ಬೆಂಗಳೂರು ಕಂಬಳ ಯಶಸ್ವಿ ಹಿನ್ನೆಲೆ ಜಾಗ ಸಿಕ್ಕರೆ ಮುಂದಿನ ವರ್ಷವು ನಡೆಸುತ್ತೇವೆ: ಶಾಸಕ ಅಶೋಕ್ ಕುಮಾರ್ ರೈ ಹೇಳಿಕೆ

ಮಂಗಳೂರು : ಬೆಂಗಳೂರು ಕಂಬಳದ ಯಶಸ್ವಿಯ ಬಳಿಕ ಮಂಗಳೂರಿನಲ್ಲಿ ಈಟಿವಿ ಭಾರತ್ ಜೊತೆಗೆ ಮಾತನಾಡಿದ ಅವರು, ಬೆಂಗಳೂರು ಕಂಬಳ ಯಶಸ್ವಿಯಾಗಿ ನಡೆದಿದೆ. ನಾವು 6-7 ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಲ್ಲಿದ್ದೆವು. ಆದರೆ, ನಮ್ಮ ನಿರೀಕ್ಷೆಗೂ ಮೀರಿ 13 ಲಕ್ಷ ಜನ ಖುದ್ದಾಗಿ ಬಂದು ಬೆಂಗಳೂರು ಕಂಬಳ ವೀಕ್ಷಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ಜನ ಬೆಂಗಳೂರು ಕಂಬಳ ವೀಕ್ಷಿಸಿದ್ದಾರೆ ಎಂದರುರಾಷ್ಟ್ರದ ಗಮನಸೆಳೆದ ಬೆಂಗಳೂರು ಕಂಬಳವನ್ನು ಆಯೋಜಿಸಿದವರಲ್ಲಿ ಪ್ರಮುಖರಾದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಜಾಗ ಸಿಕ್ಕರೆ ಮುಂದಿನ […]
ತಾತ್ಕಾಲಿಕ ವೇಳಾಪಟ್ಟಿ ಪ್ರಕಟ : ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯು 2024 ರ ಮಾರ್ಚ್ 2ರಿಂದ ಆರಂಭಗೊಂಡು ಮಾರ್ಚ್ 22 ಕ್ಕೆ ಮುಕ್ತಾಯವಾಗಲಿದೆ. ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆಯು ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆಯಲಿದೆ.2023-24 ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.2023-24 ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಗೊಂಡಿದೆ. ಎಸ್ಎಸ್ಎಲ್ಸಿ […]
ಬೆಂಗಳೂರು: ಮಕ್ಕಳನ್ನು ಮನೆಗೆ ಕರೆದೊಯ್ದ ಪೋಷಕರು, ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ

ಬೆಂಗಳೂರು: ನಗರದ 15 ಶಾಲೆಗಳ ಆಡಳಿತ ಮಂಡಳಿಯ ಇ-ಮೇಲ್ಗೆ ಬೆದರಿಕೆ ಸಂದೇಶಗಳು ಬಂದಿವೆ.ರಾಜಧಾನಿ ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ದುಷ್ಕರ್ಮಿಗಳು ಇಂದು ಬೆದರಿಕೆ ಹಾಕಿದ್ದಾರೆ. ನಗರದ ಕೆಲವು ಶಾಲೆಗಳಿಗೆ ಇಂದು ಬೆಳಗ್ಗೆ ಇಮೇಲ್ ಮೂಲಕ ‘ಬಾಂಬ್ ಬೆದರಿಕೆ’ ಕರೆಗಳನ್ನು ಕಳುಹಿಸಲಾಗಿದೆ. ಈ ಬಗ್ಗೆ ನಮ್ಮ ಬಾಂಬ್ ಪತ್ತೆ ದಳದವರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಈವರೆಗಿನ ತಪಾಸಣೆಯಿಂದ ಇವು ಸುಳ್ಳು ಕರೆಗಳೆಂದು ಕಂಡುಬರುತ್ತಿದೆ. ಆದಾಗ್ಯೂ ಇಮೇಲ್ ಕಳುಹಿಸಿದ ವ್ಯಕ್ತಿಗಳ ಪತ್ತೆಗೆ ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದು ನಗರ […]
ಸಿಎಂ ಸಿದ್ದರಾಮಯ್ಯ : ಮುಂದಿನ ಐದು ವರ್ಷಗಳಲ್ಲಿ ಭಾರತ, ಕರ್ನಾಟಕ ಏಡ್ಸ್ ಮುಕ್ತವಾಗಲಿ

ಬೆಂಗಳೂರು: ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಲಾಗಿದ್ದ ವಿಶ್ವ ಏಡ್ಸ್ ದಿನ 2023 ಮತ್ತು 25ನೇ ರಜತ ಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, “ಇಂದು ವಿಶ್ವ ಏಡ್ಸ್ ದಿನ. ಈ ಸಾಂಕ್ರಾಮಿಕ ರೋಗ ತಡೆಯುವ ಜವಾಬ್ದಾರಿ ಎಲ್ಲರ ಮೇಲಿದೆ. ಈ ರೋಗ 1986ರಲ್ಲಿ ಭಾರತದಲ್ಲಿ ಹಾಗೂ 1987ರಲ್ಲಿ ಕರ್ನಾಟಕದಲ್ಲಿ ಪತ್ತೆಯಾಗಿತ್ತು” ಎಂದರು.”ಮುಂದಿನ ಐದು ವರ್ಷಗಳಲ್ಲಿ ಭಾರತ ಹಾಗೂ ಕರ್ನಾಟಕ ಏಡ್ಸ್ ಮುಕ್ತ ದೇಶ, ರಾಜ್ಯ ಆಗಲಿ. ಈ ದಿಕ್ಕಿನಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಏಡ್ಸ್ […]
ಚಿತ್ರೀಕರಣದ ವೇಳೆ ಕ್ವಾರಿಗೆ ಬಿದ್ದು ನಟ ಮಂಡ್ಯ ರಮೇಶ್ ಮೂಳೆ ಮುರಿತ: ಆಸ್ಪತ್ರೆಯಲ್ಲಿ ಚೇತರಿಕೆ

ಬೆಂಗಳೂರು: ಖಾಸಗಿ ಚಾನಲ್ ಒಂದರ ಧಾರಾವಾಹಿ ಚಿತ್ರೀಕರಣದ ವೇಳೆಯಲ್ಲಿ ಹಿರಿಯ ನಟ ಮಂಡ್ಯ ರಮೇಶ್ ಕಾಲು ಜಾರಿ ಬಿದ್ದಿದ್ದು, ತೀವ್ರ ಗಾಯದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಧಾರಾವಾಹಿ ಚಿತ್ರೀಕರಣದ ವೇಳೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ. ಸ್ಟಾರ್ ಸುವರ್ಣದಲ್ಲಿ ಪ್ರಸಾರ ಕಾಣಲಿರುವ ಹೊಸ ಧಾರಾವಾಹಿ ‘ಆಸೆ’ ಶೂಟಿಂಗ್ ವೇಳೆ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಲ್ಲು ಕ್ವಾರಿಯಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ರಮೇಶ್ ಕಾಲು ಜಾರಿ ಬಿದ್ದಿದ್ದಾರೆ. ಘಟನೆಯಲ್ಲಿ ನಟ […]