ಜನರ ಅಹವಾಲುಗಳಿಗೆ ಸ್ಥಳದಲ್ಲೇ ಪರಿಹಾರ : ನಾಳೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸುವ ಆಶಯದೊಂದಿಗೆ ಈ ಜನತಾ ದರ್ಶನ ನಡೆಸಲಿದ್ದಾರೆ. ಇದಕ್ಕಾಗಿ ಮುಖ್ಯಮಂತ್ರಿ ಸಚಿವಾಲಯ ಸಕಲ ಸಿದ್ಧತೆಗಳನ್ನು ನಡೆಸಿದ್ದು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ ರಜನೀಶ್ ಗೋಯಲ್ ಅವರು ಇಂದು ಸಂಜೆ ಗೃಹ ಕಚೇರಿ ಕೃಷ್ಣಾಕ್ಕೆ ಭೇಟಿ ನೀಡಿ ಅಂತಿಮ ಸಿದ್ಧತೆಗಳನ್ನು ಪರಿಶೀಲಿಸಿದರು.ನಾಳೆ (ಸೋಮವಾರ) ಸಿಎಂ ಸಿದ್ದರಾಮಯ್ಯ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ನಡೆಸಲಿದ್ದಾರೆ.‌ ಬೆಳಗ್ಗೆ 9.30ಕ್ಕೆ ಜನಸ್ಪಂದನ ಕಾರ್ಯಕ್ರಮ ಆರಂಭವಾಗಲಿದೆ. […]

ಸಿಎಂ ಸಿದ್ದರಾಮಯ್ಯ ; 2024 ರಲ್ಲಿ ರಾಜ್ಯದಲ್ಲಿ ‘ಯುವನಿಧಿ’ ಜಾರಿ, ಕೌಶಲ್ಯಾಭಿವೃದ್ಧಿ ತರಬೇತಿ

ತೆಲಂಗಾಣ : ಭಾನುವಾರ ತೆಲಂಗಾಣಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾತನಾಡಿದರು.2024 ರಲ್ಲಿ ಕರ್ನಾಟಕದಲ್ಲಿ ಯುವನಿಧಿ ಜಾರಿಗೊಳಿಸಲಾಗುತ್ತದೆ ಹಾಗೂ ಯುವಜನರಿಗೆ ಕೌಶಾಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 2022-23ನೇ ಸಾಲಿನಲ್ಲಿ ಪದವಿ ಪಡೆದ ಯುವಜನರಿಗೆ 2 ವರ್ಷಗಳವರೆಗೆ ಮಾಸಿಕ 3000 ರೂ. ಹಾಗೂ 2 ವರ್ಷದವರಗೆ ಡಿಪ್ಲೊಮಾ ಮಾಡಿದ ಯುವಜನರಿಗೆ ಮಾಸಿಕ 1500 ರೂ.ಗಳನ್ನು ನೀಡಲಾಗುತ್ತೆ, . ಇದಲ್ಲದೇ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನೂ ನೀಡಲಾಗುತ್ತದೆ ಎಂದು […]

ಇಂದಿನಿಂದ ರಾಜ್ಯ ರಾಜಧಾನಿಯಲ್ಲಿ ಕಂಬಳ ಕಲರವ: ರಾಜ-ಮಹಾರಾಜ ಜೋಡುಕರೆಯಲ್ಲಿ ವಿಜೃಂಭಿಸಲಿದೆ ತುಳುನಾಡ ಜನಪದ ಕ್ರೀಡೆ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕರಾವಳಿ ಭಾಗದ ಗ್ರಾಮೀಣ ಕ್ರೀಡೆ ಕಂಬಳ ಕಲರವ ಇಂದಿನಿಂದ ಎರಡು ದಿನಗಳ ಕಾಲ ನಗರದ ಅರಮನೆ ಮೈದಾನದಲ್ಲಿ ನಡೆಯಲಿದೆ. ಯಕ್ಷಗಾನದ ಭಾಗವತಿಕೆಯೊಂದಿಗೆ ವೇದಿಕೆ ಮತ್ತು ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಾಯಿತು. ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕರಾದ ಅಶೋಕ್ ಕುಮಾರ್ ರೈ, ಗುರ್ಮೆ ಸುರೇಶ್ ಶೆಟ್ಟಿ, ಸಂಗೀತ ನಿರ್ದೇಶಕ ಗುರುಕಿರಣ್ ಕಂಬಳ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮಧ್ಯಾಹ್ನ 12ಗಂಟೆಗೆ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಸಾಂಸ್ಕೃತಿಕ ಕಾರ್ಯಕ್ರಮ […]

ಮಂಡ್ಯದಲ್ಲಿ ರೈತರ ಆಕ್ರೋಶ: ತಮಿಳುನಾಡಿಗೆ ಮತ್ತೆ 2700 ಕ್ಯೂಸೆಕ್ ನೀರು ಹರಿಸುವಂತೆ CWRC ಸೂಚನೆ

ನವದೆಹಲಿ/ಮಂಡ್ಯ: ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಒಂದು ತಿಂಗಳ ಕಾಲ ಮತ್ತೆ 2700 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಶಿಫಾರಸ್ಸು ಮಾಡಿರುವುದನ್ನು ಕಾವೇರಿ ಹೋರಾಟಗಾರರು ವಿರೋಧಿಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ನಿರಂತರ ಧರಣಿ ನಡೆಸುತ್ತಿರುವ ರೈತರು ಸಮಿತಿಯ ಶಿಫಾರಸು ವಿರುದ್ಧ ಕಿಡಿಕಾರಿದ್ದಾರೆ.ರಾಜ್ಯದಲ್ಲಿ ಈ ಬಾರಿ ಮಳೆ ಇಲ್ಲದೆ ತೀವ್ರ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿದೆ.ಮತ್ತೆ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುವಂತೆ ಸೂಚಿಸಿರುವ CWRC ಶಿಫಾರಸಿನ […]

ಡಿ.23ಕ್ಕೆ 545 PSI ಹುದ್ದೆಗಳಿಗೆ ಮರು ಪರೀಕ್ಷೆ : ಪಿಎಸ್​ಐ ನೇಮಕಾತಿ ಹಗರಣ

ಬೆಂಗಳೂರು: ಮರು ಪರೀಕ್ಷೆ ಯಾವಾಗ ಎಂದು ಎದುರು ನೋಡುತ್ತಿದ್ದ ಅಭ್ಯರ್ಥಿಗಳಿ ಕೆಇಎ ಇದೀಗ ಸಿಹಿ ಸುದ್ದಿಯನ್ನು ನೀಡಿದ್ದು, ಡಿಸೆಂಬರ್​ 23ಕ್ಕೆ ಮರು ಪರೀಕ್ಷೆ ನಡೆಯುವುದಾಗಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್​. ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​ ನೇಮಕಾತಿಗೆ ಮರು ಪರೀಕ್ಷೆಗೆ ಹೈಕೋರ್ಟ್​ ಗ್ರೀನ್​ ಸಿಗ್ನಲ್​ ನೀಡಿದ ಬೆನ್ನಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮರು ಪರೀಕ್ಷಾ ದಿನಾಂಕವನ್ನು ಇಂದು (ನ.22) ಪ್ರಕಟಿಸಿದೆ. 2021ರ ಜನವರಿ 21 ರಂದು ಕರ್ನಾಟಕ ಪೊಲೀಸ್‌ ಇಲಾಖೆಯಿಂದ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕಟವಾಗಿತ್ತು. […]