ಪ್ರಯಾಣಿಕರಿಗೆ ಶೇ.10ರಷ್ಟು ರಿಯಾಯಿತಿ : ದೀಪಾವಳಿಗೆ ಕೆಎಸ್​ಆರ್​ಟಿಸಿಯಿಂದ 2,000 ವಿಶೇಷ ಬಸ್

ಬೆಂಗಳೂರು: ನವೆಂಬರ್ 12ರಂದು ನರಕ ಚತುರ್ದಶಿ, ನವೆಂಬರ್ 14ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ನ.10 ರಿಂದ 12 ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ 2,000 ಹೆಚ್ಚುವರಿ ವಿಶೇಷ ಬಸ್‌ ಸಂಚಾರದ ವ್ಯವಸ್ಥೆಯಾಗಿದೆ. ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಪ್ರಯಾಣಿಕರು ವಾಪಸ್ ಬರಲು ಅನುಕೂಲವಾಗುವಂತೆ ನವೆಂಬರ್ 14 ಹಾಗೂ 15 ರಂದು ವಿಶೇಷ ಬಸ್‌ಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್‌ಆರ್​ಟಿಸಿ ಮಾಹಿತಿ ನೀಡಿದೆ.ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಬೆಂಗಳೂರಿನಿಂದ ರಾಜ್ಯದ ವಿವಿಧ […]

ಗರ್ಭಿಣಿಯರ ಆರೋಗ್ಯದ ಮೇಲೆ ಹೆಚ್ಚು ನಿಗಾ : ಚಿಕ್ಕಬಳ್ಳಾಪುರದಲ್ಲಿ ಝಿಕಾ ವೈರಸ್ ಪತ್ತೆ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಝಿಕಾ ವೈರಸ್ ಪತ್ತೆಯಾಗಿದೆ. ಆರೋಗ್ಯ ಇಲಾಖೆ ಈ ಕುರಿತು ಕಟ್ಟೆಚ್ಚರ ವಹಿಸುತ್ತಿದೆ.ಇತ್ತೀಚೆಗೆ ಕೇರಳದಲ್ಲಿ ಪತ್ತೆಯಾಗಿರುವ ಝಿಕಾ ವೈರಸ್ ಇದೀಗ ಚಿಕ್ಕಬಳ್ಳಾಪುರದಲ್ಲಿ ಕಂಡುಬಂದಿದೆ. ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಇಲಾಖೆ ಸಿದ್ಧಪಡಿಸುತ್ತಿದೆ. ಈ ಗ್ರಾಮದ ವ್ಯಾಪ್ತಿಯಲ್ಲಿ ಸುಮಾರು 5,000ಕ್ಕೂ ಹೆಚ್ಚು ಜನ ವಾಸಿಸುತ್ತಿದ್ದು, ಆರೋಗ್ಯ ಇಲಾಖೆ ತಪಾಸಣೆಗೆ ಒಳಪಡಿಸಲಿದೆ. ಅದರಲ್ಲೂ ಮುಖ್ಯವಾಗಿ, ಗರ್ಭಿಣಿಯರು ಸೇರಿದಂತೆ ಇತರರ ಮೇಲೆ ಹೆಚ್ಚು ನಿಗಾ ವಹಿಸುತ್ತಿದೆ. ಜಿಲ್ಲೆಯ ನಾಗರಿಕರಲ್ಲಿ ಝಿಕಾ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಮಹೇಶ್ ಸ್ಪಷ್ಟಪಡಿಸಿದ್ದಾರೆ.ಆರೋಗ್ಯ […]

ನಾಳೆಯಿಂದ ಭಕ್ತರಿಗೆ ದರ್ಶನಭಾಗ್ಯ: ಇಂದು ಮಧ್ಯಾಹ್ನ ಹಾಸನಾಂಬೆ ದೇವಸ್ಥಾನದ ಬಾಗಿಲು ಓಪನ್

ಹಾಸನ: ಇಂದು ಮಧ್ಯಾಹ್ನ 12 ಗಂಟೆಗೆ ದೇವಸ್ಥಾನದ ಬಾಗಿಲು ತೆರೆಯಲಿದ್ದು, ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಈ ವರ್ಷ ಒಟ್ಟು 14 ದಿನ ದೇಗುಲದ ಬಾಗಿಲು ತೆರೆದಿರಲಿದೆ. ಮೊದಲ ಹಾಗೂ ಕೊನೆಯ ದಿನವನ್ನು ಹೊರತುಪಡಿಸಿ ಉಳಿದ 12 ದಿನಗಳ ಕಾಲ 24 ಗಂಟೆಯೂ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.ವರ್ಷಕ್ಕೊಮ್ಮೆ ಬಾಗಿಲು ತೆರೆದು ಭಕ್ತರಿಗೆ ದರ್ಶನ ಭಾಗ್ಯ ಕರುಣಿಸುವ ಹಾಸನದ ಅಧಿದೇವತೆ ಮಾತೆ ಶ್ರೀ ಹಾಸನಾಂಬೆ ದರ್ಶನೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ.ಮಧ್ಯಾಹ್ನ 12 ಗಂಟೆಗೆ ಶ್ರೀ ಹಾಸನಾಂಬೆ ದೇವಸ್ಥಾನದ […]

ಅರ್ಧಂಬರ್ಧ ಪ್ರೇಮಕಥೆ’ಯ ‘ ಸಿನಿಮಾ : ಆರಂಭ’ ಹಾಡು ಕರ್ನಾಟಕರತ್ನ ಅಪ್ಪುಗೆ ಅರ್ಪಣೆ

ಬೆಂಗಳೂರು: ರಾಜಧಾನಿಯ ಕೆಂಗೇರಿ ಬಳಿ ಇತ್ತೀಚೆಗೆ ‘ಅಕ್ಟೋಬರ್​ ಬೈಕರ್ಸ್​ ಫೆಸ್ಟ್’​ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಡಾ. ಪುನೀತ್​ ರಾಜ್​ಕುಮಾರ್​ ಅವರ ಎರಡನೇ ಪುಣ್ಯ ಸ್ಮರಣೆಯ ಸಂದರ್ಭದಲ್ಲಿ ಎಲ್ಲಾ ಬೈಕರ್ಸ್​ ಅಪ್ಪು ಅವರನ್ನು ಸ್ಮರಿಸಿ ಬೊಂಬೆ ಹೇಳುತೈತೆ ಹಾಡನ್ನು ಆಲಿಸಿದರು. ರಾಜ್ಯದ ವಿವಿಧ ಜಿಲ್ಲೆಯ ಬೈಕ್​ ರೇಸರ್ಸ್​ ಇಲ್ಲಿ ಜಮಾಯಿಸಿದ್ದರು.ಅರವಿಂದ್ ಕೌಶಿಕ್ ನಿರ್ದೇಶನದ ‘ಅರ್ಧಂಬರ್ಧ ಪ್ರೇಮಕಥೆ’ ಸಿನಿಮಾದ ʻಆರಂಭʼ ಎಂಬ ಹಾಡು ಬಿಡುಗಡೆಯಾಗಿದೆ. ‘ಅರ್ಧಂಬರ್ಧ ಪ್ರೇಮಕಥೆ’ ಚಿತ್ರದ ಮೂಲಕ ಅರವಿಂದ್ ಕೆ.ಪಿ‌ ಹೀರೋ ಆಗಿ ಲಾಂಚ್ ಆಗುತ್ತಿದ್ದಾರೆ. ಬಿಗ್ ಬಾಸ್ […]

ಸಿಎಂ ಸಿದ್ದರಾಮಯ್ಯ ಘೋಷಣೆ : ಇಂದಿನಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ವಿದ್ಯುತ್, ಕುಡಿಯುವ ನೀರು ಉಚಿತ

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ಉಚಿತವಾಗಿ ವಿದ್ಯುತ್ ಹಾಗು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.ಇದೇ ವೇಳೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಓದಬೇಕು, ಕನಿಷ್ಠ ಎಸ್‌ಎಸ್‌ಎಲ್​ಸಿವರೆಗಾದರೂ ಕನ್ನಡ ಮಾಧ್ಯಮದಲ್ಲಿ ಓದಬೇಕು ಎಂದು ಕರೆ ನೀಡಿದ್ದಾರೆ. ಇಂದಿನಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ವಿದ್ಯುತ್ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಉಚಿತವಾಗಿ ನೀಡಲಾಗುತ್ತದೆ ಎಂದು ಸಿಎಂ ಘೋಷಿಸಿದ್ದಾರೆ ಈ ವರ್ಷಕ್ಕೆ 50 ವರ್ಷದ ಕಾರ್ಯಕ್ರಮ ಮಾಡಬೇಕಿತ್ತು. ಆದರೆ ಹಿಂದಿನ ಸರ್ಕಾರ […]