2.90 ಲಕ್ಷ ಕುಟುಂಬಗಳಿಗೆ ಶೀಘ್ರವೇ ಪಡಿತರ ಚೀಟಿ’ ವಿತರಣೆ : ಹೊಸರೇಷನ್ ಕಾರ್ಡ್’ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್

ಬೆಂಗಳೂರು :ಪಡಿತರ ಚೀಟಗೆ ಈಗಾಗಲೇ ಅರ್ಜಿ ಸಲ್ಲಿಸಿದವರ ಅರ್ಜಿಗಳ ಪರಿಶೀಲನಾ ಕಾರ್ಯ ಶೇ.75ರಷ್ಟು ಪರಿಶೀಲನಾ ಕಾರ್ಯ ಪೂರ್ಣಗೊಂಡಿದೆ. ಪರಿಶೀಲನಾ ಕಾರ್ಯ ಸಂಪೂರ್ಣವಾಗಿ ಮುಗಿದ ನಂತರದಲ್ಲಿ ಅರ್ಜಿ ಸಲ್ಲಿಸಿದವರ ಪೈಕಿ ಅರ್ಹರಿಗೆ ಮಾತ್ರವೇ ಪಡಿತರ ಚೀಟಿ ಕೈ ಸೇರಲಿದೆ.ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ 2.90 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಆದಷ್ಟು ಶೀಘ್ರ ಈ ಎಲ್ಲಾ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹ ಕುಟುಂಬಗಳಿಗೆ ಹೊಸ ಪಡಿತರ ಚೀಟಿಗಳನ್ನು ವಿತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ. […]
16 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ

ಬೆಂಗಳೂರು : ಕರಾವಳಿಯ ಎಲ್ಲಾ ಜಿಲ್ಲೆಗಳು ಹಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ನವೆಂಬರ್ 5 ರಿಂದ 7 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ನವೆಂಬರ್ 7 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು,ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ […]

ಪ್ರಯಾಣಿಕರಿಗೆ ಶೇ.10ರಷ್ಟು ರಿಯಾಯಿತಿ : ದೀಪಾವಳಿಗೆ ಕೆಎಸ್ಆರ್ಟಿಸಿಯಿಂದ 2,000 ವಿಶೇಷ ಬಸ್

ಬೆಂಗಳೂರು: ನವೆಂಬರ್ 12ರಂದು ನರಕ ಚತುರ್ದಶಿ, ನವೆಂಬರ್ 14ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ನ.10 ರಿಂದ 12 ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ 2,000 ಹೆಚ್ಚುವರಿ ವಿಶೇಷ ಬಸ್ ಸಂಚಾರದ ವ್ಯವಸ್ಥೆಯಾಗಿದೆ. ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಪ್ರಯಾಣಿಕರು ವಾಪಸ್ ಬರಲು ಅನುಕೂಲವಾಗುವಂತೆ ನವೆಂಬರ್ 14 ಹಾಗೂ 15 ರಂದು ವಿಶೇಷ ಬಸ್‌ಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್ಆರ್ಟಿಸಿ ಮಾಹಿತಿ ನೀಡಿದೆ.ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಬೆಂಗಳೂರಿನಿಂದ ರಾಜ್ಯದ ವಿವಿಧ […]
ಗರ್ಭಿಣಿಯರ ಆರೋಗ್ಯದ ಮೇಲೆ ಹೆಚ್ಚು ನಿಗಾ : ಚಿಕ್ಕಬಳ್ಳಾಪುರದಲ್ಲಿ ಝಿಕಾ ವೈರಸ್ ಪತ್ತೆ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಝಿಕಾ ವೈರಸ್ ಪತ್ತೆಯಾಗಿದೆ. ಆರೋಗ್ಯ ಇಲಾಖೆ ಈ ಕುರಿತು ಕಟ್ಟೆಚ್ಚರ ವಹಿಸುತ್ತಿದೆ.ಇತ್ತೀಚೆಗೆ ಕೇರಳದಲ್ಲಿ ಪತ್ತೆಯಾಗಿರುವ ಝಿಕಾ ವೈರಸ್ ಇದೀಗ ಚಿಕ್ಕಬಳ್ಳಾಪುರದಲ್ಲಿ ಕಂಡುಬಂದಿದೆ. ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಇಲಾಖೆ ಸಿದ್ಧಪಡಿಸುತ್ತಿದೆ. ಈ ಗ್ರಾಮದ ವ್ಯಾಪ್ತಿಯಲ್ಲಿ ಸುಮಾರು 5,000ಕ್ಕೂ ಹೆಚ್ಚು ಜನ ವಾಸಿಸುತ್ತಿದ್ದು, ಆರೋಗ್ಯ ಇಲಾಖೆ ತಪಾಸಣೆಗೆ ಒಳಪಡಿಸಲಿದೆ. ಅದರಲ್ಲೂ ಮುಖ್ಯವಾಗಿ, ಗರ್ಭಿಣಿಯರು ಸೇರಿದಂತೆ ಇತರರ ಮೇಲೆ ಹೆಚ್ಚು ನಿಗಾ ವಹಿಸುತ್ತಿದೆ. ಜಿಲ್ಲೆಯ ನಾಗರಿಕರಲ್ಲಿ ಝಿಕಾ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಮಹೇಶ್ ಸ್ಪಷ್ಟಪಡಿಸಿದ್ದಾರೆ.ಆರೋಗ್ಯ […]