ರಾಜ್ಯ ಬಿಜೆಪಿ ನೊಗ ಹೊತ್ತ ವಿಜಯೇಂದ್ರ : ಯುವ ನಾಯಕನಿಗೆ ಹಿರಿಯರ ಬೆಂಬಲ

ಬೆಂಗಳೂರು: ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಕ್ಷೇತ್ರದ ಶಾಸಕ ಹಾಗು ರಾಜ್ಯ ಬಿಜೆಪಿಯ ಹಿರಿಯ ನಾಯಕ ಬಿ.ಎಸ್‌.ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಇಂದು ಅಧಿಕಾರ ಸ್ವೀಕರಿಸಿದರು. ಈ ಮೂಲಕ ರಾಜ್ಯ ಬಿಜೆಪಿಗೆ ಯುವ ನೇತಾರನ ಸಾರಥ್ಯ ಸಿಕ್ಕಿದೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. ರಾಜ್ಯಾಧ್ಯಕ್ಷರ ಕಚೇರಿಯಲ್ಲಿ ಹಿರಿಯರ ಆಶೀರ್ವಾದ ಪಡೆದು, ನಳೀನ್​ ಕುಮಾರ್​ ಕಟೀಲ್ ಅವರಿಂದ ವಿಜಯೇಂದ್ರ ಅಧಿಕಾರ ಸ್ವೀಕರಿಸಿದರು.ನಿಕಟಪೂರ್ವ ಅಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಅವರಿಂದ ಅಧಿಕಾರ ಸ್ವೀಕರಿಸಿ […]

ಐಶ್ವರ್ಯಾ ರೈ, ಅನುಷ್ಕಾ ಶೆಟ್ಟಿ ಭಾಗಿ : ಬೆಂಗಳೂರು ಕಂಬಳಕ್ಕೆ ದಿನಗಣನೆ

ಬೆಂಗಳೂರು: ಕಂಬಳ ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದೆ. ಕರಾವಳಿಯ ವಿವಿಧ ಭಾಷೆ – ಜಾತಿಗಳ 50ಕ್ಕೂ ಅಧಿಕ ಸಂಘಟನೆಗಳು ತಯಾರಿ ನಡೆಸುತ್ತಿವೆ. ಬೆಂಗಳೂರು ಕಂಬಳ ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ನಡೆಯಲಿದೆ. ‘ಬೆಂಗಳೂರು ಕಂಬಳ ನಮ್ಮ ಕಂಬಳ’ ಎಂಬ ಥೀಮ್ ಸಾಂಗ್ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ. ಈ ಥೀಮ್ ಸಾಂಗ್​​​ಗೆ ವಿ.ಮನೋಹರ್ ಸಾಹಿತ್ಯ, ಗುರುಕಿರಣ್ ಸಂಗೀತ ಸಂಯೋಜನೆ, ಮಣಿಕಾಂತ್ ಕದ್ರಿ ಪ್ರೋಗ್ರಾಮಿಂಗ್‌ನಲ್ಲಿ ಮೂಡಿ […]

6 ಕೋಟಿಗೂ ಅಧಿಕ ಆದಾಯ ಸಂಗ್ರಹ : ಶಕ್ತಿದೇವತೆ ಹಾಸನಾಂಬೆಯ ದರ್ಶನ ಸಂಪನ್ನ

ಹಾಸನ: ಶಕ್ತಿದೇವತೆಹಾಸನಾಂಬೆಯ ಪ್ರಸಕ್ತ ಸಾಲಿನ ದರ್ಶನಕ್ಕೆ ಇಂದು ಕೊನೆಯ ದಿನವಾಗಿದ್ದು, ಮಧ್ಯಾಹ್ನ 12.23ಕ್ಕೆ ಜಿಲ್ಲಾಡಳಿತದ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ಬಾಗಿಲು ಮುಚ್ಚುವ ಮೂಲಕ ಈ ಬಾರಿಯ ದರ್ಶನಕ್ಕೆ ತೆರೆ ಎಳೆಯಲಾಗಿದೆ.ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ ಎನ್ ರಾಜಣ್ಣ, ಶಾಸಕ ಹೆಚ್ ​ಪಿ ಸ್ವರೂಪ್‌ ಪ್ರಕಾಶ್, ಜಿಲ್ಲಾಧಿಕಾರಿ ಸತ್ಯಭಾಮ, ಎಸ್ಪಿ ಮಹಮದ್ ಸುಜೀತಾ ಉಪಸ್ಥಿತರಿದ್ದರು.ಹಾಸನದ ಹಾಸನಾಂಬೆ ಜಾತ್ರಾ ಮಹೋತ್ಸವವು ಸಂಪನ್ನಗೊಂಡಿದ್ದು ಉತ್ಸವಕ್ಕೆ ಬುಧವಾರ ವಿದ್ಯುಕ್ತವಾಗಿ ತೆರೆ ಕಂಡಿತು. 1 ಸಾವಿರ ಟಿಕೆಟ್ ಮಾರಾಟದಿಂದ 3,09,89,000 ರೂಪಾಯಿ ಆದಾಯ […]

ಮಡಿಕೇರಿಯ ಕಾಫಿತೋಟದಲ್ಲಿ ಪುರಾತನ ಕಾಲದ ಚಿನ್ನಾಭರಣ ಪತ್ತೆ, ವಶಕ್ಕೆ ಪಡೆದ ಸರ್ಕಾರ

ಮಡಿಕೇರಿ (ಕೊಡಗು) : ಕಾಫಿ ತೋಟದ ನಡುವೆ ಇರುವ ದೇವಾಲಯದ ಆವರಣದಲ್ಲಿ ಕಾರ್ಮಿಕರು ಕೆಲಸ ಮಾಡುವ ವೇಳೆ ಪುರಾತನ ಚಿನ್ನಾಭರಣ ಮತ್ತು ನಿಧಿ ದೊರೆತಿದ್ದು, ನಿಯಮಾನುಸಾರ ಸರ್ಕಾರಕ್ಕೆ ಒಪ್ಪಿಸಲಾಗಿದೆ.ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಪುರಾತನ ಚಿನ್ನಾಭರಣ ಮತ್ತು ನಿಧಿ ಸಿಕ್ಕಿರುವ ಘಟನೆ ಕೊಡಗು ಜಿಲ್ಲೆ ಸಿದ್ದಾಪುರದ ಅಮ್ಮತಿ ಸಮೀಪದ ಮುಖ್ಯ ರಸ್ತೆಯಲ್ಲಿರುವ ಆನಂದಪುರ ಗ್ರಾಮದ ಟಾಟಾ ಕಾಫಿ ಸಂಸ್ಥೆಗೆ ಸೇರಿದ ತೋಟದಲ್ಲಿ ನಡೆದಿದೆ.ಟಾಟಾ ಕಾಫಿ ಸಂಸ್ಥೆಗೆ ಸೇರಿದ ತೋಟದಲ್ಲಿ ಪುರಾತನ ಕಾಲದ ಚಿನ್ನಭರಣ ಮತ್ತು ನಿಧಿ ಪತ್ತೆಯಾಗಿದೆ. […]

ಕರ್ನಾಟಕ ಹೈಕೋರ್ಟ್‌ಗೆ ತೆಲಂಗಾಣ ನ್ಯಾಯಮೂರ್ತಿ ಸುಮಲತಾ ವರ್ಗಾವಣೆ

ಬೆಂಗಳೂರು : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ವರ್ಗಾವಣೆ ಮಾಡಿರುವುದಾಗಿ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ವಿಶೇಷ ಕಾರ್ಯದರ್ಶಿ ರಾಜೇಂದ್ರ ಕಶ್ಯಪ್ ಅವರು ತಿಳಿಸಿದ್ದಾರೆ. ತೆಲಂಗಾಣ ಹೈಕೋರ್ಟ್ ನ್ಯಾಯಮೂರ್ತಿ ಸಿ ಸುಮಲತಾ ಅವರನ್ನು ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ ಮಾಡಿ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಆದೇಶಿಸಿದೆ.ತೆಲಂಗಾಣ ಹೈಕೋರ್ಟ್​ ನ್ಯಾಯಮೂರ್ತಿ ಸಿ. ಸುಮಲತಾ ಅವರನ್ನು ಕರ್ನಾಟಕ ಹೈಕೋರ್ಟ್​ಗೆ ವರ್ಗಾವಣೆ ಮಾಡಲಾಗಿದೆ. ಸುಮಲತಾ ಅವರು ಸ್ನಾತಕೋತ್ತರ ಪದವಿಯಲ್ಲಿ ಸಂವಿಧಾನಾತ್ಮಕ ಕಾನೂನು ವಿಚಾರದಲ್ಲಿ ಚಿನ್ನದ […]