ಈದ್ಗಾ ಮೈದಾನ : ಬೆಂಗಳೂರಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಹೈಕೋರ್ಟ್ ಷರತ್ತುಬದ್ಧ ಅನುಮತಿ

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಚಾಮರಾಜಪೇಟೆ ನಾಗರಿಕರ ಒಕ್ಕೂಟದಿಂದ ನವೆಂಬರ್ 1ರಿಂದ 3 ದಿನಗಳ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಹೈಕೋರ್ಟ್ ಷರತ್ತುಬದ್ಧ ಅನುಮತಿ ಕೊಟ್ಟಿದೆ.ಅಲ್ಲದೆ, ಈದ್ಗಾ ಮೈದಾನ ಬಳಕೆ ಮಾಡಲು ಒಂದು ವೇಳೆ ಕಾನೂನು ಅಡಚಣೆಗಳು ಉಂಟಾದಲ್ಲಿ ಅರ್ಜಿದಾರರ ಒಕ್ಕೂಟದಿಂದ ರಾಜ್ಯೋತ್ಸವ ಆಚರಣೆ ಮಾಡಲು ಜಿಲ್ಲಾಡಳಿತದಿಂದ ಪರ್ಯಾಯ ಮೈದಾನ ಒದಗಿಸಬೇಕು ಎಂದು ಆದೇಶದಲ್ಲಿ ನ್ಯಾಯಪೀಠ ಸ್ಪಷ್ಟ ನಿರ್ದೇನ ನೀಡಿದೆ. ಬೆಂಗಳೂರು ನಗರದ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನವೆಂಬರ್​ 1ರಿಂದ 3ರವರೆಗೆ ಕರ್ನಾಟಕ ರಾಜ್ಯೋತ್ಸವ […]

ರಾಜ್ಯೋತ್ಸವ ಪ್ರಶಸ್ತಿ: ಇಸ್ರೋ ಅಧ್ಯಕ್ಷ ಸೋಮನಾಥ್, ನಟರಾದ ಡಿಂಗ್ರಿ ನಾಗರಾಜ್, ಬ್ಯಾಂಕ್ ಜನಾರ್ದನ ಸೇರಿ 68 ಸಾಧಕರು

ಬೆಂಗಳೂರು: ಕನ್ನಡ ರಾಜ್ಯೋತ್ಸವದ ನಿಮಿತ್ತ ರಾಜ್ಯ ಸರ್ಕಾರದಿಂದ ಕೊಡ ಮಾಡುವ ರಾಜ್ಯೋತ್ಸವ ಪ್ರಶಸ್ತಿಗೆ ಈ ಬಾರಿ ಕಲೆ, ಸಾಹಿತ್ಯ, ವಿಜ್ಞಾನ, ಸಿನಿಮಾ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 68 ಸಾಧಕರಿಗೆ ಮತ್ತು 10 ಸಂಘ ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ‌ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ. ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿನ 68 ಮಂದಿ ಸಾಧಕರು […]

ಸಿಸಿಟಿವಿಯಲ್ಲಿ ದೃಶ್ಯ ಸೆರೆ : ಬೆಂಗಳೂರು ಹೊರವಲಯದ ರಸ್ತೆ, ಅಪಾರ್ಟ್​ಮೆಂಟ್​ಗಳಲ್ಲಿ ಚಿರತೆ ಓಡಾಟ

ಬೆಂಗಳೂರು: ಅರಣ್ಯ ಇಲಾಖೆ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದಾರೆ.ನಗರದ ಹೊರವಲಯದಲ್ಲಿರುವ ಬೊಮ್ಮನಹಳ್ಳಿಯ ಸಿಂಗಸಂದ್ರ ಎಇಸಿಎಸ್ ಲೇಔಟ್‌ನಲ್ಲಿ ಚಿರತೆ ಸಂಚಾರದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರು ಹೊರವಲಯದಲ್ಲಿ ಚಿರತೆ ಓಡಾಡಿದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮತ್ತೋರ್ವ ಸ್ಥಳೀಯ ನಿವಾಸಿ ಪರಮೇಶ್​ ಮಾತನಾಡಿ, “ಚಿರತೆ ಓಡಾಟದ ಬಗ್ಗೆ ಸಿಸಿಟಿವಿಯಲ್ಲಿ ಚೆಕ್​ ಮಾಡಿದ್ದಾರೆ. ಡ್ರೋನ್ ಬೇಕು ಅನ್ನುತ್ತಿದ್ದಾರೆ. ಇಲ್ಲಿ ಸಾರ್ವಜನಿಕರು ಜಾಸ್ತಿ ಇದ್ದಾರೆ. ಬೆಳಿಗ್ಗೆ ವಯಸ್ಸಾದವರು ವಾಕ್​ಗೆ ಬರುತ್ತಾರೆ. ಹಾಗಾಗಿ ಸ್ಥಳೀಯ ಅಧಿಕಾರಿಗಳು ಸ್ವಲ್ಪ ಕೇರ್​ […]

ರಂಜುಷಾ ಮೆನನ್ ಮಲಯಾಳಂ ಖ್ಯಾತ ಧಾರಾವಾಹಿ ನಟಿ ಶವವಾಗಿ ಪತ್ತೆ

ತಿರುವನಂತಪುರಂ (ಕೇರಳ): ಮಲಯಾಳಂ ಸಿನಿಮಾ ಮತ್ತು ಧಾರಾವಾಹಿ ನಟಿ ರಂಜುಷಾ ಮೆನನ್ (35) ತಿರುವನಂತಪುರಂನ ಶ್ರೀಕಾರ್ಯಂ ಕರಿಯಂನಲ್ಲಿರುವ ಫ್ಲಾಟ್​ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹಣಕಾಸಿನ ಸಮಸ್ಯೆಯಿಂದ ನಟಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಸಾವಿನ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮಲಯಾಳಂ ಕಿರುತೆರೆಯ ಖ್ಯಾತ ನಟಿ ರಂಜುಷಾ ಮೆನನ್ ಇಂದು ಶವವಾಗಿ ಪತ್ತೆಯಾಗಿದ್ದಾರೆ ಮೇರಿಕುಂಡೋರು ಕುಂಜಾದ್​, ಸಿಟಿ ಆಫ್​ ಗಾಡ್​, ಲಿಸಮ್ಮಂದೆ ಹೌಸ್​, ಬಾಂಬೆ ಮಾರ್ಚ್​ 12, ತಲಪ್ಪಾವು, ವಾಧ್ಯಾರ್​ ಮುಂತಾದ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದರು. ಕೊಚ್ಚಿ […]

ಸಿಗರೇಟ್​ಗಳ ನಾಶ : ವಿದೇಶದಿಂದ ಅಕ್ರಮವಾಗಿ ತಂದ 1.46 ಕೋಟಿ ಮೌಲ್ಯದ 7.3 ಲಕ್ಷ ಸಿಗರೇಟ್

ಬೆಂಗಳೂರು : ವಿದೇಶದಿಂದ ಅಕ್ರಮವಾಗಿ ಸಿಗರೇಟ್​ ಸಾಗಿಸುವ ಯತ್ನವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭೇದಿಸಿದ್ದಾರೆ. ಈ ವೇಳೆ ಪ್ರಯಾಣಿಕರು ಸಿಕ್ಕಿಬಿದ್ದಿದ್ದು, ಅವರಿಂದ ವಶಪಡಿಸಿಕೊಂಡು 1.46 ಕೋಟಿ ಮೌಲ್ಯದ 7.3 ಲಕ್ಷ ಸಿಗರೇಟ್​ಗಳನ್ನು ಸುಟ್ಟು ನಾಶ ಮಾಡಲಾಗಿದೆ. ನೆಲಮಂಗಲದ ಬೆಂಗಳೂರು ಇಕೋ ಪ್ರೈವೇಟ್ ಲಿಮಿಟೆಡ್​ನಲ್ಲಿರುವ ಇನ್ಸಿನರೇಟರ್​ನಲ್ಲಿ ಜಪ್ತಿ ಮಾಡಲಾದ ಸಿಗರೇಟ್​ಗಳನ್ನು ಇಡೀ ದಿನ ನಾಶಪಡಿಸಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್​ ಅಧಿಕಾರಿಗಳು 1.46 ಕೋಟಿ ಮೌಲ್ಯದ 7.3 ಲಕ್ಷ ಸಿಗರೇಟ್​ಗಳನ್ನು ವಶಕ್ಕೆ ಪಡೆದುಕೊಂಡು […]