ಇಂದಿನಿಂದ ರಾಜ್ಯ ರಾಜಧಾನಿಯಲ್ಲಿ ಕಂಬಳ ಕಲರವ: ರಾಜ-ಮಹಾರಾಜ ಜೋಡುಕರೆಯಲ್ಲಿ ವಿಜೃಂಭಿಸಲಿದೆ ತುಳುನಾಡ ಜನಪದ ಕ್ರೀಡೆ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕರಾವಳಿ ಭಾಗದ ಗ್ರಾಮೀಣ ಕ್ರೀಡೆ ಕಂಬಳ ಕಲರವ ಇಂದಿನಿಂದ ಎರಡು ದಿನಗಳ ಕಾಲ ನಗರದ ಅರಮನೆ ಮೈದಾನದಲ್ಲಿ ನಡೆಯಲಿದೆ. ಯಕ್ಷಗಾನದ ಭಾಗವತಿಕೆಯೊಂದಿಗೆ ವೇದಿಕೆ ಮತ್ತು ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಾಯಿತು. ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕರಾದ ಅಶೋಕ್ ಕುಮಾರ್ ರೈ, ಗುರ್ಮೆ ಸುರೇಶ್ ಶೆಟ್ಟಿ, ಸಂಗೀತ ನಿರ್ದೇಶಕ ಗುರುಕಿರಣ್ ಕಂಬಳ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮಧ್ಯಾಹ್ನ 12ಗಂಟೆಗೆ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಸಾಂಸ್ಕೃತಿಕ ಕಾರ್ಯಕ್ರಮ […]

ಮಂಡ್ಯದಲ್ಲಿ ರೈತರ ಆಕ್ರೋಶ: ತಮಿಳುನಾಡಿಗೆ ಮತ್ತೆ 2700 ಕ್ಯೂಸೆಕ್ ನೀರು ಹರಿಸುವಂತೆ CWRC ಸೂಚನೆ

ನವದೆಹಲಿ/ಮಂಡ್ಯ: ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಒಂದು ತಿಂಗಳ ಕಾಲ ಮತ್ತೆ 2700 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಶಿಫಾರಸ್ಸು ಮಾಡಿರುವುದನ್ನು ಕಾವೇರಿ ಹೋರಾಟಗಾರರು ವಿರೋಧಿಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ನಿರಂತರ ಧರಣಿ ನಡೆಸುತ್ತಿರುವ ರೈತರು ಸಮಿತಿಯ ಶಿಫಾರಸು ವಿರುದ್ಧ ಕಿಡಿಕಾರಿದ್ದಾರೆ.ರಾಜ್ಯದಲ್ಲಿ ಈ ಬಾರಿ ಮಳೆ ಇಲ್ಲದೆ ತೀವ್ರ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿದೆ.ಮತ್ತೆ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುವಂತೆ ಸೂಚಿಸಿರುವ CWRC ಶಿಫಾರಸಿನ […]

ಡಿ.23ಕ್ಕೆ 545 PSI ಹುದ್ದೆಗಳಿಗೆ ಮರು ಪರೀಕ್ಷೆ : ಪಿಎಸ್​ಐ ನೇಮಕಾತಿ ಹಗರಣ

ಬೆಂಗಳೂರು: ಮರು ಪರೀಕ್ಷೆ ಯಾವಾಗ ಎಂದು ಎದುರು ನೋಡುತ್ತಿದ್ದ ಅಭ್ಯರ್ಥಿಗಳಿ ಕೆಇಎ ಇದೀಗ ಸಿಹಿ ಸುದ್ದಿಯನ್ನು ನೀಡಿದ್ದು, ಡಿಸೆಂಬರ್​ 23ಕ್ಕೆ ಮರು ಪರೀಕ್ಷೆ ನಡೆಯುವುದಾಗಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್​. ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​ ನೇಮಕಾತಿಗೆ ಮರು ಪರೀಕ್ಷೆಗೆ ಹೈಕೋರ್ಟ್​ ಗ್ರೀನ್​ ಸಿಗ್ನಲ್​ ನೀಡಿದ ಬೆನ್ನಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮರು ಪರೀಕ್ಷಾ ದಿನಾಂಕವನ್ನು ಇಂದು (ನ.22) ಪ್ರಕಟಿಸಿದೆ. 2021ರ ಜನವರಿ 21 ರಂದು ಕರ್ನಾಟಕ ಪೊಲೀಸ್‌ ಇಲಾಖೆಯಿಂದ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕಟವಾಗಿತ್ತು. […]

ಭಾರಿ ಅಗ್ನಿ ಅವಘಡ : ಬೆಂಗಳೂರಿನಲ್ಲಿ ಆಟಿಕೆ ವಸ್ತುಗಳ ಗೋದಾಮಿ ಘಟನೆ

ಬೆಂಗಳೂರು : ಆಟಿಕೆ ವಸ್ತುಗಳು ಹಾಗೂ ಎಲೆಕ್ಟ್ರಾನಿಕ್ ವಸ್ತುಗಳ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಕೆ. ಆರ್ ಮಾರ್ಕೆಟ್ ಠಾಣಾ ವ್ಯಾಪ್ತಿಯ ಕುಂಬಾರಪೇಟೆಯಲ್ಲಿ ಭಾನುವಾರ ನಡೆದಿದೆ. ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಗೋದಾಮಿನಲ್ಲಿ ಅವಘಡ ಉಂಟಾಗಿದ್ದು, ನಂತರ ನಾಲ್ಕನೇ ಮಹಡಿಗೂ ಬೆಂಕಿ ವ್ಯಾಪಿಸಿದೆ. ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳದಲ್ಲಿ ಐದು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. ರಾಜ್ಯದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಈ ಹಿಂದೆ ಆನೇಕಲ್​ ತಾಲೂಕಿನ ಅತ್ತಿಬೆಲೆಯಲ್ಲಿ ಸಂಭವಿಸಿದ್ದ ಪಟಾಕಿ […]

ಉತ್ತರ ಪ್ರದೇಶ ಸರ್ಕಾರದಿಂದ ಹಲಾಲ್ ಉತ್ಪನ್ನಗಳ ತಯಾರಿ, ಮಾರಾಟ ನಿಷೇಧ

ಲಕ್ನೋ(ಉತ್ತರ ಪ್ರದೇಶ): ಹಲಾಲ್ ಪ್ರಮಾಣೀಕೃತವಲ್ಲದ ಉತ್ಪನ್ನಗಳ ಬಳಕೆಯನ್ನು ಕಡಿಮೆ ಮಾಡುವ ದುರುದ್ದೇಶಪೂರಿತ ಪ್ರಯತ್ನಗಳು ಮತ್ತು ಅನ್ಯಾಯದ ಮಾರ್ಗದಲ್ಲಿ ಆರ್ಥಿಕ ಪ್ರಯೋಜನಗಳನ್ನು ಪಡೆಯುವುದಲ್ಲದೆ, ಕೋಮು ದ್ವೇಷವನ್ನು ಬಿತ್ತಲು, ಸಮಾಜದಲ್ಲಿ ವಿಭಜನೆಗಳನ್ನು ಸೃಷ್ಟಿಸಲು ಹಾಗೂ ಹಲಾಲ್‌ ಪ್ರಮಾಣೀಕೃತವು ರಾಷ್ಟ್ರ ವಿರೋಧಿ ಶಕ್ತಿಗಳಿಂದ ದೇಶವನ್ನು ದುರ್ಬಲಗೊಳಿಸಲು ಪೂರ್ವ ಯೋಜಿತ ಕಾರ್ಯತಂತ್ರದ ಭಾಗವಾಗಿದೆ ಎಂದು ಸರ್ಕಾರ ಆರೋಪಿಸಿದೆ. ಹಲಾಲ್‌ ಪ್ರಮಾಣೀಕೃತ ಉತ್ಪನ್ನಗಳ ತಯಾರಿ, ಸಂಗ್ರಹಣೆ ಮತ್ತು ಮಾರಾಟದ ಮೇಲೆ ಉತ್ತರ ಪ್ರದೇಶ ಸರ್ಕಾರ ನಿಷೇಧ ಹೇರಿದೆ.ಉತ್ತರಪ್ರದೇಶ ಸರ್ಕಾರ ಹಲಾಲ್‌ ಪ್ರಮಾಣೀಕೃತ ಉತ್ಪನ್ನಗಳ ತಯಾರಿ, […]