ಶಿಕ್ಷಣ ಸಚಿವ ಮಧು ಬಂಗಾರಪ್ಪ : ಸರ್ಕಾರಿ ಶಾಲೆಗಳಿಗೆ 20 ಸಾವಿರ ಶಿಕ್ಷಕರ ನೇಮಕಾತಿಗೆ ನಿರ್ಧಾರ

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಿಗೆ 20 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ.ನ್ಯಾಯಾಲಯದ ತೀರ್ಪು ಹೊರಬಂದ ನಂತರ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ ಕಾರ್ಯಾರಂಭವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದರು. ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ವಿಷಯ ತಿಳಿಸಿದರು. ಈ ನೇಮಕಾತಿಗೆ ನ್ಯಾಯಾಲಯ ಇನ್ನೊಂದು ತಿಂಗಳಲ್ಲಿ ಅನುಮತಿ ನೀಡಿ ಆದೇಶ ಪ್ರಕಟಿಸುವ ಸಾಧ್ಯತೆಗಳಿವೆ. 20 ಸಾವಿರ ಶಿಕ್ಷಕರನ್ನು ನೇಮಕ […]
ಡೆಪ್ಯುಟಿ ಗವರ್ನರ್ ಟಿ ರಬಿ ಶಂಕರ್ : ಆರ್‌ಬಿಐ ತಂತ್ರಜ್ಞಾನದಲ್ಲಿ ಆಸಕ್ತಿ ತೋರಿಸುತ್ತಿದೆ

ಬೆಂಗಳೂರು : ತಂತ್ರಜ್ಞಾನವು ಮಾನವ ಚಟುವಟಿಕೆಗಳ ಮೇಲೆ ಪ್ರಭಾವ ಬೀರಿದ್ದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಸಹ ಅದರಲ್ಲಿ ಆಸಕ್ತಿ ತೋರುತ್ತಿದೆ ಎಂದು ಕೇಂದ್ರ ಬ್ಯಾಂಕ್‌ನ ಡೆಪ್ಯುಟಿ ಗವರ್ನರ್ ಟಿ ರಬಿ ಶಂಕರ್ (T Rabi Sankar) ಬುಧವಾರ ಹೇಳಿದ್ದಾರೆ. ಹ್ಯಾಕಥಾನ್‌ನ ಎರಡನೇ ಆವೃತ್ತಿಯಲ್ಲಿ ಪಾಲ್ಗೊಂಡಿದ್ದ ಡೆಪ್ಯುಟಿ ಗವರ್ನರ್ ಟಿ ರಬಿ ಶಂಕರ್, ಭಾರತೀಯ ರಿಸರ್ವ್ ಬ್ಯಾಂಕ್ ಅಥವಾ ಎಲ್ಲಾ ಕೇಂದ್ರೀಯ ಬ್ಯಾಂಕ್‌ಗಳು, ಸರ್ಕಾರಗಳು ಮತ್ತು ಇತರ ಅಧಿಕಾರಿಗಳು ಇದ್ದಕ್ಕಿದ್ದಂತೆ ಯಾಕೆ ತಂತ್ರಜ್ಞಾನದಲ್ಲಿ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ […]
ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್ : ನೀಟ್ ಪರೀಕ್ಷೆಗೆ ಅರ್ಹತಾ ಅಂಕ ಶೂನ್ಯ ವಿಚಾರ

ಬೆಂಗಳೂರು: 2023 ನೇ ಸಾಲಿನ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (ನೀಟ್) ವೈದ್ಯಕೀಯ ಹಾಗೂ ದಂತವೈದ್ಯಕೀಯ ಪಿ.ಜಿ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಅರ್ಹತಾ ಅಂಕವನ್ನು ಶೂನ್ಯಕ್ಕೆ ಇಳಿಕೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಹುಬ್ಬಳ್ಳಿ ಮೂಲದ ವೈದ್ಯ ಹಾಗೂ ವಕೀಲ ಡಾ. ವಿನೋದ್ ಜಿ. ಕುಲಕರ್ಣಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ […]
ಬೆಂಗಳೂರು : ಜ್ಯುವೆಲರಿ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಐಟಿ ದಾಳಿ

ಬೆಂಗಳೂರು: ಕಳೆದ ವಾರ ನಗರದ ಹಲವು ಉದ್ಯಮಿಗಳ ಕಚೇರಿ, ಮನೆಗಳ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಇಂದೂ ಸಹ ತಮ್ಮ ಪರಿಶೀಲನೆ ಮುಂದುವರೆಸಿದ್ದಾರೆ.ನಗರದ ಸುಮಾರು ಹತ್ತಕ್ಕೂ ಅಧಿಕ ಕಡೆಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.ಬೆಂಗಳೂರಲ್ಲಿ ಉದ್ಯಮಿಗಳ ಮನೆ, ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ, ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ. ಆದಾಯ ತೆರಿಗೆ ವಂಚನೆ ಆರೋಪ ಕಂಡು ಬಂದ ಹಿನ್ನೆಲೆಯಲ್ಲಿ ಚಿನ್ನ ಗಿರವಿ ಮತ್ತು ಖರೀದಿ ಮಾಡುವ […]
ಕಳೆದ 9 ತಿಂಗಳಲ್ಲಿ 12,615 ಸೈಬರ್ ಕ್ರೈಂ ಪ್ರಕರಣಗಳು ದಾಖಲು : ಬೆಂಗಳೂರು

ಬೆಂಗಳೂರು : ಇತ್ತೀಚಿನ ವರ್ಷಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳ ಸಂಖ್ಯೆ ಅಧಿಕವಾಗುತ್ತಿದೆ. ಇದಕ್ಕೆ ಪೂರಕ ಎಂಬಂತೆ ಕಳೆದ 9 ತಿಂಗಳಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 12,615 ಪ್ರಕರಣಗಳು ವರದಿಯಾಗಿದ್ದು, ಸುಮಾರು 470 ಕೋಟಿ ರೂಪಾಯಿ ವಂಚನೆಯಾಗಿದೆ.ರಾಜಧಾನಿಯಲ್ಲಿ ದಾಖಲಾಗಿದ್ದ 12,615 ಪ್ರಕರಣಗಳನ್ನು ತನಿಖೆ ನಡೆಸಿ ವಿವಿಧ ಬ್ಯಾಂಕ್ಗಳ ಮುಖಾಂತರ 201.83 ಕೋಟಿ ರೂ. ಹಣ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಸೈಬರ್ ಖದೀಮರಿಂದ 28.40 ಕೋಟಿ ವಶಪಡಿಸಿಕೊಳ್ಳಲಾಗಿದೆ. ಈ ಪೈಕಿ 27.68 ಕೋಟಿ ವಾರಸುದಾರರಿಗೆ ಪೊಲೀಸರು ಹಿಂತಿರುಗಿಸಿದ್ದಾರೆ.ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ […]