಸುಳ್ಯ ಹಾಗೂ ಕಡಬ ತಾಲೂಕಿನಲ್ಲಿರುವ ಬಹುತೇಕ ಜನರು ಗ್ರಾಮೀಣ ಪ್ರದೇಶದಲ್ಲಿ ನೆಲೆಸಿದ್ದು, ಜೀವನ ನಿರ್ವಹಣೆಗೆ ಕೃಷಿಯನ್ನೇ ಮೂಲ ಕಸುಬನ್ನಾಗಿ ಅವಲಂಬಿಸಿದ್ದಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಕಾಡಾನೆಗಳು ಕೃಷಿ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ನಾಶಪಡಿಸುವುದರ ಜೊತೆಗೆ ಆಸ್ತಿ ಹಾಗೂ ಜೀವಹಾನಿ ಉಂಟು ಮಾಡಿವೆ. ಈ ವಿಚಾರವು ಸರ್ಕಾರದ ಗಮನಕ್ಕೆ ಬಂದಿದೆಯೇ” ಎಂದು ಶಾಸಕಿ ಭಾಗೀರಥಿ ಮುರುಳ್ಯ ಅವರು, ಬೆಳಗಾವಿ ಅಧಿವೇಶನದಲ್ಲಿ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಅರಣ್ಯ ಇಲಾಖೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ. ”ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ […]

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಅರಣ್ಯ ಪಾಲಕ ಹುದ್ದೆಗಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ದ್ವಿತೀಯ ಪಿ ಯು ಸಿ ಉತ್ತೀರ್ಣರಾದವರಿಗೆ ಉದ್ಯೋಗಾವಕಾಶ ಹುದ್ದೆಗಳು: ಅರಣ್ಯ ಪಾಲಕ(Forest Guard)ವಯಸ್ಸಿನ ಮಿತಿ :ಕನಿಷ್ಠ: 18ಗರಿಷ್ಠ: 27(ಸಾಮಾನ್ಯ ಅಭ್ಯರ್ಥಿ)30(ಒಬಿಸಿ)32(ಎಸ್ ಸಿ/ಎಸ್ ಟಿ)ದೈಹಿಕ ಸದೃಢತೆಎತ್ತರ: 163cm(ಪುರುಷ ಅಭ್ಯರ್ಥಿ)150cm(ಮಹಿಳಾ ಅಭ್ಯರ್ಥಿ) ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲಾತಿಗಳು: ಫೋಟೋ, ಅಂಕಪಟ್ಟಿಗಳು, ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ, ಕನ್ನಡ ಮಾಧ್ಯಮ, ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ನೇಮಕಾತಿ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಸದೃಢತೆ,ವೈದ್ಯಕೀಯ ಪರೀಕ್ಷೆ ವಿಭಾಗವಾರು ಲಭ್ಯವಿರುವ ಹುದ್ದೆಗಳ ಸಂಖ್ಯೆ ಮಂಗಳೂರು-62, ಕೊಡಗು -26 […]

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಮೋಹನ್ ನಾಯಕ್‌ಗೆ ಷರತ್ತು ಬದ್ದ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: 2017ರ ಸೆಪ್ಟೆಂಬರ್ ನಡೆದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೋಹನ್ ನಾಯಕ್‌ಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನಾಯಕ್ ಈ ಪ್ರಕರಣದಲ್ಲಿ ಜಾಮೀನು ಪಡೆದ ಮೊದಲ ಆರೋಪಿ. ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಈ ತೀರ್ಪು ಪ್ರಕಟಿಸಿದೆ. ನಾಯಕ್ ಅವರು 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಹಾಗೂ ಅದೇ ಮೊತ್ತಕ್ಕೆ ಇನ್ನಿತರ ಇಬ್ಬರು ಶ್ಯೂರಿಟಿ ಒದಗಿಸುವಂತೆ ಮತ್ತು ನ್ಯಾಯಾಲಯವು ನೀಡಿದ ಕಾರಣಗಳಿಗಾಗಿ ಅವರ ಹಾಜರಾತಿಗೆ […]

ಮಹಾರಾಜ ಯದುವೀರ್ ಒಡೆಯರ್ ಕೈ ಮುಗಿದು ಕ್ಯಾ. ಅರ್ಜುನನ ಸಮಾಧಿಗೆ ನಮಸ್ಕಾರ

ಹಾಸನ: ಹಾಸನದ ಸಕಲೇಶಪುರದಲ್ಲಿ ಕಾಡಾನೆ ಕಾರ್ಯಾಚರಣೆ ವೇಳೆ ಬಲಿಷ್ಠವಾದ ಒಂಟಿ ಸಲಗದ ದಾಳಿಗೆ ಅರ್ಜುನ ಗಾಯಗೊಂಡು ಸಾವನ್ನಪ್ಪಿದ್ದ. ಮೃತ ಕ್ಯಾಪ್ಟನ್​ ಅರ್ಜುನನ್ನು ಹಾಸನದ ಯಸಳೂರಿನ ದಬ್ಬಳ್ಳಿಕಟ್ಟೆಯಲ್ಲಿ ಸಮಾಧಿ ಮಾಡಲಾಗಿತ್ತು. ಇಂದು ಹಾಸನಕ್ಕೆ ಆಗಮಿಸಿ ಯದುವೀರ್ ಕೃಷ್ಣದತ್ತ ಜಯಚಾಮರಾಜ ಒಡೆಯರ್ ಹಾಗೂ ತ್ರಿಷಿಕಾ ಕುಮಾರಿ ಒಡೆಯರ್ 8 ಬಾರಿ ಮೈಸೂರು ಅಂಬಾರಿ ಹೊತ್ತ ಅರ್ಜುನ ಸಮಾಧಿಗೆ ಕೈಮುಗಿದು ನಮಸ್ಕರಿಸಿದರು. ಕಾಡಾನೆ ದಾಳಿಯಲ್ಲಿ ದಸರಾ ಆನೆ ಅರ್ಜುನ ಮೃತಪಟ್ಟ ಹಿನ್ನೆಲೆ ಅರ್ಜುನನ ಸಮಾಧಿಗೆ ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಜಯಚಾಮರಾಜ […]