ರಾಜ್ಯದಲ್ಲಿ ನಂದಿನಿ ಹಾಲಿನ ದರ ಲೀಟರ್‌ಗೆ 2 ರೂ. ಹೆಚ್ಚಳ: ನಾಳೆಯಿಂದಲೇ ಪರಿಷ್ಕೃತ ದರ ಜಾರಿ.

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆಯಾಗಿದ್ದು, ಪ್ರತಿ ಲೀಟರ್‌ಗೆ 2 ರುಪಾಯಿ ಏರಿಕೆ ಮಾಡಲಾಗಿದ್ದು, ನಾಳೆಯಿಂದ ಒಂದು ಲೀಟರ್‌ ಹಾಲಿನ ದರ 44 ರೂ. ಆಗುತ್ತಿದೆ. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ನಂದಿನಿ ಹಾಲಿನ ದರ ಹೆಚ್ಚಿಸಿದೆ ಎಂದು ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ಲೀಟರ್‌ ಹಾಲಿಗೆ 2 ರೂ.ಏರಿಕೆ ಮಾಡಲಾಗಿದೆ. ಹಾಗೂ ಅರ್ಧ ಲೀಟರ್‌ ಹಾಲಿನ ದರ 22 ರೂ. ನಿಂದ 24 ರೂ.ಗೆ ಹೆಚ್ಚಿಸಲಾಗಿದೆ. […]

Modi 3.0: ಕೇಂದ್ರ ಸಚಿವರಾಗಿ ಕರ್ನಾಟಕದ ನಾಲ್ವರು ಸದಸ್ಯರು ಪ್ರಮಾಣವಚನ ಸ್ವೀಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಂಪುಟದ ಸಚಿವರಾಗಿ ಕರ್ನಾಟಕದ ನಾಲ್ವರು ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು. ಕೇಂದ್ರ ಸಚಿವರಾಗಿ ಹೆಚ್‌ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೊದಲಿಗೆ ದೇವರ ಹೆಸರಲ್ಲಿ ಹೆಚ್‌ಡಿಕೆ ಕೇಂದ್ರ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಪ್ರಹ್ಲಾದ್ ಜೋಶಿ ಹಾಗೂ ಶೋಭಾ ಕರಂದ್ಲಾಜೆ ಅವರು ಎರಡನೇ ಬಾರಿಗೆ ಮೋದಿ ಸಂಪುಟ ಸಚಿವರಾಗಿದ್ದಾರೆ. ಜೊತೆಗೆ ವಿ ಸೋಮಣ್ಣ ಅವರು ಕೂಡ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು.

ಗುಜರಾತ್: ರಾಜ್‌ಕೋಟ್‌’ನ ಗೇಮಿಂಗ್ ಝೋನ್‌ನಲ್ಲಿ ಅಗ್ನಿ ಅವಘಡ, 24 ಮಂದಿ ಸಾವು.

ಗುಜರಾತ್: ಗುಜರಾತ್‌ನ ರಾಜ್‌ಕೋಟ್‌ನಲ್ಲಿರುವ ಗೇಮಿಂಗ್ ಝೋನ್‌ನಲ್ಲಿ ಶನಿವಾರ ಸಂಜೆ ಭಾರಿ ಬೆಂಕಿ ಕಾಣಿಸಿಕೊಂಡು ಕನಿಷ್ಠ ಇಪ್ಪತ್ತನಾಲ್ಕು ಜನರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕದವರನ್ನು ರವಾನಿಸಲಾಗಿದೆ. ಯುವರಾಜ್ ಸಿಂಗ್ ಸೋಲಂಕಿ ಒಡೆತನದ ಟಿಆರ್‌ಪಿ ಗೇಮಿಂಗ್ ಝೋನ್‌ಗೆ ಅಧಿಕಾರಿಗಳಿಂದ ಅಗತ್ಯ ಅಗ್ನಿ ಸುರಕ್ಷತಾ ಕ್ಲಿಯರೆನ್ಸ್ ಇಲ್ಲದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆಯ ನಂತರ ಟಿಆರ್‌ಪಿ ಆಟದ ವಲಯದ ಮಾಲೀಕರು ಮತ್ತು ವ್ಯವಸ್ಥಾಪಕರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ರಾಜ್‌ಕೋಟ್ ನಗರ ಪೊಲೀಸ್ ಕಮಿಷನರ್ ಭಾರ್ಗವ ತಿಳಿಸಿದ್ದಾರೆ.

ಹತ್ತನೇ ತರಗತಿ ಫಲಿತಾಂಶ: 94% ಉತ್ತೀರ್ಣತೆಯೊಂದಿಗೆ ಉಡುಪಿ ಪ್ರಥಮ, 92.12% ನೊಂದಿಗೆ ದ.ಕ ದ್ವಿತೀಯ; ಬಾಗಲಕೋಟೆಯ ಅಂಕಿತಾ ಬಸಪ್ಪ ರಾಜ್ಯಕ್ಕೆ ಟಾಪರ್

ಬೆಂಗಳೂರು: ಬಾಗಲಕೋಟೆಯ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ಅಂಕಿತಾ ಬಸಪ್ಪ 625ಕ್ಕೆ 625 ಅಂಕ ಪಡೆದು ಪ್ರಥಮ ಸ್ಥಾನ ಪಡೆದು ಕರ್ನಾಟಕ ಎಸ್‌ಎಸ್‌ಎಲ್‌ಸಿ (SSLC Results) ಟಾಪರ್‌ ಆಗಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದಿರುವ ಅಂಕಿತಾ ಬಸಪ್ಪ ಐಎಎಸ್‌ ಅಧಿಕಾರಿಯಾಗುವ ಹಂಬಲ ಹೊಂದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಚಿನ್ಮಯ್ ಜಿ.ಕೆ. 10ನೇ ತರಗತಿ ಪರೀಕ್ಷೆಯಲ್ಲಿ 624 ಅಂಕಗಳನ್ನು ಪಡೆದು ಟಾಪರ್‌ಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾನೆ. ಈ […]

ಎಪಿಎಲ್‌ ಕಾರ್ಡ್‌ ವಿತರಣೆಗೆ ಚಾಲನೆ ನೀಡಲು ಆಹಾರ ಇಲಾಖೆ ನಿರ್ಧಾರ: ಜೂನ್ ನಿಂದ ಅರ್ಜಿ ಸಲ್ಲಿಕೆಗೆ ಅವಕಾಶ?

ಬೆಂಗಳೂರು: ಕಳೆದ ಒಂದೂವರೆ ವರ್ಷದಿಂದ ಸ್ಥಗಿತವಾಗಿದ್ದ ಎಪಿಎಲ್‌ ಕಾರ್ಡ್‌ ವಿತರಣೆಗೆ ಮರುಚಾಲನೆ ನೀಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ. ಜೂನ್‌ ತಿಂಗಳಲ್ಲಿ ಹೊಸ ಕಾರ್ಡ್‌ಗಳಿಗೆ ಅರ್ಜಿ ಆಹ್ವಾನಿಸಲು ಇಲಾಖೆ ತೀರ್ಮಾನಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಹೊಸ ಕಾರ್ಡ್‌ಗಾಗಿ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಅರ್ಜಿ ಸಲ್ಲಿಕೆಯ ವೆಬ್‌ ಪೋರ್ಟಲ್‌ ಅನ್ನು ಸುಮಾರು ಒಂದೂವರೆ ವರ್ಷದಿಂದಲೂ ಸ್ಥಗಿತಗೊಳಿಸಲಾಗಿತ್ತು. ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಜೂನ್‌ ಮೊದಲ ವಾರದಲ್ಲಿ ವೆಬ್‌ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅನುವು ಮಾಡಿಕೊಡಲಾಗುವುದು […]