ವಿಶಾಖಪಟ್ಟಣಂ ಮೀನುಗಾರಿಕಾ ಬಂದರಿನಲ್ಲಿ ಅಗ್ನಿ ದುರಂತ: 35 ಮೀನುಗಾರಿಕಾ ದೋಣಿಗಳು ಸುಟ್ಟು ಕರಕಲು

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂ ಮೀನುಗಾರಿಕಾ ಬಂದರಿನಲ್ಲಿ ಭಾನುವಾರ ರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡು ಸುಮಾರು 35 ಮೀನುಗಾರಿಕಾ ದೋಣಿಗಳು ಸುಟ್ಟು ಕರಕಲಾಗಿವೆ. ಉಪ ಪೊಲೀಸ್ ಆಯುಕ್ತ ಆನಂದ್ ರೆಡ್ಡಿ ಮಾತನಾಡಿ, ಬೆಂಕಿಯು ಮೊದಲು ಒಂದು ದೋಣಿಯಲ್ಲಿ ಕಾಣಿಸಿಕೊಂಡಿತು ಮತ್ತು ನಂತರ ಮಧ್ಯರಾತ್ರಿ ಸುಮಾರಿಗೆ 35 ಫೈಬರ್-ಯಾಂತ್ರೀಕೃತ ದೋಣಿಗಳಿಗೆ ವ್ಯಾಪಿಸಿತು ಎಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ದಳದವರು ತಕ್ಷಣ ಕಾರ್ಯಪ್ರವೃತ್ತರಾದರು. ಬೆಂಕಿಯನ್ನು ಹತೋಟಿಗೆ ತರಲಾಯಿತು. […]
ರಾಜ್ಯದಲ್ಲೇ ಪ್ರಥಮ ಗ್ರಾಮೀಣ ಭಾಗದ ಸರ್ಕಾರಿ ಶಾಲೆ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ನೀಡಲು ಡಿಜಿಟಲ್ ಬಸ್

ಮಂಗಳೂರು: ಮಂಗಳೂರಿನ ಎಂ ಫ್ರೆಂಡ್ಸ್ ಎಂಬುದು ವಾಟ್ಸಪ್ ಗ್ರೂಪ್ ಮೂಲಕ 2013 ರಲ್ಲಿ ಆರಂಭವಾದ ಸಂಘಟನೆ. ಈ ಸಂಘಟನೆ ಆರೋಗ್ಯ ಕ್ಷೇತ್ರದಲ್ಲಿ ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಸೇವೆ ನೀಡುತ್ತಿದೆ. ಇದೀಗ ಎಂ. ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ) ಆಗಿರುವ ಈ ಸಂಸ್ಥೆ ತನ್ನ ದಶಮಾನೋತ್ಸವದ ಸ್ಮರಣಾರ್ಥ ಗ್ರಾಮೀಣ ಪ್ರದೇಶದ ಮಕ್ಕಳಿಗಾಗಿ ನೂತನ ತಂತ್ರಜ್ಞಾನದ ಡಿಜಿಟಲ್ ಬಸ್ ಲೋಕಾರ್ಪಣೆಗೊಳಿಸಿದೆ.ಗ್ರಾಮೀಣ ಭಾಗದ ಸರ್ಕಾರಿ ಶಾಲಾ ಮಕ್ಕಳು ಕಂಪ್ಯೂಟರ್ ಶಿಕ್ಷಣದಿಂದ ವಂಚಿತರಾಗಬಾರದೆನ್ನುವ ದೃಷ್ಟಿಯಿಂದ ಮಂಗಳೂರಿನ ಎಂ ಫ್ರೆಂಡ್ಸ್ ಸಂಸ್ಥೆ ಹೊಸ […]
ಮಕ್ಕಳ ಪೌಷ್ಟಿಕ ಆಹಾರ ಸರಬರಾಜಿನಲ್ಲಿ ಅಕ್ರಮ ಆರೋಪ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಕ್ಕಳ ಪೌಷ್ಟಿಕ ಆಹಾರ ಸರಬರಾಜಿನಲ್ಲಿ 600 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಭ್ರಷ್ಟಾಚಾರದ ನಡೆದಿದೆ ಎಂದು ಆರೋಪಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಇತರರ ವಿರುದ್ಧ ಲೋಕಾಯುಕ್ತ ಸಂಸ್ಥೆಯಲ್ಲಿ ದೂರು ದಾಖಲಾಗಿದೆ. ವಕೀಲ ನಟರಾಜ್ ಶರ್ಮಾ ಎಂಬುವವರು ದೂರು ನೀಡಿದ್ದು, ಅನರ್ಹ ಸಹಕಾರ ಸಂಘಗಳಿಗೆ ಮಕ್ಕಳ ಪೌಷ್ಟಿಕ ಆಹಾರವನ್ನು ಸರಬರಾಜಿಗೆ ಗುತ್ತಿಗೆ ನೀಡಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ. ಶಿವಮೊಗ್ಗದ […]
ಲೋಕಾಯುಕ್ತಕ್ಕೆ ದೂರು : ಆಹಾರ ಸರಬರಾಜಿನಲ್ಲಿ ಗೋಲ್‌ಮಾಲ್ ಆರೋಪ

ಬೆಂಗಳೂರು : ಇಲಾಖೆಯಲ್ಲಿ ಜವಾಬ್ದಾರಿ ಹೊತ್ತ ಮೂವರ ವಿರುದ್ಧ ದೂರು ನೀಡಲಾಗಿದೆ. ಇಲಾಖೆಯು ಅಂಗನವಾಡಿಯಲ್ಲಿ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಪೌಷ್ಠಿಕ ಆಹಾರ ಸರಬರಾಜು ಮಾಡಲು ನೀಡಿರುವ ಟೆಂಡರ್ ವಿಚಾರದಲ್ಲಿ ಗೋಲ್‌ಮಾಲ್ ನಡೆದಿದೆ ಎಂದು ಆರೋಪಿಸಿದ್ದಾರೆ.ಮಕ್ಕಳು ಹಾಗೂ ಗರ್ಭಿಣಿಯರಿಗೆ ಪೌಷ್ಠಿಕ ಆಹಾರ ಸರಬರಾಜು ಮಾಡಲು ಅನರ್ಹ ಸಂಸ್ಥೆಗಳಿಗೆ ನೀಡಿದ ಗುತ್ತಿಗೆಯಲ್ಲಿ ಸುಮಾರು 600 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ವಕೀಲ ಎಸ್ ನಟರಾಜ ಶರ್ಮಾ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಮಕ್ಕಳು ಹಾಗೂ ಗರ್ಭಿಣಿಯರಿಗೆ ನೀಡುವ […]
ಪ್ರತಿಪಕ್ಷ ನಾಯಕನ ಪಟ್ಟಕ್ಕೆ ಮಾಜಿ ಡಿಸಿಎಂ ಆರ್ ಅಶೋಕ್

ಬೆಂಗಳೂರು: “ಇದೊಂದು ಅವಿರೋಧ ಆಯ್ಕೆಯಾಗಿತ್ತು. ಅಶೋಕ್ ಒಬ್ಬ ಹಿರಿಯ ನಾಯಕ. ನಾನು ಅವರನ್ನು ಅಭಿನಂದಿಸುತ್ತೇನೆ. ಪ್ರತಿಪಕ್ಷ ನಾಯಕನಾಗಿ ಆರ್ ಅಶೋಕ್ ಅವರ ಹೆಸರನ್ನು ಬಿಜೆಪಿ ನಾಯಕರು ಘೋಷಣೆ ಮಾಡಿದ್ದಾರೆ.ಅಶೋಕ್ ಆಯ್ಕೆಯಿಂದ ನನಗೂ ಬಹಳ ಖುಷಿಯಾಗಿದೆ” ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ಗೆ ಪ್ರತಿಪಕ್ಷ ನಾಯಕನ ಸ್ಥಾನ ಒಲಿದಿದೆ. ಹೈಕಮಾಂಡ್ ಕಳುಹಿಸಿದ್ದ ವೀಕ್ಷಕರ ಸಮ್ಮುಖದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರತಿಪಕ್ಷ ನಾಯಕನಾಗಿ ಅಶೋಕ್ ಅವರನ್ನು ಘೋಷಣೆ ಮಾಡಲಾಗಿದೆ.ಧನ್ಯವಾದ ತಿಳಿಸಿದ […]