14 ಜನರ ಬಂಧನ, 20 ಮಹಿಳೆಯರ ರಕ್ಷಣೆ : ಮಾನವ ಕಳ್ಳಸಾಗಣೆ ವಿರುದ್ಧ ಸಿಸಿಬಿ ಪೊಲೀಸರ ಕಾರ್ಯಾಚರಣೆ

ಬೆಂಗಳೂರು: ನೊಂದ 20 ಮಹಿಳೆಯರನ್ನ ರಕ್ಷಿಸಲಾಗಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ನಗರದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ನಗರದಲ್ಲಿ ಮಾನವ ಕಳ್ಳಸಾಗಣಿಕೆ ಹಾಗೂ ವೇಶ್ಯಾವಾಟಿಕೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ 14 ಜನ ಆರೋಪಿಗಳನ್ನು ಬಂಧಿಸಲಾಗಿದೆ.ಬೆಂಗಳೂರಿನಲ್ಲಿ ಮಾನವ ಕಳ್ಳಸಾಗಣೆ ವಿರುದ್ಧ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, 14 ಜನರ ಬಂಧಿಸಿದ್ದಾರೆ. ನೊಂದ 20 ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಬಾಗಲಗುಂಟೆ, ವರ್ತೂರು, ಕೆ.ಆರ್. ಪುರಂ, ವಿದ್ಯಾರಣ್ಯಪುರ, ಅಮೃತಹಳ್ಳಿ […]

ಅರಣ್ಯ ಇಲಾಖೆಯ ಬೋನಿಗೆ ಬೀಳದ ಚಿರತೆ, ಬೆಂಗಳೂರಿನಲ್ಲಿ ಮುಂದುವರೆದ ಕಾರ್ಯಾಚರಣೆ

ಬೆಂಗಳೂರು: ಕಡೆಂಜಾ (Cadenza) ಅಪಾರ್ಟ್​ಮೆಂಟ್​ ಸಮೀಪ ಚಿರತೆ ಕಾಣಿಸಿಕೊಂಡಿದ್ದು ಸುತ್ತಮುತ್ತ ಹುಡುಕಾಟ ನಡೆಸಲಾಗಿತ್ತು. ಆದರೆ ಚಿರತೆ ತಪ್ಪಿಸಿಕೊಂಡು ಓಡಾಡುತ್ತಿದೆ.ನಗರದ ಹೊರವಲಯದಲ್ಲಿರುವ ಬೊಮ್ಮನಹಳ್ಳಿಯ ಸಿಂಗಸಂದ್ರ ಎಇಸಿಎಸ್ ಲೇಔಟ್‌ನಲ್ಲಿ ನಿನ್ನೆ (ಸೋಮವಾರ) ಚಿರತೆ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಎರಡು ಬೋನುಗಳನ್ನಿಟ್ಟು ಚಿರತೆ ಸೆರೆಹಿಡಿಯಲು ಕಾರ್ಯಾಚರಣೆ ನಡೆಸಿದ್ದರು. ಬೆಂಗಳೂರಿನ ಹೊರವಲಯದಲ್ಲಿ ಕಾಣಿಸಿಕೊಂಡ ಚಿರತೆ ಸೆರೆ ಹಿಡಿಯಲು ಮೈಸೂರಿನಿಂದ ವಿಶೇಷ ತಂಡ ಆಗಮಿಸಿದೆ. ಮೈಸೂರಿನಿಂದ ವಿಶೇಷ ತಂಡ ಆಗಮನ: ಚಿರತೆ ಕಾರ್ಯಾಚರಣೆಗಾಗಿ ಮೈಸೂರಿನಿಂದ ವಿಶೇಷ ತಂಡ ಬೆಂಗಳೂರಿಗೆ ಆಗಮಿಸಿದೆ. ಈಗಾಗಲೇ ಹಲವೆಡೆ […]

ಈದ್ಗಾ ಮೈದಾನ : ಬೆಂಗಳೂರಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಹೈಕೋರ್ಟ್ ಷರತ್ತುಬದ್ಧ ಅನುಮತಿ

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಚಾಮರಾಜಪೇಟೆ ನಾಗರಿಕರ ಒಕ್ಕೂಟದಿಂದ ನವೆಂಬರ್ 1ರಿಂದ 3 ದಿನಗಳ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಹೈಕೋರ್ಟ್ ಷರತ್ತುಬದ್ಧ ಅನುಮತಿ ಕೊಟ್ಟಿದೆ.ಅಲ್ಲದೆ, ಈದ್ಗಾ ಮೈದಾನ ಬಳಕೆ ಮಾಡಲು ಒಂದು ವೇಳೆ ಕಾನೂನು ಅಡಚಣೆಗಳು ಉಂಟಾದಲ್ಲಿ ಅರ್ಜಿದಾರರ ಒಕ್ಕೂಟದಿಂದ ರಾಜ್ಯೋತ್ಸವ ಆಚರಣೆ ಮಾಡಲು ಜಿಲ್ಲಾಡಳಿತದಿಂದ ಪರ್ಯಾಯ ಮೈದಾನ ಒದಗಿಸಬೇಕು ಎಂದು ಆದೇಶದಲ್ಲಿ ನ್ಯಾಯಪೀಠ ಸ್ಪಷ್ಟ ನಿರ್ದೇನ ನೀಡಿದೆ. ಬೆಂಗಳೂರು ನಗರದ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನವೆಂಬರ್​ 1ರಿಂದ 3ರವರೆಗೆ ಕರ್ನಾಟಕ ರಾಜ್ಯೋತ್ಸವ […]

ರಾಜ್ಯೋತ್ಸವ ಪ್ರಶಸ್ತಿ: ಇಸ್ರೋ ಅಧ್ಯಕ್ಷ ಸೋಮನಾಥ್, ನಟರಾದ ಡಿಂಗ್ರಿ ನಾಗರಾಜ್, ಬ್ಯಾಂಕ್ ಜನಾರ್ದನ ಸೇರಿ 68 ಸಾಧಕರು

ಬೆಂಗಳೂರು: ಕನ್ನಡ ರಾಜ್ಯೋತ್ಸವದ ನಿಮಿತ್ತ ರಾಜ್ಯ ಸರ್ಕಾರದಿಂದ ಕೊಡ ಮಾಡುವ ರಾಜ್ಯೋತ್ಸವ ಪ್ರಶಸ್ತಿಗೆ ಈ ಬಾರಿ ಕಲೆ, ಸಾಹಿತ್ಯ, ವಿಜ್ಞಾನ, ಸಿನಿಮಾ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 68 ಸಾಧಕರಿಗೆ ಮತ್ತು 10 ಸಂಘ ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ‌ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ. ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿನ 68 ಮಂದಿ ಸಾಧಕರು […]

ಸಿಸಿಟಿವಿಯಲ್ಲಿ ದೃಶ್ಯ ಸೆರೆ : ಬೆಂಗಳೂರು ಹೊರವಲಯದ ರಸ್ತೆ, ಅಪಾರ್ಟ್​ಮೆಂಟ್​ಗಳಲ್ಲಿ ಚಿರತೆ ಓಡಾಟ

ಬೆಂಗಳೂರು: ಅರಣ್ಯ ಇಲಾಖೆ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದಾರೆ.ನಗರದ ಹೊರವಲಯದಲ್ಲಿರುವ ಬೊಮ್ಮನಹಳ್ಳಿಯ ಸಿಂಗಸಂದ್ರ ಎಇಸಿಎಸ್ ಲೇಔಟ್‌ನಲ್ಲಿ ಚಿರತೆ ಸಂಚಾರದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರು ಹೊರವಲಯದಲ್ಲಿ ಚಿರತೆ ಓಡಾಡಿದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮತ್ತೋರ್ವ ಸ್ಥಳೀಯ ನಿವಾಸಿ ಪರಮೇಶ್​ ಮಾತನಾಡಿ, “ಚಿರತೆ ಓಡಾಟದ ಬಗ್ಗೆ ಸಿಸಿಟಿವಿಯಲ್ಲಿ ಚೆಕ್​ ಮಾಡಿದ್ದಾರೆ. ಡ್ರೋನ್ ಬೇಕು ಅನ್ನುತ್ತಿದ್ದಾರೆ. ಇಲ್ಲಿ ಸಾರ್ವಜನಿಕರು ಜಾಸ್ತಿ ಇದ್ದಾರೆ. ಬೆಳಿಗ್ಗೆ ವಯಸ್ಸಾದವರು ವಾಕ್​ಗೆ ಬರುತ್ತಾರೆ. ಹಾಗಾಗಿ ಸ್ಥಳೀಯ ಅಧಿಕಾರಿಗಳು ಸ್ವಲ್ಪ ಕೇರ್​ […]