ಜಂಬೂಸವಾರಿ: ಮೈಸೂರು ಜಂಬೂಸವಾರಿ ಯಶಸ್ವಿಗೊಳಿಸಿದ ಗಜಪಡೆಗೆ ಸಾಂಪ್ರದಾಯಿಕ ಬೀಳ್ಕೊಡುಗೆ

ಮೈಸೂರು: ಪ್ರಸಿದ್ಧ ದಸರಾಜಂಬೂಸವಾರಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ಮಾವುತರು ಹಾಗು ಕಾವಾಡಿಗರನ್ನು ಇಂದು ಸನ್ಮಾನಿಸಲಾಯಿತು. ಈ ಮೂಲಕ ಅರಮನೆಯ ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತ ಆತ್ಮೀಯ ಬೀಳ್ಕೊಡುಗೆ ನೀಡಿತು. ಕಳೆದ 56 ದಿನಗಳಿಂದ ಅರಮನೆ ಆವರಣದಲ್ಲಿ ಗಜಪಡೆ ಹಾಗೂ ಅದರೊಂದಿಗೆ ಬಂದಿದ್ದ ಮಾವುತರು, ಕಾವಾಡಿಗರ ಕುಟುಂಬದವರು ಬೀಡುಬಿಟ್ಟಿದ್ದರು. ಮಾವುತ, ಕಾವಾಡಿಗರಿಗೆ ಗೌರವ ಧನದ ಚೆಕ್ ನೀಡಲಾಯಿತು. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.ಐತಿಹಾಸಿಕ ಮೈಸೂರು ದಸರಾ ಜಂಬೂಸವಾರಿ ಮುಕ್ತಾಯಗೊಂಡಿದ್ದು ಇಂದು ಗಜಪಡೆಗಳು ತಮ್ಮ […]

ವಿಶೇಷ ತಂಡ ರಚನೆಗೆ ಸಿದ್ಧತೆ : ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ

ಬೆಂಗಳೂರು: ವನ್ಯಜೀವಿ ವಸ್ತುಗಳ ಸಂಗ್ರಹ, ಮಾರಾಟ ಪ್ರಕರಣಗಳ ಕುರಿತು ತಂಡವನ್ನ ರಚಿಸುವುದರ ಬಗ್ಗೆ ಅರಣ್ಯ, ಜೀವಶಾಸ್ತ್ರ ಪರಿಸರ ಸಚಿವ ಈಶ್ವರ್ ಖಂಡ್ರೆಯವರಿಗೆ ಅರಣ್ಯ ಇಲಾಖೆಯ ಪ್ರಧಾನ ಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್ ದೀಕ್ಷಿತ್ ಪತ್ರ ಬರೆದಿದ್ದಾರೆ.ರಾಜ್ಯದಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕಾಯ್ದೆಯನ್ನು ಮತ್ತಷ್ಟು ಕಠಿಣಗೊಳಿಸಲು ಅರಣ್ಯ ಇಲಾಖೆ ಮುಂದಾಗಿದೆ.ವನ್ಯಜೀವಿ ವಸ್ತುಗಳ ಸಂಗ್ರಹ ಮಾರಾಟ ಪ್ರಕರಣಗಳ ಕುರಿತು ತಂಡವನ್ನು ರಚಿಸುವುದರ ಬಗ್ಗೆ ಅರಣ್ಯ ಇಲಾಖೆ ಪ್ರಧಾನ ಸಂರಕ್ಷಣಾಧಿಕಾರಿ ಸಚಿವ ಈಶ್ವರ್​ ಖಂಡ್ರೆಗೆ ಪತ್ರ ಬರೆದಿದ್ದಾರೆ. ಈ ತಂಡವು […]

ಕರ್ನಾಟಕ ಪರೀಕ್ಷಾ ಪ್ರಾಧಿಕಾರ : ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ

ಬೆಂಗಳೂರು: ಅಕ್ಟೋಬರ್ 28 ಮತ್ತು 29ರಂದು ನಡೆಯಲಿರುವ ವಿವಿಧ ನಿಗಮ ಮಂಡಳಿಗಳ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಷರತ್ತುಬದ್ಧ ಅನುಮತಿ ನೀಡಿದೆ. ಹಿಜಾಬ್‌ ಧರಿಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಕೊಠಡಿಗೆ ಪ್ರವೇಶ ಕಲ್ಪಸಲು ಸೂಚಿಸಿದ್ದರೂ ಪರೀಕ್ಷೆ ಆರಂಭವಾಗುವುದಕ್ಕೆ ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಅವರು ಹಾಜರಿರಬೇಕು. ಅವರು ಮಹಿಳಾ ಸಿಬ್ಬಂದಿಯಿಂದ ತಪಾಸಣೆಗೆ ಒಳಪಡಬೇಕು. ತಪಾಸಣೆಗೆ ಸೂಚಿಸಿರುವ ಸಮಯ ಮೀರಿದ ನಂತರ ಆಗಮಿಸಿದರೆ ಅವರು ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರ ಪ್ರವೇಶಿಸಲು […]

ಪ್ರಧಾನಿ ಮೋದಿ ಮಧ್ಯಪ್ರವೇಶಿಸಿ ಎರಡು ರಾಜ್ಯಗಳ ಜತೆ ಮಾತುಕತೆ ನಡೆಸಲಿ ಎಂದು ಕಾವೇರಿ ವಿವಾದದ ಕುರಿತು ಹೇಳಿದ ನಟ ಶಿವರಾಜ್ ಕುಮಾರ್

ಮಂಡ್ಯ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸಂಕಷ್ಟ ಸನ್ನಿವೇಶ ಎದುರಾಗಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಿ ಎರಡು ರಾಜ್ಯಗಳ ನಡುವೆ ಮಾತುಕತೆ ನಡೆಸಬೇಕು ಎಂದು ನಟ ಡಾ.ಶಿವರಾಜ್‌ ಕುಮಾರ್ ತಿಳಿಸಿದ್ದಾರೆ. ಮಂಡ್ಯದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿದರೆ ಮಾತ್ರ ಸಮಸ್ಯೆಗೆ ಪರಿಹಾರ ಸಿಗಲಿದೆ. ಕಷ್ಟಕಾಲದ ಪರಿಸ್ಥಿತಿಯಲ್ಲಿ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳ ನಡುವೆ ಮಾತುಕತೆಗೆ ಮುಂದಾಗಬೇಕು. ಎರಡೂ ಸರ್ಕಾರಗಳ ಜತೆ ಮಾತನಾಡಿದರೆ ಸಂಕಷ್ಟ ಬಗೆಹರಿಯಲಿದೆ ಎಂದರು.ಕಾವೇರಿ ವಿವಾದದಲ್ಲಿ […]

​15 ದಿನದಲ್ಲಿ ಶರಣಾಗಲು ಆದೇಶ : ಜಯಪ್ರದಾಗೆ 6 ತಿಂಗಳ ಜೈಲು ಶಿಕ್ಷೆ ಖಚಿತಪಡಿಸಿದ ಮದ್ರಾಸ್​ ಹೈಕೋರ್ಟ್

ಚೆನ್ನೈ (ತಮಿಳುನಾಡು): ಕನ್ನಡ, ತೆಲುಗು ಹಾಗೂ ತಮಿಳು ಸೇರಿದಂತೆ ವಿವಿಧ ಭಾಷೆಗಳ ಸಿನಿಮಾಗಳಲ್ಲಿ ಅಭಿನಯಿಸಿರುವ ಜಯಪ್ರದಾ, ಸಂಸತ್ ಸದಸ್ಯರಾಗಿದ್ದರು. ಚೆನ್ನೈನಲ್ಲಿ ರಾಮಕುಮಾರ್, ರಾಜ್​ಬಾಬು ಎಂಬವರೊಂದಿಗೆ ಸೇರಿ ಚಿತ್ರಮಂದಿರವನ್ನು ನಡೆಸುತ್ತಿರುವ ಇವರು, ಕಾರ್ಮಿಕರಿಂದ ಸಂಗ್ರಹಿಸಿದ ಇಎಸ್​ಐ ಹಣವನ್ನು ರಾಜ್ಯ ವಿಮಾ ನಿಗಮಕ್ಕೆ ಪಾವತಿಸದ ಆರೋಪ ಎದುರಿಸುತ್ತಿದ್ದಾರೆ.ಖ್ಯಾತ ನಟಿ ಜಯಪ್ರದಾ ಅವರಿಗೆ ಕೆಳ ಹಂತದ ನ್ಯಾಯಾಲಯ ವಿಧಿಸಿದ್ದ 6 ತಿಂಗಳ ಜೈಲು ಶಿಕ್ಷೆಯನ್ನು ಮದ್ರಾಸ್​ ಹೈಕೋರ್ಟ್ ಇಂದು (ಶುಕ್ರವಾರ)​ ಖಚಿತಪಡಿಸಿತು.15 ದಿನದಲ್ಲಿ ಎಗ್ಮೋರ್ ಕೋರ್ಟ್‌ಗೆ ಶರಣಾಗುವಂತೆ ಹಾಗೂ 20 ಲಕ್ಷ […]