ಮಕ್ಕಳ ಪೌಷ್ಟಿಕ ಆಹಾರ ಸರಬರಾಜಿನಲ್ಲಿ ಅಕ್ರಮ ಆರೋಪ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ದ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಕ್ಕಳ ಪೌಷ್ಟಿಕ ಆಹಾರ ಸರಬರಾಜಿನಲ್ಲಿ 600 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಭ್ರಷ್ಟಾಚಾರದ ನಡೆದಿದೆ ಎಂದು ಆರೋಪಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸೇರಿದಂತೆ ಇತರರ ವಿರುದ್ಧ ಲೋಕಾಯುಕ್ತ ಸಂಸ್ಥೆಯಲ್ಲಿ ದೂರು ದಾಖಲಾಗಿದೆ. ವಕೀಲ ನಟರಾಜ್ ಶರ್ಮಾ ಎಂಬುವವರು ದೂರು ನೀಡಿದ್ದು, ಅನರ್ಹ ಸಹಕಾರ ಸಂಘಗಳಿಗೆ ಮಕ್ಕಳ ಪೌಷ್ಟಿಕ ಆಹಾರವನ್ನು ಸರಬರಾಜಿಗೆ ಗುತ್ತಿಗೆ ನೀಡಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ. ಶಿವಮೊಗ್ಗದ […]

ಲೋಕಾಯುಕ್ತಕ್ಕೆ‌ ದೂರು : ಆಹಾರ ಸರಬರಾಜಿನಲ್ಲಿ ಗೋಲ್‌ಮಾಲ್ ಆರೋಪ

ಬೆಂಗಳೂರು : ಇಲಾಖೆಯಲ್ಲಿ ಜವಾಬ್ದಾರಿ ಹೊತ್ತ ಮೂವರ ವಿರುದ್ಧ ದೂರು ನೀಡಲಾಗಿದೆ. ಇಲಾಖೆಯು‌ ಅಂಗನವಾಡಿಯಲ್ಲಿ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಪೌಷ್ಠಿಕ ಆಹಾರ ಸರಬರಾಜು ಮಾಡಲು ನೀಡಿರುವ ಟೆಂಡರ್ ವಿಚಾರದಲ್ಲಿ ಗೋಲ್‌ಮಾಲ್ ನಡೆದಿದೆ ಎಂದು ಆರೋಪಿಸಿದ್ದಾರೆ.ಮಕ್ಕಳು ಹಾಗೂ ಗರ್ಭಿಣಿಯರಿಗೆ ಪೌಷ್ಠಿಕ ಆಹಾರ ಸರಬರಾಜು ಮಾಡಲು ಅನರ್ಹ ಸಂಸ್ಥೆಗಳಿಗೆ ನೀಡಿದ ಗುತ್ತಿಗೆಯಲ್ಲಿ ಸುಮಾರು 600 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ವಕೀಲ ಎಸ್ ನಟರಾಜ ಶರ್ಮಾ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಮಕ್ಕಳು ಹಾಗೂ ಗರ್ಭಿಣಿಯರಿಗೆ ನೀಡುವ […]

ಪ್ರತಿಪಕ್ಷ ನಾಯಕನ ಪಟ್ಟಕ್ಕೆ ಮಾಜಿ ಡಿಸಿಎಂ ಆರ್​ ಅಶೋಕ್

ಬೆಂಗಳೂರು: “ಇದೊಂದು ಅವಿರೋಧ ಆಯ್ಕೆಯಾಗಿತ್ತು. ಅಶೋಕ್​ ಒಬ್ಬ ಹಿರಿಯ ನಾಯಕ. ನಾನು ಅವರನ್ನು ಅಭಿನಂದಿಸುತ್ತೇನೆ. ಪ್ರತಿಪಕ್ಷ ನಾಯಕನಾಗಿ ಆರ್​ ಅಶೋಕ್​ ಅವರ ಹೆಸರನ್ನು ಬಿಜೆಪಿ ನಾಯಕರು ಘೋಷಣೆ ಮಾಡಿದ್ದಾರೆ.ಅಶೋಕ್​ ಆಯ್ಕೆಯಿಂದ ನನಗೂ ಬಹಳ ಖುಷಿಯಾಗಿದೆ” ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.ಮಾಜಿ ಉಪ ಮುಖ್ಯಮಂತ್ರಿ ಆರ್​. ಅಶೋಕ್​ಗೆ ಪ್ರತಿಪಕ್ಷ ನಾಯಕನ ಸ್ಥಾನ ಒಲಿದಿದೆ. ಹೈಕಮಾಂಡ್ ಕಳುಹಿಸಿದ್ದ ವೀಕ್ಷಕರ ಸಮ್ಮುಖದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರತಿಪಕ್ಷ ನಾಯಕನಾಗಿ ಅಶೋಕ್​ ಅವರನ್ನು ಘೋಷಣೆ ಮಾಡಲಾಗಿದೆ.ಧನ್ಯವಾದ ತಿಳಿಸಿದ […]

ಮದುವೆ ಆಗುವುದಕ್ಕೆ ನಿರಾಕರಿಸಿದ್ದಕ್ಕೆ ಕೊಲೆ

ಉಡುಪಿ: ಉಡುಪಿಯ ನೇಜಾರು ಕೊಲೆ ಪ್ರಕರಣದ ಆರೋಪಿಯನ್ನು ಕೊಲೆ ನಡೆದ ಸ್ಥಳಕ್ಕೆ ಕರೆ ತರಲಾಗಿದ್ದು ಈ ವೇಳೆ ಆಕ್ರೋಶಗೊಂಡ ಜನ ಆತನನ್ನು ತಮಗೆ ಒಪ್ಪಿಸಿ ನಾವೇ ಈ ಹಂತಕನಿಗೆ ಶಿಕ್ಷೆ ಕೊಡುತ್ತೇವೆ ಎಂದು ಪೊಲೀಸ್‌ ವಾಹನದ ಮೇಲೆ ದಾಳಿ ನಡೆಸಿದ್ದು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ತಾಯಿ, ಮೂವರು ಮಕ್ಕಳ ಹತ್ಯೆ ಆರೋಪಿಗೆ 14 ದಿನ ನ್ಯಾಯಾಂಗ ಬಂಧನವಾಗಿದೆ. ಆದರೆ ಪೊಲೀಸರ ತನಿಖೆ ವೇಳೆ ಕಾರಣ ಬಯಲಾಗಿದೆ. ಲವ್ ಮಾಡಿಲ್ಲ ಎಂದು ಕೊಲೆ […]

ಶಬರಿಮಲೆ ಮಕರವಿಳಕ್ಕು ಯಾತ್ರೆ ಪ್ರಾರಂಭ: ದೇಗುಲ ಯಾತ್ರೆ ಕೈಗೊಂಡ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ತಿರುವನಂತಪುರ: ಮಂಡಳ-ಮಕರವಿಳಕ್ಕು ಯಾತ್ರೆ ಪ್ರಾರಂಭವಾದ ಹಿನ್ನೆಲೆಯಲ್ಲಿ ದಕ್ಷಿಣ ಭಾರತ ಅತ್ಯಂತ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆ ಆಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆರೆಯಲಾಗಿದೆ. ಇನ್ನು ಎರಡು ತಿಂಗಳ ಕಾಲ ಶಬರಿಮಲೆ ದೇವರ ದರ್ಶನಕ್ಕೆ ಅವಕಾಶ ಸಿಗಲಿದೆ. ಏತನ್ಮಧ್ಯೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. 2024ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ದೇವರಲ್ಲಿ ಬೇಡಿಕೊಂಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.