ಹಲವು ಗಣ್ಯರು ಭಾಗಿ : ಪವಿತ್ರ ಕಾವೇರಿ ತೀರ್ಥೋದ್ಭವ ಕಣ್ತುಂಬಿಕೊಂಡ ಭಕ್ತಗಣ

ಕೊಡಗು : ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವದ ಕ್ಷಣಕ್ಕೆ ಸಾಕ್ಷಿಯಾದರು.ಕೊಡಗಿನ ಕುಲದೇವಿ, ನಾಡಿನ ಜೀವನದಿ ಕಾವೇರಿ ನಿಗದಿಯಂತೆ ಕರ್ಕಾಟಕ ಲಗ್ನದಲ್ಲಿ ರಾತ್ರಿ 1 ಗಂಟೆ 26 ನಿಮಿಷಕ್ಕೆ ತೀರ್ಥರೂಪಿಣಿಯಾಗಿ ನೆರೆದಿದ್ದ ಭಕ್ತರಿಗೆ ದರ್ಶನ ನೀಡಿದಳು.ಕೊಡಗಿನ ತಲಕಾವೇರಿಯಲ್ಲಿ ಸಾವಿರಾರು ಭಕ್ತರು ಕಾವೇರಿ ತೀರ್ಥೋದ್ಭವವನ್ನು ಕಣ್ತುಂಬಿಕೊಂಡರು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜ್, ಶಾಸಕರಾದ ಎ.ಎಸ್. ಪೊನ್ನಣ್ಣ, ಡಾ.ಮಂಥರ್ ಗೌಡ, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ವೆಂಕಟರಾಜ, ಜಿ. […]
ಕುಂಡರ ಜಾನಿ ಮಲಯಾಳಂ ಪ್ರಸಿದ್ಧ ಖಳ ನಟ ಹೃದಯಾಘಾತದಿಂದ ನಿಧನ

ಕೊಲ್ಲಂ(ಕೇರಳ) : ಮಲಯಾಳಂ ಚಿತ್ರರಂಗದ ಖ್ಯಾತ ನಟ ಕುಂಡರ ಜಾನಿ ಮಂಗಳವಾರ ನಿಧನರಾಗಿದ್ದಾರೆ. ಇವರಿಗೆ 71 ವರ್ಷ ವಯಸ್ಸಾಗಿತ್ತು. ಮಂಗಳವಾರ ಸಂಜೆ ಹೃದಯಾಘಾತ ಉಂಟಾಗಿ ಅವರನ್ನು ಕೊಲ್ಲಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಮಲಯಾಳಂ ಚಿತ್ರರಂಗ ಪ್ರಸಿದ್ಧ ಖಳನಟ ಕುಂಡರ ಜಾನಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ಆದರೆ ಚಿಕಿತ್ಸೆ ಫಲಕಾರಿಯಾಗದೇ ಜಾನಿ ಮೃತಪಟ್ಟಿದ್ದಾರೆ. ನಾಲ್ಕು ದಶಕಗಳ ವೃತ್ತಿ ಜೀವನ : ಜಾನಿ ತಮ್ಮ ಸಿನಿಮಾ ವೃತ್ತಿ ಜೀವನವನ್ನು 1979ರಲ್ಲಿ ಆರಂಭಿಸಿದರು. ಇವರು ಐವಿ ಸಸಿ ಅವರ ನಿರ್ದೇಶನದಲ್ಲೇ 30ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದರು. […]
ಮಡಿಕೇರಿ: ತಲಕಾವೇರಿಯಲ್ಲಿ ಕಾವೇರಿ ಮಾತೆಯ ತೀರ್ಥೋದ್ಬವವನ್ನುಕಣ್ತುಂಬಿಕೊಂಡ ಸಹಸ್ರಾರು ಭಕ್ತರು

ಮಡಿಕೇರಿ: ತಾಲೂಕಿನ ತಲಕಾವೇರಿಯಲ್ಲಿ ಮಧ್ಯರಾತ್ರಿ 1.27 ಕ್ಕೆ ಕಾವೇರಿ ತೀರ್ಥೋದ್ಭವವನ್ನು ಸಹಸ್ರಾರು ಜನರು ನೋಡಿ ಕೃತಾರ್ಥರಾದರು. ಕರ್ಕಾಟಕ ಲಗ್ನ ತುಲಾ ಸಂಕ್ರಮಣ ಪುಣ್ಯಗಳಿಗೆಯಲ್ಲಿ ಬ್ರಹ್ಮಕುಂಡಿಕೆಯಲ್ಲಿ ತಾಯಿ ಕಾವೇರಿ ತೀರ್ಥರೂಪಿಣಿಯಾಗಿ ನೆರೆದ ಭಕ್ತರಿಗೆ ದರ್ಶನ ನೀಡಿದಳು. ಹಲವಾರು ಅರ್ಚಕರ, ಪಂಡಿತರ ಮಂತ್ರಘೋಷದ ನಡುವೆ ತೀರ್ಥೋದ್ಭವ ಸಂಭವಿಸಿತು. ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ನಟಿ ಹರ್ಷಿಕಾ ಮತ್ತು ಭುವನ್ ಈ ಸಂದರ್ಭದಲ್ಲಿ ಹಾಜರಿದ್ದು ತೀರ್ಥೋದ್ಭವದ ಪುಣ್ಯಸಂದರ್ಭವನ್ನು ಕಣ್ತುಂಬಿಕೊಂಡರು.
ಸೋಷಿಯಲ್ ಮೀಡಿಯಾದ ವಿಡಿಯೋ ನೋಡಿ ಚಿಕ್ಕೋಡಿಯಲ್ಲಿ ಬಂಗಾರದಂಥ ಬೆಳೆ ಬೆಳೆದ ದಂಪತಿ

ಚಿಕ್ಕೋಡಿ:ಸೋಷಿಯಲ್ ಮೀಡಿಯಾದ ವಿಡಿಯೋ ನೋಡಿ ಬಂಗಾರದಂಥ ಬೆಳೆ ಬೆಳೆದ ದಂಪತಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಆಜೂರ್ ಗ್ರಾಮದ ರೈತ ದಂಪತಿ ಬರಡು ಭೂಮಿಯಲ್ಲಿ ಡ್ರ್ಯಾಗನ್ ಫ್ರೂಟ್ ಬೆಳೆದು ಕೈ ತುಂಬಾ ಆದಾಯಗಳಿಸಿದೆ. ಈ ಮೂಲಕ ಇತರರಿಗೂ ಮಾದರಿಯಾಗಿದೆ. ಕೃಷಿಯಲ್ಲಿ ಲಾಭವಿಲ್ಲ ಎಂದು ಹೊಲಗದ್ದೆ ಮಾರಿ ಪಟ್ಟಣ – ನಗರ ಪ್ರದೇಶ ಸೇರುವವರ ನಡುವೆ ಇಲ್ಲೊಬ್ಬ ರೈತ ದಂಪತಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ನೋಡಿ, ಬರಡು ಭೂಮಿಯಲ್ಲಿ ಡ್ರ್ಯಾಗನ್ ಫ್ರೂಟ್ ಬೆಳೆದು ಕೈತುಂಬಾ ಆದಾಯ ಪಡೆದುಕೊಂಡು ಉಳಿದ […]
ಕೆಎಸ್ಆರ್ಟಿಸಿಯಿಂದ ನವರಾತ್ರಿ ಹಿನ್ನೆಲೆ ದೇವಾಲಯ ದರ್ಶನಕ್ಕೆ ವಿಶೇಷ ಪ್ಯಾಕೇಜ್

ಮಂಗಳೂರು : ನವರಾತ್ರಿ ಹಬ್ಬದ ಸಂದರ್ಭದಲ್ಲಿ ಭಕ್ತರಿಗೆ ದೇವಾಲಯ ದರ್ಶನಕ್ಕೆ ಕಳೆದ ವರ್ಷ ಕೆಎಸ್ಆರ್ಟಿಸಿಯಿಂದ ದಸರಾ ದರ್ಶಿನಿ ಎಂಬ ಪ್ಯಾಕೇಜ್ ಆರಂಭಿಸಲಾಗಿತ್ತು. ಇದಕ್ಕೆ ಜನರ ಅದ್ಬುತ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ಮಂಗಳೂರಿನ ಕೆಎಸ್ಆರ್ಟಿಸಿ ಈ ಬಾರಿಯು ದಸರಾ ದರ್ಶಿನಿ ಆರಂಭಿಸಿದೆ. ದೇವಾಲಯ ದರ್ಶನಕ್ಕೆ ಕೆಎಸ್ಆರ್ಟಿಸಿಯಿಂದ ವಿಶೇಷ ಪ್ಯಾಕೇಜ್ : ನವರಾತ್ರಿ ಸಮಯದಲ್ಲಿ ದೇವಿ ದೇವಾಲಯಗಳ ದರ್ಶನ ಮಾಡುವುದು ಸಾಮಾನ್ಯ. ದೇಗುಲ ದರ್ಶನ ಮಾಡುವ ಭಕ್ತರಿಗೆ ಎಂದೇ ಮಂಗಳೂರಿನಲ್ಲಿ ಕೆಎಸ್ಆರ್ಟಿಸಿ ಇದೀಗ ದಸರಾ ದೇಗುಲ ದರ್ಶನ ವಿಶೇಷ ಪ್ಯಾಕೇಜ್ […]