ಬಂಡೀಪುರ ಕಾಡಲ್ಲಿ ಗುಂಡಿನ ಚಕಮಕಿ: ಓರ್ವ ಬೇಟೆಗಾರ ಸಾವು

ಚಾಮರಾಜನಗರ: ಮೃತರನ್ನು ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದ ಯುವಕ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.ಬೇಟೆಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದು, ಓರ್ವ ಬೇಟೆಗಾರ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ಚೆಕ್ ಪೋಸ್ಟ್ ಸಮೀಪ ನಡೆದಿದೆ.ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಬೇಟೆಗಾರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಬೇಟೆಗಾರ ಮೃತಪಟ್ಟಿದ್ದಾನೆ. ಈ ವೇಳೆ ಬೇಟೆಗೆ ಬಂದ ಓರ್ವ ಯುವಕ […]
ಬೆಂಗಳೂರಿನಿಂದ ವಿಜಯಪುರ, ಬೆಳಗಾವಿಗೆ ವಿಶೇಷ ಎಕ್ಸ್‌ಪ್ರೆಸ್ ರೈಲು : ದೀಪಾವಳಿ ಸ್ಪೆಷಲ್

ಬೆಂಗಳೂರು: ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ನಿಂದ ವಿಜಯಪುರ ಮತ್ತು ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳು ಸಂಚರಿಸಲಿದ್ದು, ಪ್ರಯಾಣಿಕರು ಪ್ರಯೋಜನ ಪಡೆದುಕೊಳ್ಳಬೇಕೆಂದು ನೈಋತ್ಯ ರೈಲ್ವೆ ಮನವಿ ಮಾಡಿದೆ.ದೀಪಾವಳಿ ಹಬ್ಬದ ವೇಳೆ ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ನೈಋತ್ಯ ರೈಲ್ವೆಯು ಬೆಂಗಳೂರಿನಿಂದ ವಿಜಯಪುರ ಮತ್ತು ಬೆಳಗಾವಿಗೆ ವಿಶೇಷ ರೈಲುಗಳ ವ್ಯವಸ್ಥೆಯನ್ನು ಕಲ್ಪಿಸುತ್ತಿದೆ. ರೈಲು ಸಂಖ್ಯೆ 06231/06232 ಬೆಂಗಳೂರು-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ (ಒಂದು ಟ್ರಿಪ್): ರೈಲು ಸಂಖ್ಯೆ 06231 ಬೆಂಗಳೂರು-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 10ರಂದು ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ನಿಂದ ಸಂಜೆ […]
2.90 ಲಕ್ಷ ಕುಟುಂಬಗಳಿಗೆ ಶೀಘ್ರವೇ ಪಡಿತರ ಚೀಟಿ’ ವಿತರಣೆ : ಹೊಸರೇಷನ್ ಕಾರ್ಡ್’ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್

ಬೆಂಗಳೂರು :ಪಡಿತರ ಚೀಟಗೆ ಈಗಾಗಲೇ ಅರ್ಜಿ ಸಲ್ಲಿಸಿದವರ ಅರ್ಜಿಗಳ ಪರಿಶೀಲನಾ ಕಾರ್ಯ ಶೇ.75ರಷ್ಟು ಪರಿಶೀಲನಾ ಕಾರ್ಯ ಪೂರ್ಣಗೊಂಡಿದೆ. ಪರಿಶೀಲನಾ ಕಾರ್ಯ ಸಂಪೂರ್ಣವಾಗಿ ಮುಗಿದ ನಂತರದಲ್ಲಿ ಅರ್ಜಿ ಸಲ್ಲಿಸಿದವರ ಪೈಕಿ ಅರ್ಹರಿಗೆ ಮಾತ್ರವೇ ಪಡಿತರ ಚೀಟಿ ಕೈ ಸೇರಲಿದೆ.ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ 2.90 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಆದಷ್ಟು ಶೀಘ್ರ ಈ ಎಲ್ಲಾ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹ ಕುಟುಂಬಗಳಿಗೆ ಹೊಸ ಪಡಿತರ ಚೀಟಿಗಳನ್ನು ವಿತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ. […]
16 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ

ಬೆಂಗಳೂರು : ಕರಾವಳಿಯ ಎಲ್ಲಾ ಜಿಲ್ಲೆಗಳು ಹಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ನವೆಂಬರ್ 5 ರಿಂದ 7 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ನವೆಂಬರ್ 7 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು,ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ […]
