ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಮೋಹನ್ ನಾಯಕ್‌ಗೆ ಷರತ್ತು ಬದ್ದ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: 2017ರ ಸೆಪ್ಟೆಂಬರ್ ನಡೆದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೋಹನ್ ನಾಯಕ್‌ಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನಾಯಕ್ ಈ ಪ್ರಕರಣದಲ್ಲಿ ಜಾಮೀನು ಪಡೆದ ಮೊದಲ ಆರೋಪಿ. ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಈ ತೀರ್ಪು ಪ್ರಕಟಿಸಿದೆ. ನಾಯಕ್ ಅವರು 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಹಾಗೂ ಅದೇ ಮೊತ್ತಕ್ಕೆ ಇನ್ನಿತರ ಇಬ್ಬರು ಶ್ಯೂರಿಟಿ ಒದಗಿಸುವಂತೆ ಮತ್ತು ನ್ಯಾಯಾಲಯವು ನೀಡಿದ ಕಾರಣಗಳಿಗಾಗಿ ಅವರ ಹಾಜರಾತಿಗೆ […]

ಮಹಾರಾಜ ಯದುವೀರ್ ಒಡೆಯರ್ ಕೈ ಮುಗಿದು ಕ್ಯಾ. ಅರ್ಜುನನ ಸಮಾಧಿಗೆ ನಮಸ್ಕಾರ

ಹಾಸನ: ಹಾಸನದ ಸಕಲೇಶಪುರದಲ್ಲಿ ಕಾಡಾನೆ ಕಾರ್ಯಾಚರಣೆ ವೇಳೆ ಬಲಿಷ್ಠವಾದ ಒಂಟಿ ಸಲಗದ ದಾಳಿಗೆ ಅರ್ಜುನ ಗಾಯಗೊಂಡು ಸಾವನ್ನಪ್ಪಿದ್ದ. ಮೃತ ಕ್ಯಾಪ್ಟನ್​ ಅರ್ಜುನನ್ನು ಹಾಸನದ ಯಸಳೂರಿನ ದಬ್ಬಳ್ಳಿಕಟ್ಟೆಯಲ್ಲಿ ಸಮಾಧಿ ಮಾಡಲಾಗಿತ್ತು. ಇಂದು ಹಾಸನಕ್ಕೆ ಆಗಮಿಸಿ ಯದುವೀರ್ ಕೃಷ್ಣದತ್ತ ಜಯಚಾಮರಾಜ ಒಡೆಯರ್ ಹಾಗೂ ತ್ರಿಷಿಕಾ ಕುಮಾರಿ ಒಡೆಯರ್ 8 ಬಾರಿ ಮೈಸೂರು ಅಂಬಾರಿ ಹೊತ್ತ ಅರ್ಜುನ ಸಮಾಧಿಗೆ ಕೈಮುಗಿದು ನಮಸ್ಕರಿಸಿದರು. ಕಾಡಾನೆ ದಾಳಿಯಲ್ಲಿ ದಸರಾ ಆನೆ ಅರ್ಜುನ ಮೃತಪಟ್ಟ ಹಿನ್ನೆಲೆ ಅರ್ಜುನನ ಸಮಾಧಿಗೆ ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಜಯಚಾಮರಾಜ […]

ತೆಲಂಗಾಣದ ಮಾಜಿ ಸಿಎಂ ಆಸ್ಪತ್ರೆಗೆ ದಾಖಲು

ಹೈದರಾಬಾದ್: ಬಿಆರ್‌ಎಸ್ ನಾಯಕ ಹಾಗೂ ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಕಲ್ವಕುಂಟ್ಲ ಚಂದ್ರಶೇಖರ್​ ರಾವ್ ಅವರನ್ನು ಗುರುವಾರ ತಡರಾತ್ರಿ ಸೋಮಾಜಿಗುಡದಲ್ಲಿರುವ ಯಶೋದಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಿದ್ದಿದ್ದರಿಂದ ಅವರ ಸೊಂಟದ ಮೂಳೆ ಮುರಿತವಾಗಿದೆ ಎಂದು ವೈದ್ಯರು ಹೇಳಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಅವರಿಗೆ ಶಸ್ತ್ರಚಿಕಿತ್ಸೆ ಮಾಡುವ ಸಾಧ್ಯತೆಗಳಿವೆ. ವೈದ್ಯಕೀಯ ಪರೀಕ್ಷೆಗಳ ಬಳಿಕ ವೈದ್ಯರು ಶಸ್ತ್ರಚಿಕಿತ್ಸೆ ಮಾಡಬೇಕಾ ಬೇಡವೇ ಎಂಬ ಬಗ್ಗೆ ಡಾಕ್ಟರ್​ಗಳು ನಿರ್ಧರಿಸಲಿದ್ದಾರೆ ಎಂದು ತಿಳಿದು ಬಂದಿದೆ. ನಿನ್ನೆ ಎರ್ರವೆಲ್ಲಿಯ ತಮ್ಮ […]

ಪ್ರವಾಹ ಪರಿಸ್ಥಿತಿ ಸುಧಾರಿಸಿದ ಬೆನ್ನಲ್ಲೇ ತಮಿಳುನಾಡಿಗೆ ಭೂಕಂಪನದ ಬಿಸಿ : ಕರ್ನಾಟಕದಲ್ಲಿ ನಡುಗಿದ ಭೂಮಿ

ಚೆಂಗಲ್ಪಟ್ಟು (ತಮಿಳುನಾಡು): ಇತ್ತೀಚೆಗೆ ಬಂಗಾಳಕೊಲ್ಲಿಯಲ್ಲಿ ಸಂಭವಿಸಿದ ವಾಯುಭಾರ ಕುಸಿತದ ಹಿನ್ನೆಲೆ ತಮಿಳುನಾಡಿನಲ್ಲಿ ಮಿಚೌಂಗ್​ ಚಂಡಮಾರುತ ಅಬ್ಬರಿಸಿತ್ತು. ಹೌದು ಇಂದು ಬೆಳಗ್ಗೆ ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಭೂಕಂಪನ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಸುಮಾರು 10 ಕಿ.ಮೀ ಪ್ರದೇಶದಲ್ಲಿ ಇಂದು ಬೆಳಗ್ಗೆ 07: 39ರ ಸುಮಾರಿಗೆ 3.2 ತೀವ್ರತೆಯ ಭೂಕಂಪ ಸಂಭವಿಸಿದೆ.ತಮಿಳುನಾಡಿನ ಹಲವೆಡೆ ಭಾರಿ ಮಳೆ ಸುರಿದು ಜನಜೀವನ ಅಸ್ತವ್ಯಸ್ತವಾಗಿತ್ತು.ಕರ್ನಾಟಕ ಮತ್ತು ತಮಿಳುನಾಡಿನ ಕೆಲವೆಡೆ ಭೂಕಂಪನ ಸಂಭವಿಸಿದೆ. ಅದರಲ್ಲೂ, ಚೆನ್ನೈನಂತಹ ಮಹಾನಗರದಲ್ಲಿ ಪ್ರವಾಹ […]

ಉತ್ತರ ಕನ್ನಡದಲ್ಲಿ ವಿನೂತನ ಕ್ರಮ ಜಾರಿ : ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಕ್ಯೂಆರ್ ಕೋಡ್

ಕಾರವಾರ(ಉತ್ತರ ಕನ್ನಡ): ಜಿಲ್ಲೆಯ ಎಲ್ಲಾ ಪೊಲೀಸ್‌ ಠಾಣೆಗಳಲ್ಲಿ ಲೋಕಸ್ಪಂದನ ಕ್ಯೂಆರ್ ಕೋಡ್ ಆಧಾರಿತ ಸಾರ್ವಜನಿಕ ಅಭಿಪ್ರಾಯ ಸಂಗ್ರಹಣೆಯ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಸಾರ್ವಜನಿಕರು ತಮ್ಮ ಪ್ರತಿಕ್ರಿಯೆ, ಸಲಹೆಗಳನ್ನು ಮುಕ್ತವಾಗಿ ನೀಡಬಹುದು. ಎಲ್ಲಾ ಪೊಲೀಸ್ ಠಾಣೆಗಳ ಪ್ರವೇಶ ದ್ವಾರದಲ್ಲಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗಿದ್ದು, ಠಾಣೆಗೆ ಭೇಟಿ ನೀಡುವವರು ಪೊಲೀಸರ ಸೇವೆಯ ಬಗ್ಗೆ ತಮ್ಮ ಪ್ರತಿಕ್ರಿಯೆ ನೀಡಬಹುದು. ಈ ಕ್ರಮವು ಪೊಲೀಸರಿಗೆ ಉತ್ತಮ ಸೇವೆ ನೀಡಲು ಮತ್ತು ಸಿಬ್ಬಂದಿಯ ದಕ್ಷತೆ ಸುಧಾರಿಸುವುದರೊಂದಿಗೆ ಪಾರದರ್ಶಕತೆಯನ್ನು ತರಲು ಸಹಾಯಕವಾಗಲಿದೆ. […]