ನೈಸರ್ಗಿಕವಾಗಿ ಉದುರಿದ ನವಿಲುಗರಿ ಸಂಗ್ರಹಣೆ ಕಾನೂನು ಬಾಹಿರವಲ್ಲ: ಈಶ್ವರ್ ಖಂಡ್ರೆ

ಬೆಂಗಳೂರು: ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ನವಿಲು ಗರಿಗೆ ವಿನಾಯಿತಿ ಇದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ನವಿಲು ಗರಿಯಿಂದ ತಯಾರಿಸಿದ ವಸ್ತುಗಳನ್ನು ವಿದೇಶಕ್ಕೆ ರಫ್ತು ಮಾಡಲು ನಿಷೇಧವಿದೆ. ಆದರೆ ನವಿಲುಗಳಿಗೆ ಹಿಂಸೆ ನೀಡದೇ ಉದುರಿಬಿದ್ದ ಗರಿಗಳನ್ನು ಸಂಗ್ರಹಿಸಿ ದೇಶದೊಳಗೆ ಮಾರಾಟ ಮಾಡುವುದು ಕಾನೂನು ಬಾಹಿರವಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಕೇವಲ ಹಿಂದೂ ಸಮಾಜದ ನಂಬಿಕೆಗಳನ್ನು ಗುರಿಯಾಗಿಸಿಕೊಂಡು ಕಾನೂನು ಕ್ರಮ ಜರುಗಿಸುವುದು ಸರಿಯಾದ ಕ್ರಮವಲ್ಲ, ದರ್ಗಾಗಳಲ್ಲಿ ನವಿಲುಗರಿ ಇಡುವ ಬಗ್ಗೆಯೂ ತನಿಖೆ […]

ಸಹಕಾರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ : ಕೇಂದ್ರ ಸರ್ಕಾರದ ವಿರುದ್ಧ ‘ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ’ ಅಭಿಯಾನ

ಬೆಂಗಳೂರು: ಇಂದಿನಿಂದ ಸಾಮಾಜಿಕ ಜಾಲತಾಣದಲ್ಲಿ ನಡೆಸಲಾಗುವ #ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ ಎಂಬ ಅಭಿಯಾನದ ಯಶಸ್ಸಿಗೆ ಸಿಎಂ ಸಿದ್ದರಾಮಯ್ಯ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.ನಮ್ಮ ನಾಡು ಕರ್ನಾಟಕ ಎಂದು ಮರುನಾಮಕರಣಗೊಂಡು 50 ವಸಂತಗಳು ತುಂಬುತ್ತಿರುವ ಹೊತ್ತಿನಲ್ಲಿ ಕರ್ನಾಟಕವು ಸಾಗಿಬಂದ ಹಾದಿಯನ್ನು ಸ್ಮರಿಸಿಕೊಳ್ಳಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾಗಿರುವ ಅನುದಾನ, ತೆರಿಗೆಯಲ್ಲಿ ಪಾಲು, ಬರ ಮತ್ತು ಜಿಎಸ್‌ಟಿ ಪರಿಹಾರ ಪೂರ್ಣಪ್ರಮಾಣದಲ್ಲಿ ಬಂದಿಲ್ಲ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳು ಮತ್ತು ಐಬಿಪಿಎಸ್‌ ನೇಮಕಾತಿಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಎದುರಿಸಲು ಅವಕಾಶ ನೀಡದೆ […]

ಹುಲಿ ಉಗುರು ಮಾದರಿ ಪೆಂಡೆಂಟ್ ಧರಿಸಿದ್ದ ಅರಣ್ಯಾಧಿಕಾರಿ ಬಂಧನ : ಚಿಕ್ಕಮಗಳೂರು

ಚಿಕ್ಕಮಗಳೂರು: ಹುಲಿ ಉಗುರು ಮಾದರಿ ಪೆಂಡೆಂಟ್​ ಧರಿಸಿದ ಆರೋಪದ ಮೇಲೆ ಕಳಸ ಉಪ ವಲಯ ಅರಣ್ಯಾಧಿಕಾರಿ ದರ್ಶನ್ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.ದರ್ಶನ್ ಅವರು ಹುಲಿ ಉಗುರು ಮಾದರಿ ಪೆಂಡೆಂಟ್ ಇರುವ ಸರ ಹಾಕಿಕೊಂಡ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಅಪ್​ಲೋಡ್​ ಮಾಡಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ದೂರು ನೀಡಲಾಗಿತ್ತು.ಚಿಕ್ಕಮಗಳೂರು ಜಿಲ್ಲೆಯಲ್ಲಿ ಹುಲಿ ಉಗುರು ಮಾದರಿಯ ಪೆಂಡೆಂಟ್​ ಧರಿಸಿರುವ ಆರೋಪದ ಮೇಲೆ ಅರಣ್ಯಾಧಿಕಾರಿಯನ್ನು ಬಂಧಿಸಲಾಗಿದೆ. ದರ್ಶನ್ ಈ ಹಿಂದೆ ತಮ್ಮ […]

ಹುಲಿ ಉಗುರು ಮಾದರಿಯ ಪೆಂಡೆಂಟ್‌ ವಶಕ್ಕೆ : ಲಕ್ಷ್ಮಣ್ ಸವದಿ ನಿವಾಸದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಂದ ಶೋಧ

ಚಿಕ್ಕೋಡಿ:ಅರಣ್ಯ ಇಲಾಖೆ ಅಧಿಕಾರಿ ಪ್ರಶಾಂತ ಗಾಣಿಗೇರ ನೇತೃತ್ವದಲ್ಲಿ ಹತ್ತು ಮಂದಿ ಸಿಬ್ಬಂದಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಚಿದಾನಂದ ಸವದಿ ಅವರಿಂದ ಮಾಹಿತಿ ಪಡೆದುಕೊಂಡರು. ಇದೇ ವೇಳೆ, ಹುಲಿ ಉಗುರು ಹೋಲುವಂತಹ ಪೆಂಡೆಂಟ್ ಅನ್ನು ವಶಕ್ಕೆ ಪಡೆದುಕೊಂಡರು. ಮಾಜಿ ಡಿಸಿಎಂ, ಕಾಂಗ್ರೆಸ್ ನಾಯಕ ಲಕ್ಷ್ಮಣ್ ಸವದಿ ಪುತ್ರ ಸುಮಿತ್ ಸವದಿ ಕೊರಳಲ್ಲಿ ಹುಲಿ ಉಗುರು ಹೋಲುವಂತಹ ಪೆಂಡೆಂಟ್ ಇರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಥಣಿ ಅರಣ್ಯ ಇಲಾಖೆ ಅಧಿಕಾರಿಗಳು ಸರ್ಚ್ ವಾರಂಟ್‌ನೊಂದಿಗೆ ಇಂದು ಅಥಣಿಯಲ್ಲಿರುವ ಸವದಿ ನಿವಾಸದಲ್ಲಿ ಶೋಧ […]

2 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ : ಚಿಕ್ಕಬಳ್ಳಾಪುರ ರಸ್ತೆ ಅಪಘಾತ: ಮೃತರ ಸಂಖ್ಯೆ 13ಕ್ಕೆ ಏರಿಕೆ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆ ಆಗಿದೆ. ಮೃತರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಅವರು 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.ಚಿಕ್ಕಬಳ್ಳಾಪುರದಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆ ಆಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಪಿ ಎನ್​ ರವೀಂದ್ರ ಅವರು, ಚಿಕ್ಕಬಳ್ಳಾಪುರ ಆರ್​ಟಿಓ ಕಚೇರಿ ಬಳಿ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 13 ಜನ ಸಾವನ್ನಪ್ಪಿದ್ದಾರೆ. 8 ಮಂದಿ ಗಂಡಸರು, 4 […]