ಮದುವೆ ಆಗುವುದಕ್ಕೆ ನಿರಾಕರಿಸಿದ್ದಕ್ಕೆ ಕೊಲೆ

ಉಡುಪಿ: ಉಡುಪಿಯ ನೇಜಾರು ಕೊಲೆ ಪ್ರಕರಣದ ಆರೋಪಿಯನ್ನು ಕೊಲೆ ನಡೆದ ಸ್ಥಳಕ್ಕೆ ಕರೆ ತರಲಾಗಿದ್ದು ಈ ವೇಳೆ ಆಕ್ರೋಶಗೊಂಡ ಜನ ಆತನನ್ನು ತಮಗೆ ಒಪ್ಪಿಸಿ ನಾವೇ ಈ ಹಂತಕನಿಗೆ ಶಿಕ್ಷೆ ಕೊಡುತ್ತೇವೆ ಎಂದು ಪೊಲೀಸ್‌ ವಾಹನದ ಮೇಲೆ ದಾಳಿ ನಡೆಸಿದ್ದು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ತಾಯಿ, ಮೂವರು ಮಕ್ಕಳ ಹತ್ಯೆ ಆರೋಪಿಗೆ 14 ದಿನ ನ್ಯಾಯಾಂಗ ಬಂಧನವಾಗಿದೆ. ಆದರೆ ಪೊಲೀಸರ ತನಿಖೆ ವೇಳೆ ಕಾರಣ ಬಯಲಾಗಿದೆ. ಲವ್ ಮಾಡಿಲ್ಲ ಎಂದು ಕೊಲೆ […]

ಶಬರಿಮಲೆ ಮಕರವಿಳಕ್ಕು ಯಾತ್ರೆ ಪ್ರಾರಂಭ: ದೇಗುಲ ಯಾತ್ರೆ ಕೈಗೊಂಡ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ತಿರುವನಂತಪುರ: ಮಂಡಳ-ಮಕರವಿಳಕ್ಕು ಯಾತ್ರೆ ಪ್ರಾರಂಭವಾದ ಹಿನ್ನೆಲೆಯಲ್ಲಿ ದಕ್ಷಿಣ ಭಾರತ ಅತ್ಯಂತ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆ ಆಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆರೆಯಲಾಗಿದೆ. ಇನ್ನು ಎರಡು ತಿಂಗಳ ಕಾಲ ಶಬರಿಮಲೆ ದೇವರ ದರ್ಶನಕ್ಕೆ ಅವಕಾಶ ಸಿಗಲಿದೆ. ಏತನ್ಮಧ್ಯೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. 2024ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ದೇವರಲ್ಲಿ ಬೇಡಿಕೊಂಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಮುರುಘಾ ಶ್ರೀ ಬಿಡುಗಡೆ: ಇಂದು ಚಿತ್ರದುರ್ಗ ಜೈಲಿನಿಂದ ಬಿಡುಗಡೆ

ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರು ಇಂದು ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ.ಮುರುಘಾ ಶ್ರೀ ವಿರುದ್ಧದ ಎರಡು ಪೋಕ್ಸೋ ಪ್ರಕರಣಗಳ ಪೈಕಿ ಒಂದರಲ್ಲಿ ಈಗಾಗಲೇ ಜಾಮೀನು ದೊರೆತಿದೆ. ಚಿತ್ರದುರ್ಗ ಜೈಲಿನಿಂದ ಶ್ರೀಗಳು ನಿನ್ನೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಚಿತ್ರದುರ್ಗದ ಕೋರ್ಟ್​ಗೆ ಹಾಜರಾಗಿದ್ದರು. ಬುಧವಾರ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್​ ನ್ಯಾಯಾಲಯ ಹೈಕೋರ್ಟ್​ ವಿಧಿಸಿದ್ದ ಷರತ್ತುಗಳನ್ನು ಹಾಗೂ ದಾಖಲೆಗಳನ್ನು ಪರಿಶೀಲಿಸಿದ ನಂತರ ಜಿಲ್ಲಾ ಕಾರಾಗೃಹದ ಅಧಿಕಾರಿಗಳಿಗೆ ಶ್ರೀಗಳನ್ನು […]

ತಮಿಳುನಾಡಿನ ವಿದ್ಯಾರ್ಥಿಯಿಂದ ಕಡಿಮೆ ಬಜೆಟ್​ನಲ್ಲಿ ವಾಯುಮಾಲಿನ್ಯ ಅಳೆಯುವ ಸಾಧನ ತಯಾರು

ಜಯಪ್ರಕಾಶ್ ತಮ್ಮ ಜಾಣ್ಮೆಯಿಂದ ಭೂಮಿಯ ಮೇಲ್ಮೈಯಿಂದ 10 ರಿಂದ 20 ಕಿಲೋಮೀಟರ್ ಒಳಗೆ ಟ್ರೋಪೋಸ್ಪಿಯರ್​ನಲ್ಲಿ ವಾಯುಮಾಲಿನ್ಯದ ಮಟ್ಟವನ್ನು ಪತ್ತೆಹಚ್ಚಬಹುದಾದ ಸಣ್ಣ ಉಪಗ್ರಹ ಅಭಿವೃದ್ಧಿಪಡಿಸಿದ್ದಾನೆ. ಕೋಟಿ ವೆಚ್ಚದ ಸಾಂಪ್ರದಾಯಿಕ ಉಪಗ್ರಹಗಳಿಗಿಂತ ಭಿನ್ನವಾಗಿ ಇದು ಕೇವಲ ಒಂದು ಸಾವಿರ ರೂಪಾಯಿಗಳ ಅಲ್ಪ ಬಜೆಟ್​ನಲ್ಲಿ ಉಪಗ್ರಹದ ಕಾರ್ಯಗಳನ್ನು ಮಾಡುತ್ತದೆ. ಚಹಾ ಮಾರುವವನ ಪುತ್ರ 16 ವರ್ಷದ ಜಯಪ್ರಕಾಶ್ ಎಂಬಾತ ಕಡಿಮೆ ಬಜೆಟ್ ಉಪಗ್ರಹವನ್ನು ಬಳಸಿಕೊಂಡು ವಾಯುಮಾಲಿನ್ಯ ಮಟ್ಟವನ್ನು ಮೇಲ್ವಿಚಾರಣೆ ಮಾಡಲು ಆಧುನಿಕ ಸಾಧನ ತಯಾರಿಸಿದ್ದಾರೆ. ವಿಜ್ಞಾನ ಶಿಕ್ಷಕ ರಾಮಚಂದ್ರನ್ ಮತ್ತು ಪರಣಿ […]

ಸಚಿವ ಮಧು ಬಂಗಾರಪ್ಪ : ರಾಜ್ಯದಲ್ಲಿ 3 ಸಾವಿರ ಪಬ್ಲಿಕ್ ಶಾಲೆ ಆರಂಭಿಸಲು ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಸುಮಾರು 3ಸಾವಿರ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ವಿಕಾಸಸೌಧದಲ್ಲಿ ಇಂದು ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, 2024-25ರ ವೇಳೆಗೆ ಮಕ್ಕಳ ಸಂಖ್ಯೆ ಹೆಚ್ಚಾಗಬೇಕು. ಹಾಗಾಗಿ, ಗ್ರಾಮಾಂತರ ಭಾಗದಲ್ಲಿ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಮೂರು ವರ್ಷದಲ್ಲಿ ಕಾರ್ಯ ಪೂರ್ಣಗೊಳ್ಳಲಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು […]