ತೀವ್ರ ಶೋಧ: ಮಹಾರಾಷ್ಟ್ರ, ತಮಿಳುನಾಡು ಸೇರಿ ಆರು ರಾಜ್ಯಗಳಲ್ಲಿ ಎನ್​ಐಎ ಕಾರ್ಯಾಚರಣೆ

ಚೆನೈ/ ಮುಂಬೈ : ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ್ದಾರೆ. ದೇಶದ ಆರು ರಾಜ್ಯಗಳಲ್ಲಿ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ.ಮಹಾರಾಷ್ಟ್ರ, ಉತ್ತರಪ್ರದೇಶ, ರಾಜಸ್ಥಾನ , ದೆಹಲಿ, ತಮಿಳುನಾಡು ಮತ್ತು ಮಧ್ಯಪ್ರದೇಶದಲ್ಲಿ ಎನ್​ಐಎ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ. ಎನ್​ಐಎ ಅಧಿಕಾರಿಗಳು ನಿಷೇಧಿತ ಸಂಘಟನೆ ಪಾಪ್ಯುಲರ್​ ಫ್ರಂಟ್​ ಆಫ್​ ಇಂಡಿಯಾ (ಪಿಎಫ್​ಐ) ಮುಖಂಡರ ಮನೆ ಮೇಲೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ವರ್ಷ ಪ್ರಧಾನಿ ನರೇಂದ್ರ […]

ತಮಿಳುನಾಡಿನ 8 ಜಿಲ್ಲೆಗಳಲ್ಲಿ ಬಂದ್​ಗೆ ಕರೆ : ಕಾವೇರಿ ನೀರು ಹಂಚಿಕೆ ವಿವಾದ

ನಾಗಪಟ್ಟಣಂ (ತಮಿಳುನಾಡು) : ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆ ಬಗೆಹರಿಯುವಂತೆ ಕಾಣುತ್ತಿಲ್ಲ. ಇಂದು ತಮಿಳುನಾಡಿನ 8 ಜಿಲ್ಲೆಗಳಲ್ಲಿ ಬಂದ್​ಗೆ ಕರೆ ನೀಡಲಾಗಿದೆ. ನಾಗಪಟ್ಟಣಂ ಜಿಲ್ಲೆಯಲ್ಲಿ ಸುಮಾರು 12,000 ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳನ್ನು ಬಂದ್​ ಮಾಡಿರುವ ವ್ಯಾಪಾರಿಗಳು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳು ಸುದೀರ್ಘ ಹಗ್ಗಜಗ್ಗಾಟ ನಡೆಸುತ್ತಿವೆ. ಈ ಬೆನ್ನಲ್ಲೇ ಇಂದು ತಮಿಳುನಾಡಿನ 8 ಜಿಲ್ಲೆಗಳಲ್ಲಿ ಬಂದ್​ಗೆ […]

ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಜೀರ್ಣೋದ್ಧಾರ

ತುಮಕೂರು : ಕಲ್ಪತರು ನಾಡದ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಶುಕ್ರವಾರದ ಕೋಟೆ ಬಾಗಿಲು ಹೊಸ ಬೀದಿಯ ಇತಿಹಾಸ ಪ್ರಸಿದ್ಧ ಶ್ರೀ ಮಹಾಲಕ್ಷ್ಮೀ ಮದ್ದರ ಲಕ್ಕಮ್ಮ ದೇವಾಲಯವು ದೊಡ್ಡಣ್ಣ ಗುಡ್ಡೆಯ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಧರ್ಮದರ್ಶಿಗಳಾದ ಪರಮಪೂಜ್ಯ ಶ್ರೀ ರಮಾನಂದ ಗುರೂಜಿಯವರ ಮಾರ್ಗದರ್ಶನದಲ್ಲಿ ಜೀರ್ಣೋದ್ಧಾರಗೊಳ್ಳಲಿದೆ. ಆ ಪ್ರಯುಕ್ತ ನಡೆದ ಸಭೆಯಲ್ಲಿ ಮದರ ಲಕ್ಕಮ್ಮ ಟ್ರಸ್ಟ್ ಹಾಗೂ ಜೀರ್ಣೋದ್ದಾರ ಸಮಿತಿಯ ಗೌರವ ಅಧ್ಯಕ್ಷರನ್ನಾಗಿ ದೇವಾಲಯದ ಭಕ್ತರು ಮತ್ತು ಆಡಳಿತ ಮಂಡಳಿಯ ಸದಸ್ಯರುಗಳು ಸರ್ವಾನುಮತದಿಂದ ಪರಮ ಪೂಜ್ಯ ಶ್ರೀ ಗುರೂಜಿರವರನ್ನು […]

ಕೆಎಂಎಫ್-24ರಲ್ಲಿ 3ನೇ ಸ್ಥಾನ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾಧನೆ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ . ಕೆಎಂಎಫ್ (ಕರ್ನಾಟಕ ಮುನ್ಸಿಪಲ್ ಫೈನಾನ್ಸ್)-24 ಆನ್‌ಲೈನ್ ಅಪ್ಲಿಕೇಷನ್ ಪ್ರಕ್ರಿಯೆಯಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯು ರಾಜ್ಯದಲ್ಲಿ 3ನೇ ಸ್ಥಾನ ಲಭಿಸಿದೆ.ಈ ನಿಟ್ಟಿನಲ್ಲಿ ಕೆಎಂಎಫ್​-24ರಲ್ಲಿ ಮೂರನೇ ಸ್ಥಾನ ಗಿಟ್ಟಿಸಿಕೊಂಡು ಉತ್ತಮ ಸಾಧನೆ ಮಾಡಿದೆ. ಅವಳಿ ನಗರದ ಎಲ್ಲ ಸ್ಥಿರಾಸ್ತಿಗಳನ್ನು ಡಿಜಿಟಲೀಕರಣಗೊಳಿಸುವ ಕೆಎಂಎಫ್ (ಕರ್ನಾಟಕ ಮುನ್ಸಿಪಲ್ ಫೈನಾನ್ಸ್)-24 ಆನ್‌ಲೈನ್ ಅಪ್ಲಿಕೇಷನ್ ಪ್ರಕ್ರಿಯೆಯಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯು ರಾಜ್ಯದಲ್ಲಿ 3ನೇ ಸ್ಥಾನ ಪಡೆದುಕೊಂಡಿದೆ. 3,52,459 […]

ಡಿಸಿಎಂ ಡಿ ಕೆ ಶಿವಕುಮಾರ್ : ರಾಜ್ಯಾದ್ಯಂತ ಪಟಾಕಿ ಗೋದಾಮುಗಳ ಸುರಕ್ಷತಾ ಸಮೀಕ್ಷೆ

ಬೆಂಗಳೂರು: ರಾಜ್ಯಾದ್ಯಂತ ಇರುವ ಪಟಾಕಿ ಗೋದಾಮುಗಳ ಸರ್ವೆ ನಡೆಸಿ, ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ‌ ಕೆ ಶಿವಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿರುವ ಪಟಾಕಿ ಗೋದಾಮುಗಳಿಗೆ ಸುರಕ್ಷತೆ ಹಾಗೂ ಪರಿಶೀಲನೆ ಮಾಡಲು ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗಳಿಗೆ ನೋಟಿಸ್​ ನೀಡಿ ಸೂಚನೆ ನೀಡಿರುವುದಾಗಿ ಡಿಸಿಎಂ ಡಿ ಕೆ ಶಿವಕುಮಾರ್​ ತಿಳಿಸಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು, ಇನ್ನು ಮುಂದೆ ಯಾವುದೇ ಅವಘಡ ಆಗದಂತೆ ಎಚ್ಚರವಹಿಸಲಾಗುವುದು. ರಾಜ್ಯದಲ್ಲಿ ಇರುವ ಪಟಾಕಿ ಗೋದಾಮುಗಳಿಗೆ ಸುರಕ್ಷತೆ ಹಾಗೂ ಪರಿಶೀಲನೆ […]